Mani-Mysore Highway: ಸರಕಾರಿ ಬಸ್ ಢಿಕ್ಕಿ: ಸವಾರ ಸಾವು
Team Udayavani, Dec 16, 2023, 11:54 PM IST
ಪುತ್ತೂರು/ವಿಟ್ಲ: ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ಸರಕಾರಿ ಬಸ್‌ಗೆ ದ್ವಿಚಕ್ರ ವಾಹನವೊಂದು ಢಿಕ್ಕಿಯಾಗಿದ್ದು ಸವಾರ ಮೃತಪಟ್ಟಿದ್ದಾರೆ.
ಬಂಟ್ವಾಳ ಮೂಲದ ಅಹಮ್ಮದ್ ಆಶಿಕ್ ಅಕ್ಮಲ್ (18) ಮೃತಪಟ್ಟಿರುವ ಯುವಕ.
ಮಂಗಳೂರಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ ಸಾಧ್ಯವಾದಷ್ಟು ಎಡಬದಿಗೆ ಹೋದರೂ, ಕಬಕ ಕಡೆಯಿಂದ ಆಗಮಿಸಿದ ದ್ವಿಚಕ್ರ ವಾಹನ ಬಸ್‌ಗೆ ಬಂದು ಢಿಕ್ಕಿ ಹೊಡೆದು, ಬಸ್ ಚಕ್ರದಡಿಗೆ ಸಿಲುಕಿದ್ದಾರೆ.
ಬಸ್‌ನಲ್ಲಿ ಹೆಚ್ಚಿನ ಜನ ಇದ್ದ ಕಾರಣ ಮತ್ತಷ್ಟು ಬದಿಗೆ ಹೋಗುವ ಸಾಹಸ ಮಾಡಿಲ್ಲ ಎಂಬುದನ್ನು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸಿದ್ದು, ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಸ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೆದ್ದಾರಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ವಾಹನದಡಿ ಸಿಲುಕಿದ ಸವಾರನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಮೃತಪಟ್ಟಿರುವ ಖಚಿತವಾದ ಹಿನ್ನಲೆ ಸರಕಾರಿ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sulya: ಆರಂತೋಡು: ಚಿಕನ್ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ
Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.