“ಸಾಮಾಜಿಕ ಸಮಸ್ಯೆ ಪರಿಹರಿಸಲು ಗರಿಷ್ಠ ಪ್ರಯತ್ನ’

2ನೇ ಹೆಚ್ಚುವರಿ ಸಿವಿಲ್‌, ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ

Team Udayavani, May 28, 2019, 6:00 AM IST

w-13

ಪುತ್ತೂರು: ನ್ಯಾಯದ ನಿರೀಕ್ಷೆಯಲ್ಲಿ ಬರುವ ಜನರ ನಿರೀಕ್ಷೆಗೆ ಚ್ಯುತಿ ಬಾರದಂತೆ ನ್ಯಾಯ ಒದಗಿಸುವ ಜವಾಬ್ದಾರಿ ನ್ಯಾಯಾಲಯಕ್ಕಿದೆ. ನ್ಯಾಯಾಧೀಶರು ಮತ್ತು ವಕೀಲರು ಸೇರಿ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಹೇಳಿದರು.

ನೂತನವಾಗಿ ಪುತ್ತೂರಿಗೆ ಮಂಜೂರಾದ ಎರಡನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂ ಎಫ್‌ಸಿ ನ್ಯಾಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪುತ್ತೂರಿನಲ್ಲಿ ಅಧಿಕಾರ ಸ್ವೀಕರಿಸಿದ ಅವರು 150 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರಿನ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಣೆ ಅವಕಾಶ ಲಭಿಸಿರುವುದು ಖುಷಿ ನೀಡಿದೆ ಎಂದರು.

ಪಾರದರ್ಶಕ ನ್ಯಾಯ
ನ್ಯಾಯಾಧೀಶರು ಹಾಗೂ ನ್ಯಾಯವಾದಿ ಗಳು ಪರಸ್ಪರ ಸಹಕಾರ ಮನೋ ಭಾವದೊಂದಿಗೆ ಕೆಲಸ ನಿರ್ವಹಿಸುವ ಮೂಲಕ ನ್ಯಾಯಾಲಯ ವ್ಯವಸ್ಥೆಯ ಗೌರವ ಹೆಚ್ಚಿಸಬಹುದು. ಕ್ಲಪ್ತ ಹಾಗೂ ಪಾರದರ್ಶಕವಾಗಿ ನ್ಯಾಯ ಒದಗಿಸುವ ಆವಶ್ಯಕತೆ ಇಂದು ಇದೆ. ಕಲಿಕೆ ಎಂಬುದಕ್ಕೆ ಕೊನೆಯೇ ಇಲ್ಲದಿರುವುದರಿಂದ ಎಲ್ಲ ರಿಂದಲೂ ತಿಳಿದುಕೊಂಡು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಸಹಕಾರ ನಿರೀಕ್ಷೆ
ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾ ಧೀಶ ಮಂಜುನಾಥ್‌ ಮಾತನಾಡಿ, ನ್ಯಾಯಾಲಯ ವ್ಯವಸ್ಥೆಗೆ ಅಪಾರ ಗೌರವ ನೀಡುವ ಪುತ್ತೂರಿನಲ್ಲಿ ಕೆಲಸ ಮಾಡಲು ತುಂಬಾ ಖುಷಿ ಇದೆ. ವ್ಯವಸ್ಥೆಗೆ ತಪ್ಪಾಗುವಂತಹ ಯಾವುದೇ ಪ್ರಕರಣಗಳು ಇಲ್ಲಿ ನಡೆಯುವುದಿಲ್ಲ. ಇಂತಹ ಉತ್ತಮ ಸಹಕಾರವನ್ನು ಮುಂದೆಯೂ ನೀಡಬೇಕು ಎಂದು ವಿನಂತಿಸಿದರು.

ಕಲಾಪಕ್ಕೆ ಚಾಲನೆ
ಹಾಲಿ 5 ಕೋರ್ಟುಗಳಿರುವ ಪುತ್ತೂರಿಗೆ 6ನೇ ಕೋರ್ಟು ರೂಪದಲ್ಲಿ ಮಂಜೂರಾದ 2ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ವ್ಯವಸ್ಥೆಯನ್ನು ಮಿನಿ ವಿಧಾನಸೌಧದ ಬಳಿಯ ಮಧ್ಯಸ್ಥಿಕಾ ಕೇಂದ್ರದಲ್ಲಿ ನ್ಯಾಯಾಧೀಶ ರುಡಾಲ್ಫ್ ಪಿರೇರ ಅವರು ಉದ್ಘಾಟಿಸಿದರು. ಅನಂತರ ಆರಂಭಿಕ ನ್ಯಾಯಾಲಯ ಕಲಾಪಕ್ಕೆ ಚಾಲನೆ ನೀಡಲಾಯಿತು.

ಆನೆಮಜಲಿನಲ್ಲಿ ಕೋರ್ಟ್‌
ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್‌ ಕೆ.ವಿ. ಸ್ವಾಗತಿಸಿ ಮಾತ ನಾಡಿ, 2016ರಲ್ಲಿ ನೂತನ ಕೋರ್ಟ್‌ಗೆ ನೋಟಿಫಿಕೇಶನ್‌ ಆಗಿತ್ತು ಎಂದು ತಿಳಿಸಿದರು. ಬೇಸಗೆ ರಜೆಯ ಸಂದರ್ಭ ಅನಿರೀಕ್ಷಿತವಾಗಿ ಮಂಜೂರಾತಿ ಲಭಿಸಿದೆ. ಮುಂದೆ ಬನ್ನೂರು ಆನೆಮಜಲಿನಲ್ಲಿ ನಿರ್ಮಾಣವಾಗುವ ನ್ಯಾಯಾಲಯ ಸಂಕೀರ್ಣದಲ್ಲಿ ಎಲ್ಲ ನ್ಯಾಯಾಲಯ ವ್ಯವಸ್ಥೆಗಳು ಒಂದೇ ಕಡೆ ಕಾರ್ಯನಿರ್ವಹಿಸಲಿವೆ ಎಂದರು.

ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಲತಾದೇವಿ ಜಿ.ಎ., 1ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಕಿಶನ್‌ ಬಿ. ಮಡಲಗಿ, ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳಾದ ಸುರೇಶ್‌ ರೈ, ಮಂಜುನಾಥ ಎನ್‌.ಎಸ್‌. ವೆಂಕಟೇಶ್‌ ಎನ್‌., ಮಮತಾ, ದಿವ್ಯರಾಜ್‌ ಹೆಗ್ಡೆ ಉಪಸ್ಥಿತರಿದ್ದರು.
ಪುತ್ತೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಭಾಸ್ಕರ ಕೋಡಿಂಬಾಳ ಕಾರ್ಯಕ್ರಮ ನಿರ್ವಹಿಸಿದರು. ವಕೀಲರ ಸಂಘದ ಸದಸ್ಯರು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ನ್ಯಾಯಾಧೀಶರಿಗೆ ಸ್ವಾಗತ
ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ನೂತನವಾಗಿ ಆಗಮಿಸಿದ ರುಡಾಲ್ಫ್ ಪಿರೇರ ಹಾಗೂ ಎರಡನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾಗಿ ಆಗಮಿಸಿದ ವೆಂಕಟೇಶ ಎನ್‌. ಅವರನ್ನು ಸ್ವಾಗತಿಸಿ ಗೌರವಿಸಲಾಯಿತು.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.