ಮುಂಡೂರು: ಎಲ್.ಕೆ.ಜಿ., ಯು.ಕೆ.ಜಿ. ತರಗತಿ ಉದ್ಘಾಟನೆ
Team Udayavani, Jun 11, 2019, 5:50 AM IST
ನರಿಮೊಗರು: ಸರಕಾರಿ ಶಾಲೆಗಳು ಎಲ್ಲೂ ಮುಚ್ಚಲ್ಪಡಬಾರದು.ಅದನ್ನು ಉಳಿಸುವ ಕೆಲಸ ನಮ್ಮೆಲ್ಲ ರಿಂದ ಆಗಬೇಕು. ಸರಕಾರಿ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಎದೆಗುಂದ ಬಾರದು. ಸರಕಾರಿ ಶಾಲೆಗಳ ಜತೆ ಜನಪ್ರತಿನಿಧಿಗಳು ಸದಾ ಇರುತ್ತೇವೆ ಎಂದು ತಾ.ಪಂ. ಸದಸ್ಯ ಶಿವರಂಜನ್ ಹೇಳಿದರು.
ಮುಂಡೂರು ಸ.ಉ.ಹಿ.ಪ್ರಾ. ಶಾಲೆ ಯಲ್ಲಿ ಎಲ್.ಕೆ.ಜಿ. ಹಾಗೂ ಯು.ಕೆ.ಜಿ. ತರಗತಿ “ಗುಬ್ಬಚ್ಚಿ ಕಲರವ’ ಉದ್ಘಾಟಿಸಿ ಅವರು ಮಾತನಾಡಿದರು. ಮುಂಡೂರಿನಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಭಯಪಡುವ ಅಗತ್ಯವಿಲ್ಲ. ಇಲ್ಲಿ ಸಾಕಷ್ಟು ದಾನಿಗಳಿದ್ದಾರೆ. ಇಲ್ಲಿನ ಎಸ್‌ಡಿಎಂಸಿ ಅಧ್ಯಕ್ಷರೂ ಶಾಲೆಗಾಗಿ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಮುಂಡೂರು ಶಾಲೆಗೆ ನನ್ನಿಂದ ಸಾಧ್ಯವಾದಷ್ಟು ಅನುದಾನವನ್ನು ಒದಗಿಸಿದ್ದೇನೆ ಎಂದರು.
ಹೊಸ ಹೆಜ್ಜೆಯತ್ತ
ಕೆಯ್ಯೂರು ಪ್ರೌಢಶಾಲೆಯ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್. ಮಾತನಾಡಿ, ಸರಕಾರಿ ಶಾಲೆಗಳು ಇದೀಗ ಹೊಸ ಹೆಜ್ಜೆ ಇಡುತ್ತಿರುವುದು ಖುಷಿಯ ವಿಚಾರ. ಸರಕಾರಿ ಶಾಲೆಗಳಲ್ಲಿ ಕೆಲವು ಕಡೆಗಳಲ್ಲಿ ಪಬ್ಲಿಕ್ ಸ್ಕೂಲ್ ಆರಂಭಗೊಂಡಿದೆ. ಎಲ್‌ಕೆಜಿ ಯುಕೆಜಿ ತರಗತಿಗಳೂ ಆರಂಭಗೊಳ್ಳುತ್ತಿರುವುದರಿಂದ ಮಕ್ಕಳಿಗೆ ವರದಾನವಾಗಿದೆ. ಮಕ್ಕಳ ಕಲಿಕಾ ವಿಚಾರಗಳ ಬಗ್ಗೆ ಪೋಷಕರು ಗಮನ ಕೊಡಬೇಕು ಎಂದರು.
ತಾಲೂಕು ಬಿಐಆರ್‌ಪಿ ತನುಜಾ, ನರಿಮೊಗರು ಸಿಆರ್‌ಪಿ ದೇವಪ್ಪ, ಮುಂಡೂರು ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ವೀಣಾ, ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣ್ಣರಾಯ ಬನರಿ, ಶಾಲಾ ಮುಖ್ಯಗುರು ಶಶಿಕಲಾ ಉಪಸ್ಥಿತರಿದ್ದರು. ಪ್ರಮುಖರಾದ ಬಾಲಕೃಷ್ಣ ಕಣ್ಣರಾಯ, ವಾಸುದೇವ ಸಾಲ್ಯಾನ್ ಹಾಗೂ ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮುಖ್ಯಗುರು ಶಶಿಕಲಾ ಸ್ವಾಗತಿಸಿ, ಶಿಕ್ಷಕಿ ಸಂಧ್ಯಾ ವಂದಿಸಿ, ಶಿಕ್ಷಕ ರವೀಂದ್ರ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ರಾಮಚಂದ್ರ, ವನಿತಾ, ನಾಗವೇಣಿ, ಶಶಿಕಲಾ ಹಾಗೂ ಶಕುಂತಳಾ ಮತ್ತು ಹರ್ಷಿತಾ ಸಹಕರಿಸಿದರು.
ಸ್ಪರ್ಧಾತ್ಮಕ ಶಿಕ್ಷಣಕ್ಕೆ ಆದ್ಯತೆ
ಗ್ರಾಮೀಣ ಭಾಗದ ಮಕ್ಕಳಿಗೆ ಸರಕಾರಿ ಶಾಲೆಯಲ್ಲೇ ಎಲ್‌ಕೆಜಿ ಯುಕೆಜಿ ತರಗತಿಗಳನ್ನೊಳಗೊಂಡ ಗುಣಮಟ್ಟದ ಶಿಕ್ಷಣ ದೊರಕಿಸುವ ಹಾಗೂ ಸ್ಪರ್ಧಾತ್ಮಕ ಶಿಕ್ಷಣ ನೀಡುವ ಉದ್ದೇಶದೊಂದಿಗೆ ಮುಂಡೂರು ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಿದ್ದೇವೆ. ಎಸ್‌ಡಿಎಂಸಿ, ಹೆತ್ತವರು ಹಾಗೂ ಊರ ದಾನಿಗಳ ಸಹಕಾರದೊಂದಿಗೆ ಇಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಲಾಗಿದ್ದು, ಈಗಾಗಲೇ 15 ಮಕ್ಕಳು ದಾಖಲಾತಿ ಮಾಡಿಕೊಂಡಿದ್ದಾರೆ.
– ರಮೇಶ್ ಗೌಡ ಪಜಿಮಣ್ಣು, ಅಧ್ಯಕ್ಷರು, ಎಸ್‌ಡಿಎಂಸಿ, ಮುಂಡೂರು ಶಾಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.