ದ.ಕ.-ಉಡುಪಿ ಮರಳು ಸಮಸ್ಯೆ ಪರಿಹಾರಕ್ಕೆ ಸೆ.12ರಂದು ಸಭೆ
ಸಚಿವ ಸಿ.ಸಿ.ಪಾಟೀಲ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ
Team Udayavani, Sep 8, 2019, 3:32 PM IST
ಸವಣೂರು: ದ.ಕ. ಹಾಗೂ ಉಡುಪಿ ಜಿಲ್ಲೆಗಳ ಮರಳು ಸಮಸ್ಯೆ ಪರಿಹಾರಕ್ಕೆ ಬೆಂಗಳೂರಿನ ವಿಧಾನ ಸೌಧದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಸಿ.ಸಿ.ಪಾಟೀಲ್ ಅವರ ನೇತೃತ್ವದಲ್ಲಿ ಸೆ.12 ರಂದು ಸಭೆ ನಡೆಯಲಿದೆ. ಉಭಯ ಜಿಲ್ಲೆಗಳ ಸಂಸದರು ,ಶಾಸಕರು, ಸಚಿವರು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ಭೂ ವಿಜ್ಞಾನಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಿಯೋಗದಿಂದ ಮನವಿ
ಜಿಲ್ಲೆಯ ಮರಳು ಸಮಸ್ಯೆ ಕುರಿತು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಜಿಲ್ಲೆಯ ನಿಯೋಗದ ವತಿಯಿಂದ ಸಚಿವ ಸಿ.ಸಿ.ಪಾಟೀಲ್ ಅವರ ಗಮನಕ್ಕೆ ತರಲಾಗಿತ್ತು. ನಿಯೋಗದ ಮನವಿಗೆ ಸ್ಪಂದಿಸಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ಕರೆಯುವುದಾಗಿ ಸಚಿವರು ಭರವಸೆ ನೀಡಿದ್ದರು. ಅಲ್ಲದೆ ಇಲ್ಲಿನ ನಿಯೋಗವು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಶಾಸಕ ಅಂಗಾರ ಅವರಿಗೂ ಮನವರಿಕೆ ಮಾಡಿದ್ದರು.
ಬೆಂಗಳೂರಿಗೆ ತೆರಳಿದ ನಿಯೋಗದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುರೇಶ್ ಕೆ ಪೆರಾಬೆ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು, ಸತೀಶ್ ಅಂಗಡಿಮೂಲೆ, ತೀರ್ಥರಾಮ ಕೆಡೆಂಜಿ , ಪಾಲ್ತಾಡಿ ಗ್ರಾಮವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.