ಅಡಿಕೆ ಹಳದಿ ರೋಗಕ್ಕೆ  ಬೇಕಿದೆ ಶಾಶ್ವತ ಪರಿಹಾರ ಕ್ರಮ

Team Udayavani, Aug 9, 2021, 4:30 AM IST

ಅಡಿಕೆ ಹಳದಿ ರೋಗಕ್ಕೆ  ಬೇಕಿದೆ  ಶಾಶ್ವತ ಪರಿಹಾರ ಕ್ರಮ

ತೋಟಗಾರಿಕ ಬೆಳೆಯಾಗಿರುವ ಅಡಿಕೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ತಾಲೂಕುಗಳ ಕೃಷಿಕರ ಜೀವನಕ್ಕೆ ಆಧಾರವಾಗಿದೆ. ಧಾರಣೆಯ ಏರಿಳಿತಗಳ ಹೊರತಾಗಿಯೂ ಈ ಭಾಗಗಳ ಜನ ಅಡಿಕೆ ಬೆಳೆಯನ್ನೇ ಅವಲಂಬಿಸಿದ್ದಾರೆ. ದಶಕಗಳ ಹಿಂದೆ ಅಡಿಕೆ ಮರಗಳಿಗೆ ತಗಲಿದ ಹಳದಿ ರೋಗವೆಂಬ ಹೆಮ್ಮಾರಿ ಈಗ ಹೆಮ್ಮರವಾಗಿ ಬೆಳೆದು ಎಕರೆಗಟ್ಟಲೆ ಅಡಿಕೆ ತೋಟಗಳನ್ನು ನಾಶ ಮಾಡಿದೆ. ಪುತ್ತೂರು, ಸುಳ್ಯ, ಕಡಬ ತಾಲೂಕಿನ ಹಲವೆಡೆ ಅಡಿಕೆ ಮರಗಳನ್ನು ಬಾಧಿಸಿರುವ ಈ ರೋಗಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸರಕಾರದ ಇಲಾಖೆಗಳಿಗಾಗಲಿ, ತೋಟಗಾರಿಕ ತಜ್ಞರಿಗಾಗಲಿ ಇನ್ನೂ ಸಾಧ್ಯವಾಗಿಲ್ಲ. ವರ್ಷಗಳುರುಳಿದಂತೆ ಹಳದಿ ರೋಗದ ಸಮಸ್ಯೆ ಅಧಿಕಗೊಳ್ಳುತ್ತಲೇ ಸಾಗಿದ್ದು ಬೆಳೆಗಾರರ ಪಾಲಿಗೆ ಇದೊಂದು ಬಗೆಹರಿಯದ ಜಟಿಲ ಸಮಸ್ಯೆಯಾಗಿಯೇ  ಉಳಿದಿದೆ.

ಅಡಿಕೆಗೆ ಮಾರುಕಟ್ಟೆಯಲ್ಲಿ ಸೂಕ್ತ ಧಾರಣೆ, ಬೇಡಿಕೆ ಇರುವ ಸಂದರ್ಭದಲ್ಲಿಯೇ ಹಳದಿ ರೋಗಕ್ಕೆ ಅಡಿಕೆ ಮರಗಳು ತುತ್ತಾಗುತ್ತಿರುವುದು ಬೆಳೆಗಾರರನ್ನು ಆತಂಕದ ಮಡುವಿಗೆ ತಳ್ಳಿದೆ.   ಸುಳ್ಯದ ಸಂಪಾಜೆಯಲ್ಲಿ ಹಲವು ದಶಕಗಳ ಹಿಂದೆ ಕಾಣಿಸಿಕೊಂಡ ಅಡಿಕೆ ಹಳದಿ ರೋಗವೀಗ ಹತ್ತಾರು ಗ್ರಾಮಗಳ ಅಡಿಕೆ ತೋಟಗಳಿಗೆ ವ್ಯಾಪಿಸಿದೆ. ಈಗಾಗಲೇ ಪುತ್ತೂರು ತಾಲೂಕಿನ ಕೆಲವೆಡೆ ಅಡಿಕೆ ತೋಟಗಳಿಗೂ ಹಳದಿ ರೋಗ ಕಾಲಿಟ್ಟಿದ್ದು   ತೀವ್ರ ಗತಿಯಲ್ಲಿ ವ್ಯಾಪಿಸುತ್ತಿದೆ.

ಹಲವಾರು ವರ್ಷಗಳಿಂದ ಹಳದಿ ರೋಗದ  ಕುರಿತಂತೆ ನಿರಂತರವಾಗಿ ಸಂಶೋಧನೆ, ಅಧ್ಯಯನಗಳು ನಡೆಯುತ್ತಲೇ ಬಂದಿವೆಯಾದರೂ ಇಂದಿಗೂ ಈ ರೋಗ ತಡೆಗಟ್ಟಲು ಔಷಧ ಕಂಡುಹಿಡಿಯುವಲ್ಲಿ ಸಂಶೋಧನ ಕೇಂದ್ರಗಳು ಸಫಲವಾಗಿಲ್ಲ. ಸಾವಯವ, ವೈಜ್ಞಾನಿಕ ಮಾದರಿಯಲ್ಲಿ ರೋಗ ತಡೆಯುವ ಪ್ರಯತ್ನಗಳು ಮುಂದುವರಿದಿವೆಯಾದರೂ ಇವ್ಯಾವೂ ಶಾಶ್ವತ ಫಲ ನೀಡಿಲ್ಲ.

ಶೇ. 85ಕ್ಕೂ ಅಧಿಕ ಭಾಗ ಕೃಷಿಯಿಂದ ಆವೃತವಾಗಿರುವ ಈ 3 ತಾಲೂಕುಗಳಲ್ಲಿ ಹಳದಿ ರೋಗ ವ್ಯಾಪಿಸಿದ ತೋಟಗಳಲ್ಲಿ ಅಡಿಕೆ ಮರಗಳು ಸಂಪೂರ್ಣ ನಾಶವಾಗಿವೆ. ರೋಗದ ತೀವ್ರತೆಯಿಂದಾಗಿ ಹಿಂದೆ ಅಡಿಕೆ ತೋಟಗಳಿದ್ದ ಜಾಗದಲ್ಲಿ ಪುನಃ ಅಡಿಕೆ ಕೃಷಿ ಸಾಧ್ಯವಾಗುತ್ತಿಲ್ಲ. ರೋಗ ಬಾಧಿಸಿದ ತೋಟದಲ್ಲಿ ಹೊಸದಾಗಿ ಅಡಿಕೆ ಗಿಡ ನೆಟ್ಟರೂ ಅವು ಚಿಗುರುತ್ತಿಲ್ಲ. ಹತ್ತಾರು ವಿಜ್ಞಾನಿಗಳ ತಂಡ ಹಲವು ಪರೀಕ್ಷೆಗಳನ್ನು ನಡೆಸಿದರೂ ರೋಗದ ಮೂಲ ಪತ್ತೆ, ನಿಯಂತ್ರಣ ಕ್ರಮ, ಶಾಶ್ವತ ಪರಿಹಾರ ಇವೆಲ್ಲವೂ ಇಂದಿಗೂ ಬಗೆಹರಿಯದ ಸಮಸ್ಯೆಗಳಾಗಿಯೇ ಉಳಿದಿವೆ.

ಹಳದಿ ರೋಗದ ಸಮಸ್ಯೆ ಉಲ್ಬಣಿಸಿದಾಗಲೆಲ್ಲ ಅಡಿಕೆ ಬೆಳೆಗಾರರ ನಿಯೋಗ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಬಳಿಗೆ ತೆರಳಿ ನಷ್ಟಕ್ಕೆ ಪರಿಹಾರ, ನಿಯಂತ್ರಣ ಕ್ರಮಗಳ ಬಗೆಗೆ ಬೇಡಿಕೆ ಸಲ್ಲಿಸುತ್ತಲೇ ಬಂದಿದೆ. ಆದರೆ ಇದುವರೆಗೂ ಬೆಳೆಗಾರರ ಬೇಡಿಕೆಗೆ ಸೂಕ್ತ ಸ್ಪಂದನೆ ದೊರಕಿಲ್ಲ. ಹಳದಿ ರೋಗ ಪೀಡಿತ ಪ್ರದೇಶದ ಅಡಿಕೆ ಬೆಳೆಗಾರರ ನೆರವಿಗೆ ಪ್ಯಾಕೇಜ್‌ ಘೋಷಿಸುವ ಭರವಸೆಯನ್ನು ಸಚಿವರು, ಅಧಿಕಾರಿಗಳು ನೀಡಿದರೂ ಅದಿನ್ನೂ ಜಾರಿ ಆಗಿಲ್ಲ. ಇತ್ತ ಜಿಲ್ಲೆಯ ನೂತನ ಸಚಿವರು ತತ್‌ಕ್ಷಣ ಗಮನಹರಿಸಿ ಅಡಿಕೆ ಬೆಳೆಗಾರರ ಗೋಳಿಗೆ ಸ್ಪಂದಿಸಬೇಕಿದೆ.

-ಸಂ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.