ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ನಾಪತ್ತೆ; ದೂರು ದಾಖಲು
Team Udayavani, Oct 31, 2022, 7:13 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ಅವರು ಅ. 29ರಂದು ಕಾಣೆಯಾಗಿರುವುದಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಭಾರತಿ ಅವರ ಪತಿ ದೂರು ನೀಡಿದ್ದು ಅ. 29ರ ಅಪರಾಹ್ನ ತನಕ ಕೆಲಸಕ್ಕೆ ಹೋಗಿ ಬಳಿಕ ಮನೆಗೆ ಹೋಗಿ ತಾಯಿ ಸರಸ್ವತಿ ಹಾಗೂ ಅತ್ತೆ ಭವಾನಿ ಅವರ ಚಿಕಿತ್ಸೆಯ ಬಗ್ಗೆ ಕಾಣಿಯೂರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಕೊಡಿಸಿ ವಾಪಸ್ ರಾತ್ರಿ ಮನೆಗೆ ಬಂದ ವೇಳೆ ಪತ್ನಿ ಮನೆಯಲ್ಲಿ ಇರಲಿಲ್ಲ. ಆ ಬಳಿಕ ತಂದೆ ಹಾಗೂ ಮಕ್ಕಳಲ್ಲಿ ವಿಚಾರಿಸಿದಾಗ ಅವರು ಎಲ್ಲಿಯೋ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾಳೆ ಎಂದು ತಿಳಿಸಿದ್ದು, ಬಳಿಕ ಪತ್ನಿಗೆ ಕರೆ ಮಾಡಿದಾಗ ಫೋನ್ ಸ್ವೀಚ್ ಆಫ್ ಆಗಿತ್ತು.
ಈ ಬಗ್ಗೆ ಸಂಬಂಧಿಕರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಿದಾಗ ಎಲ್ಲಿಯೂ ಸಿಗಲಿಲ್ಲ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.