ನೆಲ್ಯಾಡಿ ಪಡುಬೆಟ್ಟು ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ


Team Udayavani, Mar 11, 2019, 9:04 AM IST

11-march-13.jpg

ನೆಲ್ಯಾಡಿ : ನೆಲ್ಯಾಡಿ ಗ್ರಾಮದ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಾ. 8ರ ಬೆಳಗ್ಗೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು.

ಮಾ. 13ರ ತನಕ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಮಾ. 8ರ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತದೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಬ್ರಹ್ಮಕಲಶೋತ್ಸವದ ಅನ್ನಛತ್ರವನ್ನು ದೇವಸ್ಥಾನದ ಪ್ರಧಾನ ಅರ್ಚಕ ಬಿ.ಕೆ. ಶ್ರೀನಿವಾಸ ರಾವ್‌ ಉದ್ಘಾಟಿಸಿದರು. ಕಾರ್ಯಾಲಯವನ್ನು ಕಾವು-ಕೌಕ್ರಾಡಿ ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿದರು.

ಹೊರೆಕಾಣಿಕೆ ಸಮರ್ಪಣೆ
ಪಡುಬೆಟ್ಟು, ಕೊಲ್ಯೊಟ್ಟು, ಪೊಸೊಳಿಗೆ, ಪಟ್ಟೆ, ಸರೋಳಿಕೆರೆ, ತೊಟ್ಲ ಗುಂಡಿ, ಪಲಸತಡ್ಕ, ಪಟ್ಟೆಜಾಲು, ಬಾಕಿಜಾಲು,ಹೊಸವಕ್ಲು, ಅಡೀಲು, ದರ್ಖಾಸು ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಹೊರೆಕಾಣಿಕೆ ಹೊತ್ತ ವಾಹನಗಳ ಮೆರವಣಿಗೆ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಚಾಲನೆ ನೀಡಲಾಯಿತು. ಇಲ್ಲಿ ದೇವಸ್ಥಾನದ ಅರ್ಚಕ ಸುರೇಶ್‌ ಮುಂಚ್ಚಿತ್ತಾಯ ಅವರು ಪೂಜೆ ಸಲ್ಲಿಸಿ ದೀಪ ಬೆಳಗಿಸಿ ಉದ್ಘಾಟಿಸಿದರು.

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧೀರ್‌ ಕುಮಾರ್‌, ಸದಸ್ಯ ನಾರಾಯಣ ಹೆಗ್ಡೆ ಪಡ್ಪಗುಡ್ಡೆ ಉಪಸ್ಥಿತರಿದ್ದರು. ಬಳಿಕ ಹೊರೆಕಾಣಿಕೆ ಮೆರವಣಿಗೆಯೂ ನೆಲ್ಯಾಡಿ ಪೇಟೆ ಮೂಲಕ ತೆರಳಿತು. ಪಡುಬೆಟ್ಟು ದೇವಸ್ಥಾನದ ದ್ವಾರದ ಬಳಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಹೊರೆಕಾಣಿಕೆ ಮೆರವಣಿಗೆ ಉದ್ಘಾಟಿಸಿದರು. ಹೊರೆಕಾಣಿಕೆ ಸಮಿತಿ ಸಂಚಾಲಕ ಜಯಾನಂದ ಬಂಟ್ರಿಯಾಲ್‌ ಅವರ ನೇತೃತ್ವದಲ್ಲಿ ಭಜನೆಯೊಂದಿಗೆ ಹೊರೆಕಾಣಿಕೆ ಮೆರವಣಿಗೆ ನಡೆಯಿತು.

ಆಡಳಿತ ಮೊಕ್ತೇಸರ ಡಾ| ಕೆ. ಸುಬ್ರಹ್ಮಣ್ಯ ಶಬರಾಯ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಶ್ರೀಧರ ಗೋರೆ, ಅಧ್ಯಕ್ಷ ಜಯಪ್ರಕಾಶ್‌ ನೆಕ್ರಾಜೆ, ಕಾರ್ಯದರ್ಶಿ ರಾಜೇಶ್‌ ಪಡು ಬೆಟ್ಟು, ಪ್ರಧಾನ ಅರ್ಚಕ ಕೆ. ಶ್ರೀನಿವಾಸ ರಾವ್‌, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಗೌರಿಜಾಲು, ಕಾರ್ಯಾಧ್ಯಕ್ಷ ಸತೀಶ್‌ ಕೆ.ಎಸ್‌. ದುರ್ಗಾಶ್ರೀ, ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್‌ ಬೀದಿಮಜಲು, ಕಾಂತಪ್ಪ ಗೌಡ ಪೂವಾಜೆ, ಕೋಶಾಧಿಕಾರಿಗಳಾದ ಆರ್‌.ವೆಂಕಟ್ರಮಣ, ಹರಿಶ್ಚಂದ್ರ ರೈ ಕಂಗಿನಡಿ, ಸಂಚಾಲಕ ಜಯಪ್ರಕಾಶ್‌ ನೆಕ್ರಾಜೆ, ಉಪಾಧ್ಯಕ್ಷರಾದ ಗಿರೀಶ್‌ ಶೆಟ್ಟಿ ಬೀದಿಮನೆ, ಜನಾರ್ದನ ಗೌಡ ಪಿಲವೂರು, ಸಂದೇಶ್‌ ಶೆಟ್ಟಿ ಆಮುಂಜ, ಜಗನ್ನಾಥ ರೈ ಪಟ್ಟೆ, ಬಿ. ರಮೇಶ್‌ ಶೆಟ್ಟಿ ಬೀದಿಮನೆ, ಸುಂದರ ಗೌಡ ಅತ್ರಿಜಾಲು, ಸ್ವಾಗತ ಸಮಿತಿ ಸಂಚಾಲಕ ಗಂಗಾಧರ ಶೆಟ್ಟಿ ಹೊಸಮನೆ, ಅಭಿವೃದ್ಧಿ ಸಮಿತಿ ಸಹ ಸಂಚಾಲಕ ಮೋಹನ ರೈ ಆಮುಂಜ, ಕೋಶಾಧಿಕಾರಿ ಶ್ರೀಪತಿ ಶಬರಾಯ, ರಾಜೀವ್‌ ರೈ ಆಮುಂಜ, ಸದಸ್ಯರಾದ ರವಿಚಂದ್ರ ಹೊಸವೊಕ್ಲು, ಸುರೇಶ್‌ ಪಡಿಪಂಡ, ನಮಿತಾ ಶೆಟ್ಟಿ ಪರಾರಿ, ಜಯಂತಿ ಬೀದಿಮನೆ, ಶಿವಪ್ರಕಾಶ್‌ ಬೀದಿಮಜಲು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ತುಕಾರಾಮ ರೈ ಉಪಸ್ಥಿತರಿದ್ದರು.

ಮಧ್ಯಾಹ್ನ ಕ್ಷೇತ್ರದಲ್ಲಿ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಸಭಾ ಸಂಯೋಜನೆ ಸಮಿತಿ ಸಂಚಾಲಕ, ನಿವೃತ್ತ ಮುಖ್ಯಶಿಕ್ಷಕ ರವೀಂದ್ರ ಟಿ., ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ
ರಾತ್ರಿ ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು.

ಭಜನ ಕಾರ್ಯಕ್ರಮ
ಅಪರಾಹ್ನ ಭಜನೋತ್ಸವವನ್ನು ನೆಲ್ಯಾಡಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಆನಂದ ಅಜಿಲ ಉದ್ಘಾಟಿಸಿದರು. ಬಳಿಕ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ಭಜನ ಮಂಡಳಿ, ಮಾದೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನ ಮಂಡಳಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಭಜನ ಮಂಡಳಿ ಸದಸ್ಯರಿಂದ ಭಜನ ಕಾರ್ಯಕ್ರಮ ನಡೆಯಿತು. ಸಂಜೆ ಕ್ಷೇತ್ರದ ತಂತ್ರಿಗಳಿಗೆ ಹಾಗೂ ಇತರ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ರಾತ್ರಿ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹಾವಾಚನ, ಆಚಾರ್ಯಾದಿ ಋತ್ವಿಗ್ವರಣ, ಪ್ರಾಸಾದ ಶುದ್ಧಿ, ಅಂಕುರಾರೋಪಣ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾಬಲಿ, ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.