‘ಅಧಿಕಾರಿ-ಜನಪ್ರತಿನಿಧಿಗಳಿಗೆ ಜವಾಬ್ದಾರಿ ಇದೆ’


Team Udayavani, Jul 20, 2018, 1:19 PM IST

20-july-12.jpg

ವಿಟ್ಲ : ಬಡವರಿಗೆ, ಅಸಹಾಯಕರಿಗೆ ಒದಗಿಸುವ ಸೌಲಭ್ಯಗಳಿಂದ ಯಾವುದೇ ಸಮಸ್ಯೆಗಳು ಸೃಷ್ಟಿಯಾಗುವುದಿಲ್ಲ. ಅಧಿಕಾರಿಗಳು ಕಂದಾಯ ಅದಾಲತ್‌ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಾಗ ಉದ್ದೇಶ ಈಡೇರುತ್ತದೆ. ನಾಗರಿಕರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಲ್ಲಿ ಅಧಿಕಾರಿಗಳಿಗೂ ಜನಪ್ರತಿನಿಧಿಗಳಿಗೂ ಜವಾಬ್ದಾರಿ ಇದೆ ಎಂದು ಜಿ.ಪಂ. ಸದಸ್ಯ ಎಂ.ಎಸ್‌. ಮಹಮ್ಮದ್‌ ಹೇಳಿದರು.

ಅವರು ಗುರುವಾರ ವಿಟ್ಲ ಮಾದರಿ ಶಾಲೆಯ ಶತಮಾನೋತ್ಸವ ಕಟ್ಟಡದಲ್ಲಿ ಕಂದಾಯ ಇಲಾಖೆ, ಬಂಟ್ವಾಳ ತಾಲೂಕು ಕಚೇರಿ ವತಿಯಿಂದ ವಿಟ್ಲ ಹೋಬಳಿ ವ್ಯಾಪ್ತಿಗೆ ಸೇರಿದ ಎಲ್ಲ ಗ್ರಾಮಗಳ ಕಂದಾಯ ಅದಾಲತ್‌ ಹಾಗೂ ಪಿಂಚಣಿ ಅದಾಲತ್‌ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿ.ಪಂ. ಸದಸ್ಯೆ ಜಯಶ್ರೀ ಕೋಡಂದೂರು ಮಾತನಾಡಿ, ಪ್ರತಿಯೊಬ್ಬ ಫಲಾನುಭವಿಗೂ ಸರಕಾರದ ಯೋಜನೆಗಳು ತಲುಪಲು ಅಧಿಕಾರಿಗಳ ಪ್ರಾಮಾಣಿಕ ಪ್ರಯತ್ನ ಅವಶ್ಯ. ಕೇರಳದ ಅಧಿಕಾರಿಗಳು ಸಮರ್ಪಕವಾದ ದಾಖಲೆ ನೀಡದಿರುವ ಪರಿಣಾಮವಾಗಿ ಅಲ್ಲಿಂದ ಬಂದವರಿಗೆ ದಾಖಲೆಗಳ ಸಮಸ್ಯೆ ಕಾಡುತ್ತಿದೆ. ಕಾಸರಗೋಡು ಜಿಲ್ಲೆಯಿಂದ ಬಂದು ಕರ್ನಾಟಕ ರಾಜ್ಯದಲ್ಲಿ ನೆಲೆಸಿರುವ ಪ.ಜಾ./ ಪರಿಶಿಷ್ಟ ಪಂಗಡದವರಿಗೆ ಮಾನವೀಯ ನೆಲೆಯಲ್ಲಿ ದಾಖಲೆ ನೀಡಲು ಸ್ಥಳೀಯ ಅಧಿಕಾರಿಗಳು ಮುಂದಾಗಬೇಕು ಎಂದು ಆಗ್ರಹಿಸಿದರು.

ವಿಟ್ಲ ಪ.ಪಂ. ಉಪಾಧ್ಯಕ್ಷ ಜಯಂತ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಅಲಿ, ತಾ.ಪಂ. ಸದಸ್ಯೆ ಗೀತಾ ಚಂದ್ರಶೇಖರ್‌, ತಾ.ಪಂ. ಸದಸ್ಯೆ ಶೋಭಾ ರೈ, ವಿಟ್ಲ ಪ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ವಿ. ರಾಮದಾಸ ಶೆಣೈ, ಪ.ಪಂ. ವಿಪಕ್ಷ ನಾಯಕ ಅಶೋಕ್‌ ಕುಮಾರ್‌ ಶೆಟ್ಟಿ, ಮುಖ್ಯಾಧಿಕಾರಿ ಮಾಲಿನಿ, ವಿಟ್ಲಪಟ್ನೂರು ಗ್ರಾ.ಪಂ. ಅಧ್ಯಕ್ಷ ರವೀಶ್‌ ಶೆಟ್ಟಿ ಕರ್ಕಳ, ವಿಟ್ಲಮುಟ್ನೂರು ಗ್ರಾ.ಪಂ. ಅಧ್ಯಕ್ಷೆ ಪ್ರೇಮಲತಾ, ಅಳಿಕೆ ಗ್ರಾ.ಪಂ. ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಕೇಪು ಗ್ರಾ.ಪಂ. ಅಧ್ಯಕ್ಷ ತಾರಾನಾಥ ಆಳ್ವ, ಪೆರುವಾಯಿ ಗ್ರಾ.ಪಂ. ಅಧ್ಯಕ್ಷ ರಾಲ್ಫ್ ಡಿ’ಸೋಜಾ, ಕರೋಪಾಡಿ ಗ್ರಾ.ಪಂ.ಅಧ್ಯಕ್ಷೆ ಬೇಬಿ ಆರ್‌. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಉಪತಹಶೀಲ್ದಾರ್‌ ರವಿಶಂಕರ ಸಿ.ಎಂ., ಕಂದಾಯ ನಿರೀಕ್ಷಕ ದಿವಾಕರ್‌ ಇಲಾಖೆಯ ಮಾಹಿತಿ ನೀಡಿದರು. ವಿವಿಧ ಗ್ರಾಮಗಳ ಗ್ರಾಮಕರಣಿಕರು, ಗ್ರಾಮ ಸಹಾಯಕರು ವಿವಿಧ ದೂರುಗಳನ್ನು ಸ್ವೀಕರಿಸಿದರು.

ಉಪಯುಕ್ತ 
ಜಿ.ಪಂ. ಸದಸ್ಯೆ ಮಂಜುಳಾ ಮಾಧವ ಮಾವೆ ಮಾತನಾಡಿ, ಕಂದಾಯ ಅದಾಲತ್‌ ಬಡವರಿಗೆ ಅತ್ಯಂತ ಉಪಯುಕ್ತವಾಗಿದೆ. ಅವರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅದಾಲತ್‌ ಪ್ರಮುಖ ಪಾತ್ರ ವಹಿಸುತ್ತದೆ. ಅಧಿಕಾರಿಗಳು ಅವರಿಗೆ ತತ್‌ಕ್ಷಣ ಸ್ಪಂದಿಸಿ, ಅದಾಲತ್‌ ಅನ್ನು ಯಶಸ್ವಿಗೊಳಿಸಬೇಕು. ಪ್ರಾಮಾಣಿಕ ಹಾಗೂ ಉತ್ತಮ ಸೇವೆ ನೀಡಿದಾಗ ಈ ಯೋಜನೆ ಫಲಪ್ರದವಾಗುತ್ತದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.