Bantwala: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು
Team Udayavani, Feb 25, 2024, 8:54 AM IST
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಫೆ.25ರ ಭಾನುವಾರ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ.
ಆಲಡ್ಕ ನಿವಾಸಿ ಆಶ್ರಫ್ (32) ಮೃತಪಟ್ಟ ಯುವಕ.
ಸ್ನೇಹಿತನಿಗೆ ಸಹಾಯ ಮಾಡಲು ಹೋದ ವ್ಯಕ್ತಿಯ ಪ್ರಾಣಕ್ಕೆ ಕುತ್ತು ತಂದಿದೆ. ಆಲಡ್ಕ ನಿವಾಸಿ ತನ್ವೀರ್, ಆಶ್ರಫ್ ಅವರ ಸ್ನೇಹಿತರಾಗಿದ್ದು, ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತನಿಗೆ ಡ್ರಾಫ್ ಕೊಡುವ ಉದ್ದೇಶದಿಂದ ತನ್ನ ಸ್ಕೂಟರ್ ನಲ್ಲಿ ಬಿಸಿರೋಡಿಗೆ ತೆರಳಿದ್ದ.
ಬೆಳಿಗ್ಗೆ ಸುಮಾರು 5.30 ರ ವೇಳೆ ಆಶ್ರಫ್ ಕೈಕಂಬದಲ್ಲಿರುವ ತರಕಾರಿ ಅಂಗಡಿಗೆ ಇನ್ನೇನು ಸ್ನೇಹಿತ ತನ್ವೀರ್ ನ್ನು ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಖಾಲಿ ಮಾಡಿ ವಾಪಾಸ್ ಹೋಗುವ ಲಾರಿಯ ಚಾಲಕ ಲಾರಿಯನ್ನು ಅಜಾಗರೂಕತೆಯಿಂದ ಹಿಂಬದಿಗೆ ಚಲಿಸಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡ ಆಶ್ರಫ್ ನನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೈಕಂಬದಲ್ಲಿರುವ ರಖಂ ತರಕಾರಿ ಅಂಗಡಿಯ ಮುಂಭಾಗದಲ್ಲಿ ಅನೇಕ ಬಾರಿ ಅಪಘಾತಗಳು ನಡೆದು ಪ್ರಾಣ ಹಾನಿಯಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇಂದು ಘಟನಾ ಸ್ಥಳದಲ್ಲಿ ಕೆಲಹೊತ್ತು ಸೇರಿದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.