ಯುವಕನ ಚಿಕಿತ್ಸೆಗೆ ನೆರವು: ಮನವಿ
Team Udayavani, Aug 27, 2019, 5:53 AM IST
ಬೆಳ್ಳಾರೆ: ಕಟ್ಟಡದಿಂದ ಜಾರಿ ಬಿದ್ದು ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಂಗಳೂರಿನ ಶ್ರೀನಿವಾಸ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಾಳಿಲದ ರಾಮಣ್ಣ ಮಡಿವಾಳ್ ಅವರ ಪುತ್ರ ಮುರಳೀಧರ (26) ಅವರ ಚಿಕಿತ್ಸೆಯ ವೆಚ್ಚ ಭರಿಸಲು ಕುಟುಂಬವು ಪರದಾಡುತ್ತಿದ್ದು, ದಾನಿಗಳ ನೆರವಿಗೆ ಮನವಿ ಮಾಡಿದೆ.
ಕೂಲಿ ಕೆಲಸ ಮಾಡಿ ಜೀವನ ನಿರ್ವಹಣೆ ಮಾಡುತ್ತಿರುವ ಮುರಳೀಧರ್ ಒಂದು ವಾರದ ಹಿಂದೆ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸದಲ್ಲಿ ನಿರತರಾಗಿದ್ದಾಗ ಜಾರಿ ಬಿದ್ದು ಹೊಟ್ಟೆ ಹಾಗೂ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಪ್ರಜ್ಞಾಹೀನ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿರುವ ಈತನ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಭರಿಸಲು ಕುಟುಂಬವು ಅಸಹಾಯಕವಾಗಿದೆ. ದಾನಿಗಳು ಮುರಳೀಧರ್ ಅವರ ಬೆಳ್ಳಾರೆ ವಿಜಯ ಬ್ಯಾಂಕ್ (ಬ್ಯಾಂಕ್ ಆಫ್ ಬರೋಡ) ಶಾಖೆಯ ಖಾತೆ ಸಂಖ್ಯೆ 102601111000843, ಐಎಫ್ಎಸ್‌ಸಿ ಕೋಡ್ VIJB0001026 ಸಂಖ್ಯೆಗೆ ಜಮೆ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.