ಕಡಬ: ಸತತ 3 ವರ್ಷ ಗುರಿ ಮೀರಿದ ಸಾಧನೆ

 ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ

Team Udayavani, Apr 16, 2023, 1:56 PM IST

ಕಡಬ: ಸತತ 3 ವರ್ಷ ಗುರಿ ಮೀರಿದ ಸಾಧನೆ

ಕಡಬ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಗ್ರಾ.ಪಂ.ಗಳ ಮೂಲಕ ಗ್ರಾಮೀಣ ಭಾಗದ ಜನರ ಕೈ ಹಿಡಿದಿದೆ ಎನ್ನುವುದಕ್ಕೆ ಕಳೆದ ಮೂರು ವರ್ಷ ಸರಕಾರ ನೀಡಿದ್ದ ಮಾನವ ದಿನಗಳ ಗುರಿಯನ್ನು ಸಾಧಿಸುವ ಮೂಲಕ ಕಡಬ ತಾಲೂಕು ಗುರಿ ಮೀರಿದ ಸಾಧನೆಯನ್ನು ಮಾಡಿರುವುದೇ ಸಾಕ್ಷಿ.

ರಾಜ್ಯ ಸರಕಾರ 2022-23ನೇ ಆರ್ಥಿಕ ವರ್ಷದಲ್ಲಿ ಕಡಬ ತಾಲೂಕಿಗೆ 2,30,509 ಮಾನವ ದಿನ ಸೃಜನೆಯ ಗುರಿಯನ್ನು ನಿಗದಿಪಡಿಸಿತ್ತು. ಆದರೆ ತಾಲೂಕು 2,59,667 ಮಾನವ ದಿನಗಳನ್ನು ಸೃಜಿಸುವ ಮೂಲಕ ಶೇ. 113 ಗುರಿಯನ್ನು ಸಾಧಿಸಿದೆ. 21 ಗ್ರಾ.ಪಂ.ಗಳ ಮೂಲಕ ಮಹಾತ್ಮಾ¾ ಗಾಂಧಿ ನರೇಗಾ ಯೋಜನೆಯಡಿ ಅಕುಶಲ ಉದ್ಯೋಗವನ್ನು ಹಾಗೂ ಗ್ರಾಮೀಣ ಜನತೆಯ ಜೀವನೋಪಾಯಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಅರ್ಹ ಫಲಾನುಭವಿಗಳಿಗೆ ನೀಡುವ ಮೂಲಕ ಹಾಗೂ ಗ್ರಾಮೀಣ ಮೂಲ ಸೌಕರ್ಯಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಂಡು ಗುರಿ ಮೀರಿದ ಸಾಧನೆ ಮಾಡಿದೆ.

ತಾಲೂಕು ಕಳೆದ ಆರ್ಥಿಕ ವರ್ಷದಲ್ಲಿ 2,78,067ಮಾನವ ದಿನಗಳನ್ನು ಸೃಜಿಸುವ ಮೂಲಕ ಶೇ. 139 ಗುರಿ ಮೀರಿದ ಸಾಧನೆಯನ್ನು ಮಾಡಿತ್ತು. ಈ ಬಾರಿ ವಿಶೇಷವಾಗಿ ಗೋಳಿತೊಟ್ಟು, ಶಿರಾಡಿ, ಬೆಳಂದೂರು, ಸವಣೂರು ಗ್ರಾ.ಪಂ.ಗಳು ಹೆಚ್ಚಿನ ಮಾನವ ದಿನಗಳನ್ನು ಸೃಜಿಸಿವೆ.

ಗ್ರಾ. ಪಂ. ವಾರು ಪ್ರಗತಿ
ಈ ಬಾರಿ ಐತ್ತೂರು 3,731, ಆಲಂಕಾರು 15,699, ಬಳ್ಪ 7,610, ಬೆಳಂದೂರು 17,725, ಬಿಳಿನೆಲೆ 11,344, ಗೋಳಿತೊಟ್ಟು 20,940, ಕಾಣಿಯೂರು 9,542, ಕೌಕ್ರಾಡಿ 12,870, ಕೊçಲ 11,266, ಕೊಂಬಾರು 5,432, ಕೊಣಾಜೆ 3,778, ಕುಟ್ರಾಪಾಡಿ 16,026, ಮರ್ದಾಳ 8,402, ನೆಲ್ಯಾಡಿ 14,070, ನೂಜಿಬಾಳ್ತಿಲ 14,237, ಪೆರಾಬೆ 13,332, ರಾಮಕುಂಜ 11,159, ಸವಣೂರು 17,296, ಶಿರಾಡಿ 18,525, ಸುಬ್ರಹ್ಮಣ್ಯ 14,090, ಎಡಮಂಗಲ ಗ್ರಾ.ಪಂ. 12,593 ಮಾನವ ದಿನಗಳನ್ನು ಸೃಜಿಸುವ ಮೂಲಕ ಗ್ರಾಮೀಣ ಜನತೆಗೆ ಉದ್ಯೋಗ ನೀಡವುದರ ಜತೆಗೆ ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ಕೆಲಸವಾಗಿದೆ. ತಾಲೂಕಿನಲ್ಲಿ 17,146 ಕುಟುಂಬಗಳು ನರೇಗಾ ಯೋಜನೆಯ ಉದ್ಯೋಗ ಚೀಟಿ ಪಡೆದುಕೊಂಡಿವೆ. ಅದರಲ್ಲಿ ಈ ಬಾರಿ 7,485 ಕುಟುಂಬಗಳು ಸಕ್ರಿಯವಾಗಿ ಯೋಜನೆಯ ಪ್ರಯೋಜನ ಪಡೆದುಕೊಂಡಿವೆ.

ಕೃಷಿಗೆ ಒತ್ತು
ಗ್ರಾ.ಪಂ.ಗಳಲ್ಲಿ ವೈಯಕ್ತಿಕ ಕಾಮಗಾರಿ ಗಳಿಗೆ ಬೇಡಿಕೆ ಹೆಚ್ಚಿದ್ದು, ತೋಟಗಾರಿಕೆ, ಸೊÌàದ್ಯೋಗ, ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ವಿಷಯಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಅಡಿಕೆ, ತೆಂಗು, ಕಾಣುಮೆಣಸು, ಕೊಕ್ಕೊ, ಗೇರು, ವೀಳ್ಯದೆಲೆ, ಮಲ್ಲಿಗೆ ಕೃಷಿ ಹೀಗೆ ಸುಮಾರು 1,569 ತೋಟಗಾರಿಕೆ ಕಾಮಗಾರಿಗಳನ್ನು ಅನುಷ್ಠಾನಿಸಲಾಗಿದೆ. ಅವುಗಳಲ್ಲಿ 30 ಬಸಿ ಕಾಲುವೆ, 123 ಬಾವಿ, 29 ಆಡಿನ ಶೆಡ್‌, 330 ದನದ ಹಟ್ಟಿ, 14 ಹಂದಿ ಸಾಕಾಣೆ ಶೆಡ್‌, 77 ಕೋಳಿ ಶೆಡ್‌, 241 ಸೋಕ್‌ ಪಿಟ್‌, 4 ಕೃಷಿ ಹೊಂಡ, 507 ಶೌಚಾಲಯ, 18 ಎರೆಹುಳು ಗೊಬ್ಬರ ಘಟಕ, 18 ಕಡೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳು, 52 ಗೊಬ್ಬರ ಗುಂಡಿ ನಿರ್ಮಾಣ ಕಾಮಗಾರಿಗಳನ್ನು ನಡೆಸಲಾಗಿ ಒಟ್ಟು 3,012 ವೈಯಕ್ತಿಕ ಕಾಮಗಾರಿಗಳನ್ನು ತಾಲೂಕಿನಲ್ಲಿ ಅನುಷ್ಠಾನಿಸಲಾಗಿದೆ.

2023-24ರಿಂದ ದಿನಕ್ಕೆ 316 ರೂ. ಕೂಲಿ
ಪುರುಷ ಮತ್ತು ಮಹಿಳೆಯರಿಗೆ ಸಮಾನವೇತನ ನೀಡುವ ನಿಟ್ಟಿನಲ್ಲಿ ಈ ಬಾರಿ ದಿನವೊಂದಕ್ಕೆ 309 ರೂ. ಕೂಲಿ ನೀಡಲಾಗುತ್ತಿದ್ದು ಮುಂದಿನ ಆರ್ಥಿಕ ವರ್ಷದಿಂದ 316 ರೂ. ಕೂಲಿ ದೊರೆಯಲಿದೆ. 2023-24 ನೇ ಸಾಲಿನಲ್ಲಿ 7 ರೂ. ಕೂಲಿ ಮೊತ್ತ ಹೆಚ್ಚಳಗೊಳಿಸಿ ಕೇಂದ್ರ ಸರಕಾರ ಸುತ್ತೋಲೆ ಹೊರಡಿಸಿದೆ. ಯೋಜನೆಯಡಿ ಪುರುಷರಿಗೆ ಮತ್ತು ಮಹಿಳೆಯರಿಗೆ ಸಮಾನವೇತನ ನೀಡುತ್ತಿದ್ದು, ಮಹಿಳೆಯರಿಗೆ ಅದರಲ್ಲೂ ವಿಶೇಷವಾಗಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಸದಸ್ಯರಿಗೆ ಒತ್ತನ್ನು ನೀಡಲಾಗುತ್ತಿದೆ. ವಿಶೇಷವಾಗಿ ಪ್ರತೀ ಗ್ರಾ.ಪಂ.ಗಳಲ್ಲಿ ವಿಶೇಷ ಮಹಿಳಾ ಗ್ರಾಮ ಸಭೆ ಯಶಸ್ವಿಯಾಗಿ ನಡೆಸಿರುವ ಪರಿಣಾಮ ಕಳೆದ ವರ್ಷ ಶೇ. 47ರಷ್ಟಿದ್ದ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ಶೇ. 50ಕ್ಕೆ ಏರಿಕೆಯಾಗಿದೆ ಎನ್ನುತ್ತಾರೆ ಕಡಬ ತಾ.ಪಂ. ಸಹಾಯಕ ನಿರ್ದೇಶಕರು (ಗ್ರಾ.ಉ.) ಚೆನ್ನಪ್ಪ ಗೌಡ ಕಜೆಮೂಲೆ.

ಸದುಪಯೋಗಪಡಿಸಿಕೊಳ್ಳಿ
ತಾಲೂಕಿನಲ್ಲಿ ನರೇಗಾ ಯೋಜನೆಗೆ ಸಂಬಂಧಿಸಿದಂತೆ ಪ್ರತೀ ವರ್ಷ ಗುರಿಯನ್ನು ಸಾಧಿಸುವ ಕೆಲಸವಾಗುತ್ತಿವೆ. ಅದಕ್ಕೆ ಸಹಕರಿಸಿದ ಎಲ್ಲ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಸಿಬಂದಿಗೆ ಅಭಿನಂದನೆಗಳು. ಗ್ರಾಮೀಣ ಪ್ರದೇಶದ ಅರ್ಹ ಫಲಾನುಭವಿಗಳು ಇದರ ಸದುಪಯೋಗವನ್ನು ಮತ್ತಷ್ಟು ಪಡೆದುಕೊಳ್ಳಬೇಕು.
-ನವೀನ್‌ ಭಂಡಾರಿ,
ಕಾರ್ಯನಿರ್ವಾಹಕ ಅಧಿಕಾರಿ, ಕಡಬ ತಾ.ಪಂ.

- ನಾಗರಾಜ್‌ ಎನ್‌. ಕೆ.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.