Puttur ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು
Team Udayavani, Oct 21, 2023, 5:51 PM IST
ಬಡಗನ್ನೂರು: ಅರಿಯಡ್ಕ ಗ್ರಾಮದ ಬೈರಮೂಲೆಯಲ್ಲಿ ವ್ಯಕ್ತಿಯೋರ್ವ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅ. 21ರಂದು ಸಂಭವಿಸಿದೆ.
ಬೈರಮೂಲೆ ಕನ್ನ ಪಾಟಾಳಿಯವರ ಪುತ್ರ ಶಿವಪ್ರಸಾದ್ (40) ಮೃತಪಟ್ಟವರು. ಯಂತ್ರದ ಮೂಲಕ ತೋಟದ ಹುಲ್ಲು ತೆಗೆಯುವ ಕೆಲಸ ಮಾಡಿಕೊಂಡಿದ್ದರು. ಅ. 21ರಂದು ಸ್ಥಳೀಯ ಕುರಿಂಜ ಹೊಸಮನೆ ಚಂದ್ರಶೇಖರ ಮಣಿಯಾಣಿ ಅವರ ತೋಟಕ್ಕೆ ಕೆಲಸಕ್ಕೆ ತೆರಳಿದ್ದು ಅಲ್ಲಿ ಕೈ ಕಾಲು ತೊಳೆಯಲು ಕೆರೆಗೆ ಇಳಿದಿದ್ದರು ಎನ್ನಲಾದೆ. ಈ ವೇಳೆ ಆಯ ತಪ್ಪಿ ಕೆರೆಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಎಸ್ಐ ಧನಂಜಯ್ ಹಾಗೂ ಸಿಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುತ್ತೂರು ಅಗ್ನಿ ಶಾಮಕ ದಳದವರು ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.