‘ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬಾಳಬೇಕು’
Team Udayavani, Aug 17, 2018, 1:03 PM IST
ಪುತ್ತೂರು: ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರ ಅಲ್ಲ. ಇದು ನಮ್ಮ ಜವಾಬ್ದಾರಿ. ಬಲಿದಾನ ಮಾಡಿದ ದೇಶಭಕ್ತ ಹೋರಾಟಗಾರರನ್ನೆಲ್ಲ ಸ್ಮರಿಸಿ ಅವರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬಾಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು. ಪುತ್ತೂರು ನಾರಾಯಣ ಗುರು ಸ್ವಾಮಿ ಸಭಾಭವನದಲ್ಲಿ ನಡೆದ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಯೋಧರನ್ನು ಸಮ್ಮಾನಿಸಲಾಯಿತು. ಸಮ್ಮಾನಿತ ಯೋಧರ ಪರವಾಗಿ ಸುರೇಶ್ ಮಾತನಾಡಿದರು. ಆಡಳಿತ ಮಂಡಳಿ ಸದಸ್ಯ ಸುರೇಶ್ ಶೆಟ್ಟಿ ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡ ಸ್ಪರ್ಧೆಗಳ ವಿಜೇತರನ್ನು ಗೌರವಿಸಲಾಯಿತು. ವಿಜೇತರ ಪಟ್ಟಿಯನ್ನು ಉಪನ್ಯಾಸಕರಾದ ಗೀತಾ ಹಾಗೂ ದುರ್ಗಾಪರಮೇಶ್ವರ್ ವಾಚಿಸಿದರು.
ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯ ಪ್ರಾಚಾರ್ಯೆ ರಾಜಶ್ರೀ ನಟ್ಟೋಜ, ವಸತಿಯುತ ಪ.ಪೂ. ವಿದ್ಯಾಲಯದ ಪ್ರಾಚಾರ್ಯ ಶಂಕರ ನಾರಾಯಣ ಭಟ್, ಪ್ರಾಚಾರ್ಯೆ ಸುಜನಿ ಬೋರ್ಕರ್, ವೆಂಕಟೇಶ್ ಭಟ್ ಉಪಸ್ಥಿತರಿದ್ದರು. ಧ್ವಜಾರೋಹಣದ ಅನಂತರ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ವಿದ್ಯಾರ್ಥಿನಿ ಸಾಯಿಲಕ್ಷ್ಮೀ ಹಾಗೂ ಬಳಗದವರು ಪ್ರಾರ್ಥಿಸಿದರು. ವಿದ್ಯಾರ್ಥಿ ನಾಯಕ ಧೀರಜ್ ಸ್ವಾಗತಿಸಿ, ಅಂಬಿಕಾ ವಸತಿಯುತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕಿ ಗೌತಮಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.