ಸುಳ್ಯ: ಬಾರದ ವರ; ಮದುವೆ ರದ್ದು
Team Udayavani, Feb 10, 2023, 7:21 AM IST
ಸುಳ್ಯ: ಮದುವೆಗೆ ಎಲ್ಲ ಸಿದ್ಧತೆಗಳನ್ನು ನಡೆಸಿ ಮದುವೆ ಸಭಾಭವನದಲ್ಲಿ ವಧುವಿನ ಕಡೆಯವರು ಬಂದಿದ್ದರೂ, ವರ ಬಾರದ ಹಿನ್ನಲೆಯಲ್ಲಿ ಮದುವೆಯೊಂದು ರದ್ದಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಉಬರಡ್ಕ ಗ್ರಾಮದ ಯುವತಿಗೆ ಪುತ್ತೂರಿನ ಯುವಕನೊಂದಿಗೆ ಮದುವೆ ನಿಗದಿಯಾಗಿತ್ತು. ಗುರುವಾರ ಸುಳ್ಯದ ಪುರಭವನದಲ್ಲಿ ಮದುವೆ ನಡೆಯಬೇಕಾಗಿತ್ತು. ಮದುಮಗನ ಕಡೆಯಿಂದ ಜನ ಬಂದು ಪುರಭವನದ ಸಭಾಭವನ ಅಲಂಕಾರವೂ ನಡೆದಿತ್ತು. ಬುಧವಾರ ದಿನ ವಧುವಿನ ಮನೆಯಲ್ಲಿ ಡಿ.ಜೆ. ಅಳವಡಿಸಿ ಸಂಭ್ರಮಪಡಲಾಗಿತ್ತು. ಗುರುವಾರ ವಧುವಿನ ಕಡೆಯವರು ಮದುವೆಗಾಗಿ ಸುಳ್ಯದ ಪುರಭವನಕ್ಕೆ ಬಂದು ಸಿದ್ಧತೆ ನಡೆಸಿದ್ದರು. 500 ಮಂದಿಗೆ ಭೋಜನದ ವ್ಯವಸ್ಥೆಯನ್ನೂ ನಡೆಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ವರ ಕಾಣುತ್ತಿಲ್ಲ ಎಂಬ ಮಾಹಿತಿ ಹೊರಬಿದ್ದಿತ್ತು. ಆತನ ಫೋನ್ ನಂಬರಿಗೆ ಕರೆ ಮಾಡುವಾಗ ಸ್ವಿಚ್ ಆಫ್ ಬರುತ್ತಿತ್ತು ಎನ್ನಲಾಗಿದೆ.
ಠಾಣೆ ಮೆಟ್ಟಲೇರಿದ ಘಟನೆ:
ಘಟನೆಯಿಂದ ವಧುವಿನ ಕಡೆಯವರು ಆತಂಕದಿಂದ ಸುಳ್ಯ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಮದುವೆ ತಯಾರಿಯಲ್ಲಿದ್ದ ವರನಿಗೆ ಈ ಹಿಂದೆಯೇ ಮದುವೆಯಾಗಿದ್ದು, ಗಂಡ ಬೇರೆ ಮದುವೆಯಾಗಲು ಸಿದ್ಧತೆ ನಡೆಸಿರುವ ಬಗ್ಗೆ ಆತನ ಹೆಂಡತಿ ಬೆಳ್ಳಾರೆ ಪೊಲೀಸ್ ಠಾಣೆಗೆ ಮೌಖಿಕ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಯುವಕನನ್ನು ಠಾಣೆಗೆ ಕರೆಯಿಸಿ ಮುಚ್ಚಳಿಕೆ ಬರೆಸಿಕೊಂಡು ಪತ್ನಿ ಜತೆ ಕಳುಹಿಸಿಕೊಟ್ಟಿದ್ದರು ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಮದುವೆ ಹಾಲ್‌ನಲ್ಲಿ ವರನಿಗಾಗಿ ಕಾಯುತ್ತಿದ್ದವರು ಮದುವೆ ನಡೆಯುವುದಿಲ್ಲ ಎಂದು ತಿಳಿದು ಸಭಾಂಗಣದಿಂದ ತಮ್ಮ ಮನೆಯತ್ತ ತೆರಳಿದ್ದಾರೆ. ಸಿದ್ಧಗೊಂಡಿದ್ದ ಊಟವನ್ನು ಸ್ಥಳೀಯ ವಸತಿ ನಿಲಯಗಳಿಗೆ ನೀಡಲು ನಿರ್ಧರಿಸಿದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.