ವಿಚಾರಣೆಗೆ ಹಾಜರಾಗಲು ಸೂಚನೆ

ಸ್ವಯಂ ತಪ್ಪೊಪ್ಪಿಕೊಂಡಾತನ ವಿರುದ್ಧ ದಾಖಲಾಗಿಲ್ಲ ಪ್ರಕರಣ

Team Udayavani, Oct 21, 2020, 12:42 AM IST

Fake-insurance

ಸಾಂದರ್ಭಿಕ ಚಿತ್ರ

ಪುತ್ತೂರು: ಅಧಿಕೃತ ಏಜೆನ್ಸಿಗಳ ಕೋಡ್‌ ಅನ್ನು ದುರ್ಬಳಕೆ ಮಾಡಿ ಇಬ್ಬರಿಗೆ ನಕಲಿ ವಾಹನ ವಿಮೆ ನೀಡಿರುವ ಪ್ರಕರಣದಲ್ಲಿ ನಕಲಿ ವಿಮೆ ಪಡೆದ ವಾಹನ ಆರ್‌ಸಿ ಮಾಲಕರಿಬ್ಬರನ್ನು ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚಿಸಿದ್ದಾರೆ. ಆದರೆ ನಕಲಿ ವಿಮೆಯ ತಯಾರಿ ಬಗ್ಗೆ ಸ್ವಯಂ ಆಗಿ ತಪ್ಪೊಪ್ಪಿಕೊಂಡ ಆರ್‌ಟಿಒ ದಲ್ಲಾಳಿ ವಿರುದ್ಧ ಯಾವುದೇ ಪ್ರಕರಣ ದಾಖಲಾಗದಿರುವುದು ಅಚ್ಚರಿ ಮೂಡಿಸಿದೆ.

ನಕಲಿ ವಿಮೆ ಪಡೆದ ಕಾರಣಕ್ಕಾಗಿ ನರಿಮೊಗರಿನ ಅಬ್ದುಲ್‌ ಖಾದರ್‌ ಹಾಗೂ ವಿಶ್ವನಾಥ ಡಿ’ಸೋಜಾ ಅವರ ವಿರುದ್ಧ ದೂರು ದಾಖಲಾಗಿರುವ ಕಾರಣ ಅ. 20ರಂದು ಠಾಣೆಗೆ ಹಾಜರಾಗಿದ್ದರು. ಈ ಇಬ್ಬರಿಗೆ ಮೂರು ದಿನಗಳ ಅನಂತರ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.

ವಿಮಾ ಸಂಸ್ಥೆಯಿಂದ ದೂರು
ಯುನೈಟೈಡ್‌ ಇಂಡಿಯಾ ಇನ್ಸುರೆನ್ಸ್‌ ಕಂಪೆನಿಯ ಪುತ್ತೂರು ಶಾಖಾ ಪ್ರಬಂಧಕರು ನಕಲಿ ವಿಮೆ ಕುರಿತು ನಗರ ಠಾಣೆಗೆ ಅ. 20ರಂದು ದೂರು ನೀಡಿದ್ದಾರೆ. ದೂರಿನ ಪ್ರತಿಯನ್ನು ಮೇಲಾಧಿಕಾರಿಗಳಿಗೆ ಕಳಿಸಿದ್ದಾರೆ. ಅಲ್ಲದೇ ಶಾಸಕರಾದ ಸಂಜೀವ ಮಠಂದೂರು ಅವರಿಗೆ ದೂರು ಸಲ್ಲಿಸಿದ್ದೇವೆ ಎಂದು ಕಂಪೆನಿಯ ಅಧಿಕಾರಿಗಳು ತಿಳಿಸಿದ್ದಾರೆ.

ಆಟೋ ಆರ್‌ಸಿ ಮಾಲಕ ಅಬ್ದುಲ್‌ ಖಾದರ್‌ ಮತ್ತು ವಿಶ್ವನಾಥ ಅವರಿಗೆ ನಕಲಿ ವಿಮೆ ನೀಡಿದ ಆರ್‌ಟಿಒ ದಲ್ಲಾಳಿ ಅಶ#ಕ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿಲ್ಲ. ಅ. 15ರಂದು ಅಸ್ಫಕ್‌ನನ್ನು ನಗರ ಠಾಣೆಯ ಪೊಲೀಸರು ವಿಚಾರಣೆಗೆ ಒಳಪಡಿಸಿದ ಸಂದರ್ಭ ಆತ ತಪ್ಪೊಪ್ಪಿಕೊಂಡಿದ್ದ. ಅದಾಗ್ಯೂ ಆತನ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಈತನ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿ ವಿಚಾರಣೆಗೆ ಒಳಪಡಿಸಿದರೆ ನಕಲಿ ವಿಮೆಯ ಮೂಲ ಪತ್ತೆ ಆಗಲಿದೆ. ಇಲ್ಲಿ ಖಾದರ್‌ ಹಾಗೂ ವಿಶ್ವನಾಥ ಅವರು ತಪ್ಪಿತಸ್ಥರಲ್ಲದಿದ್ದರೂ, ನಕಲಿ ವಿಮೆ ಹೊಂದಿರುವ ಕಾರಣ ಅವರ ಮೇಲೆ ಪ್ರಕರಣ ದಾಖಲಾಗಿದೆ. ವಿಚಾರಣೆ ಸಂದರ್ಭ ತನಗೆ ನಕಲಿ ವಿಮೆ ನೀಡಿ ವಂಚಿಸಿದ ಆರೋಪಿ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಅವರೆಲ್ಲರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕಿದೆ.

ಖಚಿತಪಡಿಸಿಕೊಳ್ಳಿ: ಆರ್‌ಟಿಒ
ಮೋಟಾರು ವಾಹನ ಕಾಯ್ದೆ ಮತ್ತು ನಿಯಮಾವಳಿಗಳ ಪ್ರಕಾರ ವಾಹನಗಳು ಚಾಲ್ತಿಯಲ್ಲಿರುವ ವಾಹನ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಕೆಲವು ಮಂದಿ ನಕಲಿ ವಾಹನ ವಿಮಾಗಳನ್ನು ಸೃಷ್ಟಿಸಿ ವಾಹನ ಮಾಲಕರಿಗೆ ನೀಡುತ್ತಿರುವ ವಿಚಾರ ಇಲಾಖೆಯ ಗಮನಕ್ಕೆ ಬಂದಿದೆ. ವಾಹನ ಮಾಲಕರು ಇಂತಹ ವಿಷಯಗಳ ಬಗ್ಗೆ ಎಚ್ಚರಿಕೆಯಿಂದ ಇದ್ದು, ವಾಹನಗಳ ವಿಮೆ ಮಾಡಿಸುವಾಗ ಅಥವಾ ನವೀಕರಿಸುವಾಗ ಸಂಬಂಧಪಟ್ಟ ವಿಮಾ ಕಂಪೆನಿಗಳ ಡಾಟಾ ಬೇಸ್‌ನಲ್ಲಿ ಪಾಲಿಸಿ ವಿವರಗಳನ್ನು ಅಪ್‌ಡೇಟ್‌ ಮಾಡಲಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.