ನೀರಿನ ಕಟ್ಟ ನಿರ್ಮಾಣಕ್ಕೆ ಎನ್ನೆಸ್ಸೆಸ್‌ ಸಹಯೋಗ

ಅಂತರ್ಜಲ ಸಂರಕ್ಷಣೆಗೆ ಕನಕಮಜಲು ಯುವಕ ಮಂಡಲದ ಹೊಸ ಉಪಕ್ರಮ

Team Udayavani, Dec 11, 2019, 4:21 AM IST

ds-27

ಸುಳ್ಯ: ಅಂತರ್ಜಲದ ಸಂರಕ್ಷಣೆ ಅಗತ್ಯ ಈ ಕಾಲಘಟ್ಟದಲ್ಲಿ ದೇಶದ ಭವಿಷ್ಯದಷ್ಟೇ ಮಹತ್ವದ್ದು. ಇದನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಜತೆಗೂಡಿಸಿ ಕೃಷಿ ಕ್ಷೇತ್ರದಲ್ಲಿ ನೀರಿನ ಕಟ್ಟಗಳನ್ನು ನಿರ್ಮಿಸಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸುವ ವಿಶೇಷ ಪ್ರಯತ್ನ ನಡೆದಿದೆ.

ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಮಂಗಳೂರು, ಕನಕಮಜಲು ಯುವಕ ಮಂಡಲ ಇವುಗಳ ಸಹಯೋಗದಲ್ಲಿ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕನಕಮಜಲಿನ ಮುಗೇರು ಎಸ್ಟೇಟಿನ ಪ್ರಭಾಕರ ರಾವ್‌ ಮತ್ತು ದಿನೇಶ್‌ ರಾವ್‌ ಇವರ ಕೃಷಿ ಕ್ಷೇತ್ರದಲ್ಲಿ ಜಲ ಸಂರಕ್ಷಣೆ ಪ್ರಯುಕ್ತ ನೀರಿನ ಕಟ್ಟಗಳನ್ನು ನಿರ್ಮಿಸುವ ಕಾಯಕ ಮಂಗಳವಾರ ನಡೆಯಿತು.

39 ವಿದ್ಯಾರ್ಥಿಗಳು
ಪ್ರತಿ ವರ್ಷದ ನೀರಿನ ಕಟ್ಟಗಳ ನಿರ್ಮಾಣಕ್ಕೆ ಒತ್ತು ನೀಡುವ ಮುಗೇರು ಎಸ್ಟೇಟ್‌ನಲ್ಲಿ ಈ ಬಾರಿ ಆ ಕಾರ್ಯಕ್ಕೆ ಕನಕಮಜಲು ಯುವಕ ಮಂಡಲ ಜತೆ ಸೇರಿ ವಿದ್ಯಾರ್ಥಿಗಳು ಸಹಯೋಗ ನೀಡಿದರು. ಎನ್ನೆಸ್ಸೆಸ್‌ನ 39 ವಿದ್ಯಾರ್ಥಿಗಳು ಕಟ್ಟ ನಿರ್ಮಾಣದ ಕೆಲಸದಲ್ಲಿ ಭಾಗಿಯಾದರು. ನುರಿತ ಕೆಲ ಕೆಲಸಗಾರರ ಸಹಕಾರ ಪಡೆದು ಬೆಳಗ್ಗಿನಿಂದ ಸಂಜೆ ತನಕ ಈ ಕಾರ್ಯದಲ್ಲಿ ಕೈಜೋಡಿಸಿದರು. ಸಣ್ಣ ತೋಡಿಗೆ ಮರಳು ತುಂಬಿದ ಚೀಲ ಬಳಸಿ ಕಟ್ಟ ನಿರ್ಮಿಸಲಾಯಿತು. ಒಂದು ದಿನದಲ್ಲಿ ಎರಡು ಕಟ್ಟ ನಿರ್ಮಿಸಿ ನೀರು ಕೆಳಭಾಗಕ್ಕೆ ಹರಿಯದಂತೆ ತಡೆ ಒಡ್ಡು ನಿರ್ಮಿಸಲಾಯಿತು. ಈ ಮೂಲಕ ಮುಂದಿನ ಕೆಲವು ಸಮಯ ಇಲ್ಲಿ ನೀರು ನಿಂತು ಅಂತರ್ಜಲ ಸಂರಕ್ಷಣೆ ಸಾಧ್ಯವಾಗಲಿದೆ.

ಕನಸು ಬಿತ್ತಿದ ಯುವಕ ಮಂಡಲ
ಕನಕಮಜಲು ಯುವಕ ಮಂಡಲ ನೀರಿನ ಸಂರಕ್ಷಣೆಯ ನಿಟ್ಟಿನಲ್ಲಿ ಕಳೆದ 15 ವರ್ಷಗಳಿಂದ ಗ್ರಾಮದಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸುತ್ತಿದೆ. 2004-05ರಲ್ಲಿ ಜಲ ತಜ್ಞ ಶ್ರೀಪಡ್ರೆ ಅವರು ಮಾಹಿತಿ ನೀಡುವ ಮೂಲಕ ಈ ಕಾರ್ಯಕ್ಕೆ ಚಾಲನೆ ಸಿಕ್ಕಿತ್ತು. ಗ್ರಾಮದ ಬೇರೆ ಬೇರೆ ಭಾಗದಲ್ಲಿ ಪ್ರಾಯೋಗಿಕ ನೆಲೆಯಲ್ಲಿ ಆಸಕ್ತರ ಸಹಕಾರದೊಂದಿಗೆ ವರ್ಷಂಪ್ರತಿ ಒಂದು ಅಥವಾ ಎರಡು ಮಣ್ಣಿನ ಅಥವಾ ಮರಳು ಕಟ್ಟ ನಿರ್ಮಾಣಕ್ಕೆ ಕೈ ಜೋಡಿಸಿ ಇಡೀ ಗ್ರಾಮದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಜಲಸಂರಕ್ಷಣೆಯ ಅನಿವಾರ್ಯತೆ ಗರಿಷ್ಠ ಪ್ರಮಾಣದಲ್ಲಿರುವ ಕಾಲಘಟ್ಟವಿದು. ಹಾಗಾಗಿ ಪ್ರತಿ ವರ್ಷ ನೀರಿನ ಸಂರಕ್ಷಣೆಗೆ ಪೂರಕವಾಗಿ ಯುವಕ ಮಂಡಲ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಮುಂದಕ್ಕೆ ಜನರು ಸ್ವಯಂಪ್ರೇರಿತ ನೆಲೆಯಲ್ಲಿ ನೀರಿನ ಸಂರಕ್ಷಣೆಗೆ ಒತ್ತು ನೀಡಲು ಇದು ಸಹಕಾರಿ ಎಂಬ ನಿರೀಕ್ಷೆಯಿಂದ ಯುವಕ ಮಂಡಲದ ಜಾಗೃತಿ ಕಾರ್ಯದ ಆಶಯ.

ಯುವಕರಿಗೆ ಪ್ರೇರಣೆ
ಯುವಕ ಮಂಡಲವು ಮುಗೇರು ಎಸ್ಟೇಟ್‌ ಸಹಕಾರದಲ್ಲಿ ಎನ್ನೆಸ್ಸೆಸ್‌ ವಿದ್ಯಾರ್ಥಿಗಳ ಜತೆಗೂಡಿ ನೀರಿನ ಕಟ್ಟ ನಿರ್ಮಿಸಿ ಜಲ ಸಂರಕ್ಷಣೆಗೆ ಪ್ರೋತ್ಸಾಹ ನೀಡಿದೆ. ಯುವ ಸಮುದಾಯವನ್ನು ಪ್ರೇರೇಪಿಸುವ ಪ್ರಯತ್ನ ಎನ್ನುತ್ತಾರೆ ಕನಕಮಜಲು ಯುವಕ ಮಂಡಲದ ಮಾಜಿ ಅಧ್ಯಕ್ಷ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ.

ಒಳ್ಳೆಯ ಅನುಭವ
ವಿದ್ಯಾರ್ಥಿಗಳನ್ನು ನೀರಿನ ಸಂರಕ್ಷಣೆಯ ಪಾಠಕ್ಕೆ ಒಡ್ಡಿಕೊಳ್ಳುತ್ತಿರುವುದು ಇದು ಎರಡನೇ ವರ್ಷ. ಕಳೆದ ಬಾರಿಯೂ ಕನಕಮಜಲಿನ ಯುವಕ ಮಂಡಲದ ಸಹಕಾರ ಪಡೆದು ಇಂತಹ ನೀರಿನ ಕಟ್ಟ ನಿರ್ಮಾಣದಲ್ಲಿ ಪಾಲ್ಗೊಂಡಿದ್ದೇವೆ. ಎನ್ನೆಸ್ಸೆಸ್‌ ವಿದ್ಯಾರ್ಥಿಗಳಿಗೆ ಇದೊಂದು ಒಳ್ಳೆಯ ಅನುಭವ.
– ಧನರಾಜ್‌, ಎನ್ನೆಸ್ಸೆಸ್‌ ಕಾರ್ಯಕ್ರಮ ಸಂಯೋಜಕ, ಸುಳ್ಯ ಸ.ಪ್ರ.ದ. ಕಾಲೇಜು

-  ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.