ರಸ್ತೆ ಹೊಂಡಗಳಿಗೆ ಮುಕ್ತಿ ನೀಡಿದ ತಾಯಿ, ಮಗಳು!
Team Udayavani, Jul 28, 2021, 7:25 AM IST
ಉಪ್ಪಿನಂಗಡಿ: ಭಾರೀ ಮಳೆಯಿಂದಾಗಿ ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬಹಳಷ್ಟು ಹಲವಾರು ಹೊಂಡಗಳು ಸೃಷ್ಟಿಯಾಗಿದ್ದು, ಸಂಭವನೀಯ ಅಪಘಾತವನ್ನು ತಪ್ಪಿಸುವ ಸಲುವಾಗಿ ತಾಯಿ ಮತ್ತು ಮಗಳು ಸೇರಿಕೊಂಡು ಹೊಂಡಗಳನ್ನು ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.
ಕೆಮ್ಮಾರಕ್ಕೆ ಬರುವ ಧಾರಿ ಮಧ್ಯೆ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿನ ಹೊಂಡ-ಗುಂಡಿಯನ್ನು ಸ್ಥಳೀಯ ಆಶಾ ಕಾರ್ಯಕರ್ತೆಯೂ ಆಗಿರುವ ಅನಂತಾವತಿ ಮತ್ತು ತಾಯಿ ಸೇಸಮ್ಮ ಸೇರಿಕೊಂಡು ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿದರು.
ಈ ಜಾಗದಲ್ಲಿ ವರ್ಷವೂ ಮಳೆಗಾಲದಲ್ಲಿ ಹೊಂಡಗಳು ನಿರ್ಮಾಣವಾಗುತ್ತಿದ್ದು 3 ವರ್ಷಗಳಿಂದ ಪ್ರತೀ ವರ್ಷ ಅಪಘಾತಗಳಾಗಿ ಸಾವು-ನೋವು ಸಂಭವಿಸಿದೆ. ನಮ್ಮ ಮನೆ ಇಲ್ಲೇ ಸಮೀಪದಲ್ಲಿದ್ದು, ವಾಹನಗಳ ಚಕ್ರಗಳು ಈ ಹೊಂಡಗಳಿಗೆ ಬಿದ್ದಾಗ ಭಾರೀ ಶಬ್ದ ಕೇಳಿಸುವುದಲ್ಲದೆ ಅಪಘಾತದ ದೃಶ್ಯಗಳು ಕಣ್ಣಮುಂದೆ ಬಂದು ನಿಲ್ಲುತ್ತವೆ. ಅಂತಹ ಘಟನೆಗಳು ಮುಂದೆ ಸಂಭವಿಸದಿರಲಿ ಎಂದು ನಮ್ಮಿಂದ ಆಗುವ ಕಿಂಚಿತ್ ಸೇವೆ ಮಾಡುತ್ತಿದ್ದೇವೆ ಎಂದು ಅನಂತಾವತಿ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.