ಎಂಆರ್‌ಪಿಎಲ್‌ ಅಣೆಕಟ್ಟು: ಶಾಸಕ, ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Team Udayavani, Jun 5, 2019, 6:00 AM IST

e-4

ಪುಂಜಾಲಕಟ್ಟೆ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ ಉಳಿಪ್ಪಾಡಿ ಅವರು ಅಧಿಕಾರಿಗಳ ತಂಡ ದೊಂದಿಗೆ ಮಂಗಳವಾರ ಎಂಆರ್‌ಪಿಎಲ್‌ ಸರಪಾಡಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ, ನೀರಿನ ಲಭ್ಯತೆ ಹಾಗೂ ಅದನ್ನು ಕೆಳಭಾಗಕ್ಕೆ ಹರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಮಂಗಳೂರು ಹಾಗೂ ಬಂಟ್ವಾಳದ ನೀರಿನ ಅಭಾವ ತಪ್ಪಿಸುವ ದೃಷ್ಟಿಯಿಂದ ನೀರು ಹರಿಸುವ ಕುರಿತು ಕೈಗೊಂ ಡಿರುವ ಕ್ರಮಗಳನ್ನು ಮಂಗಳೂರು ಸ. ಕಮಿಷನರ್‌ ರವಿಚಂದ್ರ ನಾಯ್ಕ ಅವರಿಗೆ ವಿವರಿಸಲಾಯಿತು. ಅಣೆಕಟ್ಟು ಪ್ರದೇಶ ಹಾಗೂ ಅಲ್ಲಲ್ಲಿ ಹೊಂಡಗಳಲ್ಲಿ ತುಂಬಿರುವ ಮರಳಿನ ಹೂಳು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಎಸಿಗೆ ತಿಳಿಸಲಾಯಿತು.

ಡ್ರೆಜ್ಜಿಂಗ್‌ ಕಾರ್ಯ
ಕಳೆದ ಕೆಲವು ದಿನಗಳಿಂದ ಘಟ್ಟ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾದ ಪರಿಣಾಮ ಕುಮಾರಧಾರಾ ನದಿಯ ಮೂಲಕ ನೀರಿನ ಹರಿವು ಕೊಂಚ ಆರಂಭಗೊಂಡಿದ್ದು, ಆದರೆ ಅದು ಎಂಆರ್‌ಪಿಎಲ್‌ ಡ್ಯಾಂನಲ್ಲಿ ಶೇಖರಣೆಯಾಗಿದೆ. ಹೀಗಾಗಿ ಅಲ್ಲಿನ ಮರಳನ್ನು ಡ್ರೆಜ್ಜಿಂಗ್‌ ಯಂತ್ರದ ಮೂಲಕ ತೆರವುಗೊಳಿಸುವ ಕಾರ್ಯವನ್ನು ಶಾಸಕರು ಹಾಗೂ ಅಧಿಕಾರಿಗಳ ತಂಡ ವೀಕ್ಷಣೆ ನಡೆಸಿತು.

ಪುರಸಭಾ ಮುಖ್ಯಾಧಿಕಾರಿ ಮೇಬಲ್‌ ಡಿ’ಸೋಜಾ, ಎಂಜಿನಿಯರ್‌ ಡೊಮಿನಿಕ್‌ ಡಿ’ಮೆಲ್ಲೊ, ಪುರಸಭಾ ಸದಸ್ಯ ಗೋವಿಂದ ಪ್ರಭು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಮುಖರಾದ ರಮಾನಾಥ ರಾಯಿ, ಪವನ್‌ ಕುಮಾರ್‌ ಶೆಟ್ಟಿ, ಮಂಜು ಮತ್ತಿತರರು ಉಪಸ್ಥಿತರಿದ್ದರು.

ತೊಂದರೆಯಾಗದಂತೆ ಕ್ರಮ
ಬಂಟ್ವಾಳದ ಜನತೆಯ ನೀರಿನ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಪುರಸಭಾ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಪ್ರಸ್ತುತ ಒಂದಷ್ಟು ದಿನಗಳ ಕಾಲ ಮಳೆ ಬರದಿದ್ದರೂ, ನದಿಯಲ್ಲಿ ಲಭ್ಯವಿರುವ ನೀರನ್ನೇ ಉಪಯೋಗಿಸಿಕೊಂಡು ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು.

ಶಾಸಕರು ಹಾಗೂ ಅಧಿಕಾರಿಗಳ ತಂಡ ಎಂಆರ್‌ಪಿಎಲ್‌ ಸರಪಾಡಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

1

Puttur: ನಳಿನ್‌ಗೆ ನಿಂದನೆ; ದೂರು ದಾಖಲು

1-asdaaasdasd

Kadaba; ಪ್ರೀತಿಸುವ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ:ಯುವಕ ಸೆರೆ

1aaaane

Sullia: ತೋಟದಲ್ಲಿ ಮೂರು ಕಾಡಾನೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.