ನೇತ್ರಾವತಿ ನದಿ: ನಿಡಿಗಲ್‌ ದಾಟಿದ ನೀರಿನ ಹರಿವು

Team Udayavani, May 19, 2020, 5:15 AM IST

ನೇತ್ರಾವತಿ ನದಿ: ನಿಡಿಗಲ್‌ ದಾಟಿದ ನೀರಿನ ಹರಿವು

ಮುಂಡಾಜೆ: ಬೆಳ್ತಂಗಡಿ ತಾಲೂಕಿನ ದಿಡುಪೆ ಕಡೆಯಿಂದ ಹರಿಯಲಾರಂಭಿಸುವ ನೇತ್ರಾವತಿ ನದಿಗೆ ನೀರಿನ ಹರಿವು ಆರಂಭವಾಗಿದೆ. ಕಳೆದ ಹಲವು ದಿನಗಳ ಹಿಂದೆ ನದಿ ಸಂಪೂರ್ಣ ಬತ್ತಲಾರಂಭವಾಗಿತ್ತು.

ದಿಡುಪೆ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಮಲವಂತಿಗೆಯಿಂದ ಹರಿಯಲಾರಂಭಿಸಿದ್ದ ನದಿ ನೀರು ಹಲವಾರು ನೀರಿನ ಕಟ್ಟಗಳಲ್ಲಿ ತುಂಬಿ ಕಡಿರುದ್ಯಾವರ, ಗಜಂತೋಡಿ, ಬೊಳ್ಳುರು ಬೈಲು, ಅರಸುಮಜಲು, ಕಜಂಗಾಡಿ ಮುಂತಾದೆಡೆ ಹರಿದು ಮೇ 18ರಂದು ಕಲ್ಮಂಜ ಗ್ರಾಮದ ನಿಡಿಗಲ್‌ ಪ್ರದೇಶ ವನ್ನು ದಾಟಿ ಕಾಯರ್ತೋಡಿಯತ್ತ ಮುಂದುವರಿದಿದೆ. ರವಿವಾರ ಸಂಜೆ ಯಿಂದ ನೇತ್ರಾವತಿ ನದಿ ಹರಿಯುವ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಕಾರಣ ನೀರಿನ ಹರಿವಿನಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದ್ದು ಒಂದೆರಡು ದಿನಗಳಲ್ಲಿ ಕಲ್ಮಂಜ ಗ್ರಾಮದ ಹುಣಿಪ್ಪಾಜೆ, ಕುಡೆಂಚಿ ಮೂಲಕ ಫಜಿರಡ್ಕದಲ್ಲಿ ಮೃತ್ಯುಂಜಯ ನದಿ ಜತೆ ಸಂಗಮಗೊಳ್ಳುವ ನಿರೀಕ್ಷೆ ಇದೆ. ಮೃತ್ಯುಂಜಯ ನದಿಯಲ್ಲಿ ನೀರಿನ ಹರಿವು ಈಗಾಗಲೇ ಹೆಚ್ಚಳವಾಗಿದ್ದು, ಫಜಿರಡ್ಕದಿಂದ ಧರ್ಮಸ್ಥಳ ಕಡೆ ನೇತ್ರಾವತಿ ನೀರು ಅಧಿಕವಾಗಲಿದೆ.

ಸುಳ್ಯ: ನದಿ, ಹೊಳೆಗಳಲ್ಲಿ ಮಳೆ ನೀರಿನ ಹರಿವು
ಸುಳ್ಯ: ರವಿವಾರ ತಡರಾತ್ರಿಯಿಂದ ಸೋಮವಾರ ಬೆಳಗ್ಗೆ ತನಕ ತಾಲೂಕಿನ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬೀಸಿದ ಗಾಳಿಗೆ ಹಲವೆಡೆ ಮರ, ವಿದ್ಯುತ್‌ ಕಂಬಕ್ಕೆ ಹಾನಿ ಉಂಟಾಗಿದೆ.

ನಗರ ಮತ್ತು ಗ್ರಾಮಾಂ ತರ ಪ್ರದೇಶಗಳಲ್ಲಿನ ರಸ್ತೆಗಳಲ್ಲಿ ನೀರು ತುಂಬಿ ಕೆಸರಿನಿಂದ ಕೂಡಿ ಸಂಚಾರಕ್ಕೂ ತೊಡಕು ಉಂಟಾಯಿತು. ಈ ಬಾರಿ ಹೊಳೆಯಲ್ಲಿ ನೀರಿನ ಪ್ರಮಾಣ ಪೂರ್ಣವಾಗಿ ಬತ್ತುವ ಮೊದಲೇ ಮಳೆ ನೀರು ಹರಿದಿರುವುದರಿಂದ ಕೃಷಿ ತೋಟಕ್ಕೆ ಬರದ ಬಿಸಿ ತಟ್ಟಿಲ್ಲ. ನಗರದ ನೀರಿನ ಪೂರೈಕೆಗೆ ನಾಗಪಟ್ಟಣ ಬಳಿ ಪಯಸ್ವಿನಿ ನದಿಗೆ ಅಳವಡಿಸಲಾಗಿದ್ದ ಮರಳು ಕಟ್ಟವು ಮಳೆ ನೀರಿನ ಹರಿವಿನ ಪರಿಣಾಮ ಮುಳುಗಿದೆ. ಮರಳು ಕಟ್ಟಿದ ಮೇಲ್ಭಾಗದಿಂದ ನೀರು ಉಕ್ಕಿ ಕೆಳಭಾಗಕ್ಕೆ ಹರಿದಿದೆ. ಪಯಸ್ವಿನಿ ನದಿಯ ನೀರಿನ ಮಟ್ಟ ಏರಿಕೆಯಾಗಿದೆ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

Gangolli

Puttur: ಗಾಯಾಳು ವಿದ್ಯಾರ್ಥಿನಿ ಸಾವು

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.