ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮುಂಡಾಜೆ ಬಲ್ಯಾರ್ ಕಾಪು ಸೇತುವೆ
Team Udayavani, May 18, 2020, 5:16 AM IST
ಮುಂಡಾಜೆ: ಬೆಳ್ತಂಗಡಿ ತಾ| ಮುಂಡಾಜೆ ಗ್ರಾ.ಪಂ. ವ್ಯಾಪ್ತಿಯ ಸೋಮಂತಡ್ಕದಿಂದ ಕಲ್ಮಂಜ ಮೂಲಕ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಬಲ್ಯಾರ್ ಕಾಪು ಸೇತುವೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ಜಿ.ಪಂ. ನಿಂದ ಬಲ್ಯಾರ್ ಕಾಪು ಎಂಬಲ್ಲಿ 40 ಮೀ. ಉದ್ದದ 2 ಮೀ. ಅಗಲದ ಸೇತುವೆ ಮೃತ್ಯುಂಜಯ ನದಿಗೆ ಹಲವಾರು ವರ್ಷದ ಹಿಂದೆ ಅಡ್ಡಲಾಗಿ ಕಟ್ಟಿದ್ದು, ಇದರಲ್ಲಿ ವಾಹನಗಳು ಹಾಗೂ ಪಾದಚಾರಿಗಳು ಓಡಾಡುತ್ತಾರೆ.
ಕಲ್ಮಂಜ ಗ್ರಾಮಕ್ಕೆ ಹತ್ತಿರದ ಸಂಪರ್ಕ ಕಲ್ಪಿಸುವ ಈ ಸೇತುವೆಗೆ ಕಳೆದ ಮಳೆಗಾಲದಲ್ಲಿ ಭೀಕರ ಪ್ರವಾಹಕ್ಕೆ ಕೊಚ್ಚಿಕೊಂಡು ಹೋದ ಮರಗಳ ಹೊಡೆತದಿಂದ ಕಬ್ಬಿಣದ ಪೈಪ್‌ಗ್ಳಿಂದ ನಿರ್ಮಿಸಿರುವ ಒಂದು ಬದಿಯ ತಡೆಗೋಡೆಯು ಸುಮಾರು 7 ಮೀ. ನಷ್ಟು ತುಂಡಾಗಿ ಹೋಗಿದೆ. ಇದರಿಂದ ಈಗ ಅಷ್ಟು ಜಾಗದಲ್ಲಿ ತಡೆಗೋಡೆ ಇಲ್ಲದೆ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ತೀವ್ರ ತೊಂದರೆಯಾಗಿದೆ. ಒಂದಿಷ್ಟು ಎಚ್ಚರ ತಪ್ಪಿದರೂ ನದಿಗೆ ಬೀಳುವ ಸಾಧ್ಯತೆ ಇದೆ.
ಸಾಮಾನ್ಯ ದಿನಗಳಲ್ಲಿ ಶಾಲಾ ಮಕ್ಕಳು ಹೆಚ್ಚಾಗಿ ಸಂಚರಿಸುವ ಈ ಸೇತುವೆ ಮಳೆಗಾಲದಲ್ಲಿ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಹಾಗಾಗಿ ಶೀಘ್ರ ಸೇತುವೆಯ ತಡೆಗೋಡೆ ದುರಸ್ತಿ ಕೆಲಸ ಆಗಬೇಕೆಂದು ಊರವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.