ಅಡಿಕೆ, ರಬ್ಬರ್ ಬೆಳೆಗಾರರಿಗೆ ಗರಿಷ್ಠ ಸಹಕಾರ
ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ವಿ. ಸುನೀಲ್ ಕುಮಾರ್ ಹೇಳಿಕೆ
Team Udayavani, Apr 9, 2019, 6:00 AM IST
ಸುಳ್ಯ: ಅಡಿಕೆ, ರಬ್ಬರ್ ಕೃಷಿಕರಿಗೆ ಬಿಜೆಪಿ ಸರಕಾರ ಗರಿಷ್ಠ ಸಹಕಾರ ನೀಡಿದೆ. ಹಾಗಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪದಲ್ಲಿ ಹುರುಳಿಲ್ಲ ಎಂದು ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಬಿಜೆಪಿ ಚುನಾವಣ ಪ್ರಚಾರ ಕಚೇರಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರದ್ದು ಹಿಟ್ ಆ್ಯಂಡ್ ರನ್ ಥರಹದ ವರ್ತನೆ. ಪ್ರಚಾರದ ಸಂದರ್ಭ ಒಂದೊಂದು ಕ್ಷೇತ್ರದಲ್ಲಿ ಒಂದೊಂದು ಸುಳ್ಳು ಹೇಳುತ್ತಾರೆ ಎಂದರು.
ಒಂದು ದೇಶ ಒಂದು ತೆರಿಗೆ ವ್ಯವಸ್ಥೆಯಲ್ಲಿ ತೈಲ ಉತ್ಪನ್ನಗಳು ಸೇರದಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಇದಕ್ಕೆ ಕೇಂದ್ರ ಸರಕಾರ ಜವಾಬ್ದಾರಿಯಲ್ಲ. ಜಿಎಸ್‌ಟಿ ಸಮಿತಿಯಲ್ಲಿ ಎಲ್ಲ ದೇಶಗಳ ಪ್ರತಿನಿಧಿಗಳಿರುತ್ತಾರೆ. ಎಲ್ಲರ ಒಪ್ಪಿಗೆ ಪಡೆದು ಇದನ್ನು ಜಾರಿ ಮಾಡಬೇಕಿದೆ ಎಂದು ಹೇಳಿದರು.
ಮೋದಿ ಹೆಸರಲ್ಲೇ ಮತ ಕೇಳುತ್ತೇವೆ
ಮೋದಿ ಹೆಸರು ಹೇಳಿ ಮತ ಕೇಳುತ್ತಾರೆ ಎಂದು ಕಾಂಗ್ರೆಸ್‌ನವರು ಟೀಕಿಸುತ್ತಿದ್ದಾರೆ. ಮೋದಿ ಅಂದರೆ ವ್ಯಕ್ತಿಯಲ್ಲ. ಒಂದು ಕಾರ್ಯಕ್ರಮ, ಒಂದು ಪರಿಶ್ರಮ, ಒಂದು ಪ್ರಾಮಾಣಿಕತೆ, ಒಂದು ನೇತೃತ್ವ, ಒಂದು ನವಭಾರತ. ಹೀಗಾಗಿ ಅವರ ಹೆಸರಿನಲ್ಲಿಯೇ ಮತ ಕೇಳುತ್ತೇವೆ. ಐದು ವರ್ಷಗಳ ಕಾರ್ಯ ಮುಂದುವರಿಕೆಗೋಸ್ಕರ ಪೂರ್ಣ ಬಹು ಮತದ ಸರಕಾರಕ್ಕೆ ಜನ ಆಶೀರ್ವಾದ ಮಾಡಬೇಕು ಎಂದು ಸುನೀಲ್ ಕುಮಾರ್ ಹೇಳಿದರು.
ಬಿಜೆಪಿಯ ಮನೆ ಮನೆ ಪ್ರಚಾರದ 2ನೇ ಹಂತದ ಅಭಿಯಾನ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎ. 10ರಿಂದ 3ನೇ ಹಂತದ ಅಭಿಯಾನ ನಡೆಯಲಿದೆ ಎಂದವರು ವಿವರಿಸಿದರು.
ಶಾಸಕ ಎಸ್. ಅಂಗಾರ, ಕ್ಷೇತ್ರ ಬೂತ್ ಪ್ರಭಾರಿ ಪ್ರತಾಪ್‌ಸಿಂಹ ನಾಯಕ್, ಕುಶಾಲಪ್ಪ ಗೌಡ, ಜಿ.ಪಂ. ಸದಸ್ಯ ಎಸ್.ಎನ್. ಮನ್ಮಥ, ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣ ಸಂಚಾಲಕ ಹರೀಶ್ ಕಂಜಿಪಿಲಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸುಬೋಧ್ ಶೆಟ್ಟಿ ಮೇನಾಲ, ಹಿಂದುಳಿದ ವರ್ಗ ವಿಭಾಗದ ಜಿಲ್ಲಾಧ್ಯಕ್ಷ ಸುರೇಶ್ ಕಣೆಮರಡ್ಕ, ವಿನಯ ಕುಮಾರ್ ಕಂದಡ್ಕ ಪತ್ರಿಕಾಗೋಷ್ಠಿಯಲ್ಲಿದ್ದರು.
ಮೋದಿ ಸಮಾವೇಶಕ್ಕೆ ಲಕ್ಷ ಜನ
ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಪರ ಚುನಾವಣಾ ಪ್ರಚಾರದ ಅಂಗವಾಗಿ ಎ. 13ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ವಿಜಯ ಸಂಕಲ್ಪ ಸಮಾವೇಶ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಒಂದು ಲಕ್ಷ ಕಾರ್ಯಕರ್ತರು ಇಲ್ಲಿ ಸೇರಲಿದ್ದಾರೆ. ಅಪರಾಹ್ನ 3.30ರೊಳಗೆ ಕಾರ್ಯಕರ್ತರು ಮೈದಾನ ತಲುಪಬೇಕು. ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ 15 ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿ ಯಾಗಲಿದ್ದಾರೆ ಎಂದು ಸುನೀಲ್ ಕುಮಾರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rajasthan: ಕಾಂಗ್ರೆಸ್ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು
Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ
Yamuna ನದಿಯಲ್ಲಿ ಡಾ| ಮನಮೋಹನ್ ಸಿಂಗ್ ಚಿತಾಭಸ್ಮ ವಿಸರ್ಜನೆ
Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.