![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 23, 2020, 11:21 PM IST
ರೈಲ್ವೇ ಮೂಲಕ ಅಡಿಕೆ ಸಾಗಾಟಕ್ಕೆ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಚಾಲನೆ ನೀಡಿದರು.
ಪುತ್ತೂರು: ರೈಲುಗಳ ಮೂಲಕ ರೈತರು ಸಂಚರಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆಶಯಕ್ಕೆ ಪೂರಕ ಎಂಬಂತೆ ಕೃಷಿಕರ ಉತ್ಪನ್ನಗಳನ್ನು ಪುತ್ತೂರಿ ನಿಂದ ಗುಜರಾತ್‌ಗೆ ರೈಲಿನ ಮೂಲಕ ಸಾಗಾಟ ಮಾಡುವ ಪ್ರಯತ್ನ ಆರಂಭಗೊಂಡಿದೆ. ಈ ಮೂಲಕ ರೈತರ ರೈಲು ಪಯಣದ ಕನಸು ಈಡೇರಿದೆ ಎಂದು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದರು.
ಕೊಂಕಣ ರೈಲ್ವೇ ಮೂಲಕ ಗುಜರಾತ್‌ಗೆ ಅಡಿಕೆ ಸಾಗಾಟಕ್ಕೆ ಬುಧವಾರ ಪುತ್ತೂರು ಎಪಿಎಂಸಿ ಪ್ರಾಂಗಣದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಬಳಿಕ ಅವರು ಮಾತನಾಡಿ ದರು. ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ರೈತರು ಬೆಳೆಯುವ ಕೃಷಿ ಉತ್ಪನ್ನ ವನ್ನು ರೈಲಿನಲ್ಲಿ ಸಾಗಿಸುವ ಮೂಲಕ ರೈತರಿಗೆ ಅನುಕೂಲವಾಗಲಿದೆ. ರಾಜ್ಯದ ಎಲ್ಲ ಕಡೆಗಳಲ್ಲಿ ಈ ಕಾರ್ಯ ಆರಂಭವಾಗಬೇಕು. ಕ್ಯಾಂಪ್ಕೋ ಸಂಸ್ಥೆ ಇದಕ್ಕೆ ಬೆನ್ನೆಲುಬಾಗಿ ನಿಲ್ಲಲಿದೆ ಎಂದರು.
ಅ. 3ಕ್ಕೆ ಅಧಿಕೃತ ಚಾಲನೆ
ಎಪಿಎಂಸಿ ಅಧ್ಯಕ್ಷ ದಿನೇಶ ಮೆದು ಮಾತನಾಡಿ, ಹಳ್ಳಿ-ಹಳ್ಳಿಗಳಲ್ಲಿರುವ ರೈತರು ಬೆಳೆಯುವ ಕೃಷಿ ಉತ್ಪನ್ನಗಳು ರೈಲುಗಳ ಮೂಲಕ ದೂರದ ಗುಜರಾತನ್ನು ಕಡಿಮೆ ವೆಚ್ಚದಲ್ಲಿ ತಲುಪಬೇಕು, ಉತ್ತಮ ಧಾರಣೆ ಸಿಗಬೇಕು ಎಂಬ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರಕ್ಕೆ ಪುತ್ತೂರು ಶಾಸಕರ ನೇತೃತ್ವದಲ್ಲಿ 2-3 ಸಭೆಗಳನ್ನು ರೈಲ್ವೇ ಅಧಿಕಾರಿಗಳು, ಎಂಜಿನಿಯರ್‌ಗಳ ಮೂಲಕ ನಡೆಸಲಾಗಿತ್ತು. ಇದೀಗ ಶ್ರಮ ಸಾಕಾರಗೊಂಡಿದೆ. ಸೆ. 26ರ ತನಕ ಪ್ರಾಯೋಗಿವಾಗಿ ಅಡಿಕೆ ಸಾಗಾಟ ಮಾಡಲಾಗುವುದು. ಅ. 3ಕ್ಕೆ ಈ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುವುದು ಎಂದರು.
ಕೊಂಕಣ ರೈಲ್ವೇ ಎಂಜಿನಿಯರ್‌ಗಳಾದ ಡಿ.ವಿ. ಸುರೇಶ್ ಗೌಡ, ವಿನಯ ಕುಮಾರ್, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಎಪಿಎಂಸಿ ಸದಸ್ಯರಾದ ಬೂಡಿಯಾರ್ ರಾಧಾಕೃಷ್ಣ ರೈ, ತ್ರಿವೇಣಿ ಪೆರೊÌàಡಿ, ಎಚ್. ಅಬ್ದುಲ್ ಶುಕೂರ್, ನಾಮ ನಿರ್ದೇಶಿತ ಸದಸ್ಯ ಬಾಲಕೃಷ್ಣ ಜೋಯಿಸ್, ಕೃಷ್ಣ ಕುಮಾರ್, ಕಾರ್ಯದರ್ಶಿ ರಾಮಚಂದ್ರ, ವರ್ತಕರ ಸಂಘದ ಗೌರವ ಅಧ್ಯಕ್ಷ ಶಶಾಂಕ್ ಕೊಟೇಚಾ, ಅಧ್ಯಕ್ಷ ರವೀಂದ್ರನಾಥ ರೈ ಬಳ್ಳಮಜಲು, ಬಿಜೆಪಿ ಗ್ರಾಮಾಂತರ ಮಂಡಲದ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ ಉಪಸ್ಥಿತರಿದ್ದರು.
ಎಪಿಎಂಸಿ ಪ್ರಾಂಗಣದಲ್ಲಿರುವ ನಾಗ ಸನ್ನಿಧಿಯಲ್ಲಿ ಪೂಜಾ ವಿಧಿವಿಧಾನ ನೆರವೇರಿಸಿ ಬಳಿಕ ತೆಂಗಿನಕಾಯಿ ಒಡೆದು ಅಡಿಕೆ ಸಾಗಾಟದ ಲಾರಿಗೆ ಚಾಲನೆ ನೀಡಲಾಯಿತು. ಖಾಸಿಂ ಹಾಜಿ ಮತ್ತು ಸಿನಾನ್ ಅವರ ಟ್ರಾನ್ಸ್ ಪೋರ್ಟ್ ಮೂಲಕ ಸಾಗಾಟ ನಡೆಯಿತು. ಸದಸ್ಯ ಬಾಲಕೃಷ್ಣ ಬಾಣಜಾಲು ವಂದಿಸಿದರು. ಉಪಾಧ್ಯಕ್ಷ ಎನ್.ಎಸ್. ಮಂಜುನಾಥ್ ಕಾರ್ಯಕ್ರಮ ನಿರ್ವಹಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.