ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ; ತೀರ್ಪು ಪ್ರಕಟ: ಆರೋಪಿಗೆ ಜೈಲು ಶಿಕ್ಷೆ
Team Udayavani, Aug 1, 2023, 10:44 PM IST
ಕಡಬ: ಹನ್ನೊಂದು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕುಂತೂರಿನ ರಾಜಿಕ್ನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ನೀಡಿ ತೀರ್ಪು ನೀಡಿದೆ.
2012ರಲ್ಲಿ ಕುಂತೂರಿನ ರಾಜಿಕ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತನಾಗಿದ್ದ. ಆದರೆ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ನ್ಯಾಯಾಲಯ ಆತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ನಾಲ್ಕು ತಿಂಗಳ ಹಿಂದೆ ಕಡಬ ಪೊಲೀಸರು ಆರೋಪಿ ರಾಜಿಕ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಆತ ನ್ಯಾಯಾಂಗ ಬಂಧನದಲ್ಲಿದ್ದ. ಈ ಪ್ರಕರಣದ ವಿಚಾರಣೆ ನಡೆದು ಪುತ್ತೂರು
2ನೇ ಎ.ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಯೋಗೀಂದ್ರ ಶೆಟ್ಟಿ ಅವರು ಆರೋಪಿ ರಾಜಿಕ್ಗೆ ಮೂರು ವರ್ಷ ಆರು ತಿಂಗಳು ಕಾರಾಗೃಹವಾಸ ಮತ್ತು 1,500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರಿ ಸಹಾಯಕ ಅಭಿಯೋಜಕಿ ಕವಿತಾ ಅವರು ಸಂತ್ರಸ್ತ ಬಾಲಕಿಯ ಪರ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.