ಪಟ್ಟಿ ಪ್ರಕಟ ವಿಳಂಬ; ಬಂಡಾಯ ಹತ್ತಿಕ್ಕಲು ಪಕ್ಷಗಳ ತಂತ್ರ !

ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯದಿನ

Team Udayavani, Oct 30, 2019, 4:33 AM IST

r-18

ಮಹಾನಗರ: ಮಹಾನಗರ ಪಾಲಿಕೆಗೆ ನಡೆಯುವ ಮಹತ್ವದ ಚುನಾವಣೆ ಸಂಬಂಧ ನಾಮಪತ್ರ ಸಲ್ಲಿಕೆಗೆ ಅ. 31 ಕೊನೆಯ ದಿನವಾದರೂ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸಹಿತ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಇನ್ನೂ ಕಗ್ಗಂಟಾಗಿದೆ.

ಒಂದೆಡೆ ಅಭ್ಯರ್ಥಿಗಳ ಆಯ್ಕೆ ಸಮಸ್ಯೆ ಆಗುತ್ತಿರುವುದರಿಂದ ಅದನ್ನು ಸಮರ್ಥವಾಗಿ ಎದುರಿಸುವುದು, ಕೈ ತಪ್ಪಿದ ಅಭ್ಯರ್ಥಿ-ಬೆಂಬಲಿಗರನ್ನು ಸಮಾಧಾನಿಸಲು ಪಕ್ಷಗಳು ಗಮನ ನೀಡುತ್ತಿದೆ. ಹೀಗಾಗಿ ಇಂದು-ನಾಳೆ ಮಂಗಳೂರಿನ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ.

ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳು ಕೊನೆಯ ಕ್ಷಣದಲ್ಲಿ ಅಭ್ಯರ್ಥಿ ಹೆಸರು ಆಯ್ಕೆ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನ ನಾಮಪತ್ರ ಸಲ್ಲಿಕೆಯ ಸಂಖ್ಯೆಯೂ ದುಪ್ಪಟ್ಟಾಗಲಿದೆ. ಬಿಜೆಪಿ 35 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರಲ್ಲಿಯೇ ಹಲವು ವಾರ್ಡ್‌ನಲ್ಲಿ ಭಿನ್ನ ಸ್ವರ ಕೇಳಿಬಂದಿದ್ದು, ಇನ್ನುಳಿದ ವಾರ್ಡ್‌ಗಳ ಅಭ್ಯರ್ಥಿ ಆಯ್ಕೆಯನ್ನು ಮತ್ತಷ್ಟು ಕಗ್ಗಂಟಾಗಿಸಿದೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾದ ಕಾರಣದಿಂದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಮಪತ್ರ ಸಲ್ಲಿಕೆಯ ಕೊನೆಯ ದಿನಕ್ಕಿಂತ ಮುನ್ನಾ ದಿನ ಪಟ್ಟಿ ಬಿಡುಗಡೆ ಮಾಡಲಿದೆ.

ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ಸುಮಾರು 10 ದಿನಗಳು ಕಳೆಯುತ್ತಾ ಬಂದಿದ್ದರೂ ನಾಮ ಪತ್ರ ಸಲ್ಲಿಕೆಗೆ ಬಾಕಿ ಇರುವ ಒಂದೆರಡು ದಿನದಲ್ಲಿ ಅಭ್ಯರ್ಥಿ ಘೋಷಣೆಗೆ ರಾಜಕೀಯ ಪಕ್ಷಗಳು ಮನಸ್ಸು ಮಾಡಿ ರುವುದು ಅಸಮಾಧಾನದ ಸುಳಿವನ್ನು ಜಗಜ್ಜಾಹಿರು ಮಾಡಿದಂತಾಗಿದೆ. ಮೀಸಲಾತಿಯಿಂದ ಸ್ಥಾನ ಕೈತಪ್ಪಿದ ವರು ಪರ್ಯಾಯ ವಾರ್ಡ್‌ ನೆಚ್ಚಿಕೊಂಡಿರುವ ಹಿನ್ನೆಲೆಯಲ್ಲಿಯೇ ಹೆಚ್ಚು ಪೈಪೋಟಿಗೆ ಕಾರಣ ಎನ್ನಲಾಗುತ್ತಿದೆ.

ಬಿಜೆಪಿಯು 35 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಸಂಜೆ ಪ್ರಕಟಿಸಿ, ಸಾಧ್ಯಾಸಾಧ್ಯತೆಗಳ ಬಗ್ಗೆ ಕಣ್ಣಿ ಡುವ ತಂತ್ರ ರೂಪಿಸಿತ್ತು. 60 ವಾರ್ಡ್‌ಗಳಿಗೂ ಅಭ್ಯರ್ಥಿ ಆಯ್ಕೆ ಮಾಡಲಾ ಗಿತ್ತಾ ದರೂ ಒಮ್ಮೆಲೇ ಎಲ್ಲ ವಾರ್ಡ್‌ನ ಅಭ್ಯರ್ಥಿ ಆಯ್ಕೆ ಘೋಷಿಸಿದರೆ ಅಸಮಾ ಧಾನ ತಾರ ಕಕ್ಕೇ ರುವ ಸಾಧ್ಯತೆ ಮನಗಂಡ ಬಿಜೆಪಿ ಕಾದುನೋಡುವ ಸೂತ್ರಕ್ಕೆ ಮುಂದಾ ಗಿತ್ತು. ಹೀಗಾಗಿ ತೀವ್ರ ಪೈಪೋಟಿ ಇಲ್ಲದ 35 ವಾರ್ಡ್‌ನ ಅಭ್ಯರ್ಥಿಗಳ ಪಟ್ಟಿ ಯನ್ನು ಪ್ರಕಟಿ ಸಲಾಗಿದೆ. ಉಳಿದ ಅಭ್ಯರ್ಥಿ ಗಳ ಹೆಸರು ಘೋಷಣೆ ಇದೀಗ ಪಕ್ಷಕ್ಕೆ ಬಹ ಳಷ್ಟು ಜಟಿಲವಾಗಿದೆ. ಸುಮಾರು 10ರಷ್ಟು ವಾರ್ಡ್‌ಗಳಲ್ಲಿ ಅಭ್ಯರ್ಥಿಗಳ ಸಂಖ್ಯೆ ತಲಾ ಮೂರಕ್ಕಿಂತ ಅಧಿಕವಿರುವ ಕಾರಣದಿಂದ ಅಂತಿಮ ಆಯ್ಕೆಯೇ ಕಠಿಣವಾಗಿತ್ತು.

“ಸಮಾಧಾನ ಮೀಟಿಂಗ್‌’!
ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ಗೊಳ್ಳುತ್ತಿದ್ದಂತೆ 5-6 ವಾರ್ಡ್‌ಗಳ ಆಕಾಂಕ್ಷಿ ಗಳಿಂದ, ಬೆಂಬಲಿಗರಿಂದ ಅಸಮಾಧಾನದ ಮಾತು ಕೇಳಿಬಂದಿವೆ. ವಾರ್ಡ್‌ ಬಿಜೆಪಿ ಸಮಿತಿ ಸಭೆಯಲ್ಲಿ ಆಯ್ಕೆಗೊಂಡ ಹೆಸರು ಪಟ್ಟಿಯಲ್ಲಿ ಬಿಡುಗಡೆಯಾಗದ ಬಗ್ಗೆ ಕೆಲವು ಅಭ್ಯರ್ಥಿಗಳು ಪಕ್ಷದ ಪ್ರಮುಖರಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಹೀಗಾಗಿ ಅವರನ್ನು ಸಮಾಧಾನಿಸುವ ಕೆಲಸ ಪಕ್ಷದ ಕಚೇರಿಯಲ್ಲಿ ಮಂಗಳವಾರ ಬಿರು ಸಿನಿಂದ ನಡೆದಿದೆ. ಅದರಲ್ಲಿಯೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಬಿಜೆಪಿ ಕಚೇರಿಯಲ್ಲಿ ಮಂಗಳ ವಾರ ಇದ್ದ ಹಿನ್ನೆಲೆಯಲ್ಲಿ ಅಸಮಾಧಾನ ತಿಳಿಮಾಡುವ ಕೆಲಸ ನಡೆದಿದೆ. ಈ ಮಧ್ಯೆ ಜೆಡಿಎಸ್‌ ಕೂಡ ಅಭ್ಯರ್ಥಿ ಆಯ್ಕೆಯ ಪಟ್ಟಿಯನ್ನು ಬುಧವಾರ ಪ್ರಕಟಿಸಲು ನಿರ್ಧರಿಸಿದೆ. ಜೆಡಿಎಸ್‌ ರಾಜ್ಯ ಸಮಿತಿ ಪ್ರಮುಖರು ಪಟ್ಟಿ ಪ್ರಕಟನೆ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರಿಗೆ ಆಗಮಿಸಲಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌; ಇಂದು ಸಂಜೆ ಅಭ್ಯರ್ಥಿಗಳ ಪಟ್ಟಿ
ಜಿಲ್ಲಾ ಕಾಂಗ್ರೆಸ್‌ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಬಂಡಾಯ ಸಾಧ್ಯತೆಗಳನ್ನು ಮಟ್ಟಹಾಕುವ ಕಾರ್ಯತಂತ್ರ ಅನುಸರಿಸುತ್ತಿದೆ. ಇದಕ್ಕಾಗಿ ಪಟ್ಟಿಯನ್ನು ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿ ಇರುವಾಗ ಪ್ರಕಟಿಸಲು ನಿರ್ಧರಿಸಿದೆ. ಬುಧವಾರ ಸಂಜೆ ಕಾಂಗ್ರೆಸ್‌ ಪಕ್ಷದ ವೀಕ್ಷಕರಾದ ವಿ.ಆರ್‌. ಸುದರ್ಶನ್‌, ಯು.ಬಿ. ವೆಂಕಟೇಶ್‌ ಆಗಮಿಸಿ ಪಟ್ಟಿ ಪ್ರಕಟಿಸಲಿದ್ದಾರೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು (ಇಂದು ಹೊರತುಪಡಿಸಿ) ಒಂದು ದಿನ ಮಾತ್ರ ಬಾಕಿ ಇದೆ. ಈ ವೇಳೆ ಅವಕಾಶ ವಂಚಿತರಾಗುವ ಅಭ್ಯರ್ಥಿಗಳು ಬಂಡಾಯ ಎದ್ದರೂ ಅವರಿಗೆ ನಾಮಪತ್ರ ಸಲ್ಲಿಸಲು ಅವಕಾಶವಾಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿದೆ. ಕಾಂಗ್ರೆಸ್‌ ಸಿದ್ಧಪಡಿಸಿದ ಪಟ್ಟಿಯ ಸುಳಿವು ಕೆಲವರಿಗೆ ದೊರೆತಿದ್ದು, ಪರಿಣಾಮವಾಗಿ ಅಸಮಾಧಾನ ಈಗಾಗಲೇ ಹೊಗೆಯಾಡಲಾರಂಭಿಸಿದೆ.

-  ದಿನೇಶ್‌ ಇರಾ

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.