Forest Dept: ಅರಣ್ಯ ಪ್ರದೇಶದಲ್ಲಿದೆ ಎಂದು ಬಡಮಂದಿಯ ಮನೆ ಫೌಂಡೇಶನ್ ಕಿತ್ತೆಸೆದ ಅಧಿಕಾರಿಗಳು
ಕೆಡವಿದ ಮನೆ ಕಟ್ಟಿ ಗೃಹಪ್ರವೇಶ ಮಾಡಿಸಿದ ಶಾಸಕರು
Team Udayavani, Oct 7, 2023, 3:25 PM IST
ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿದ್ದ ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಮುಂದಾದ ಕುಟುಂಬದ ಫೌಂಡೇಶನ್ ಕಿತ್ತೆಸೆದು ಅರಣ್ಯ ಇಲಾಖೆ ದರ್ಪ ತೋರಿದ ಘಟನೆ ನಡೆದಿದೆ.
ಕಳೆಂಜ ಗ್ರಾದಮದ ಅಮ್ಮಿಡ್ಕ ಕುದ್ದಮನೆ ಸೇಸ ಗೌಡ ಎಂಬವರ ಕುಟುಂಬ ಸುಮಾರು 150 ವರ್ಷದ ಹಿಂದೆ ತಮ್ಮ ಸ್ವಾಧೀನದ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿತ್ತು. ಆದರೆ ಅ.6 ರಂದು ಅರಣ್ಯ ಇಲಾಖೆ ಫೌಂಡೇಶನ್ ಕಿತ್ತೆಸೆದು ಬಡ ಕುಟುಂಬದ ಮುಂದೆ ದರ್ಪ ತೋರಿರುವ ಬಗ್ಗೆ ಮನೆ ಮಗ ನೊಂದು ಆತ್ಮಹತ್ಯೆಗೆ ಮುಂದಾಗಿದ್ದ.
ಘಟನೆ ವಿಚಾರ ತಿಳಿದು ಶಾಸಕ ಹರೀಶ್ ಪೂಂಜ ಅ.7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಸ್ಥಳದಲ್ಲೆ ಶೆಡ್ ನಿರ್ಮಾಣಕ್ಕೆ ಮುಂದಾದರು. ಈ ವೇಳೆ ಅರಣ್ಯ ಇಲಾಖೆ ಮತ್ತು ಶಾಸಕರ ಮಧ್ಯೆ ಗಂಭೀರ ಮಾತಿನ ಚಕಮಕಿಗೆ ಕಾರಣವಾಯಿತು.
309 ಸರ್ವೇ ನಂಬರ್ ನಲ್ಲಿ ಸುಮಾರು 120ಕ್ಕೂ ಅಧಿಕ ಮಂದಿ ವಾಸವಾಗಿದ್ದಾರೆ. ಆದರೆ ಇದು ಅರಣ್ಯ ಎಂದಿರುವುದರಿಂದ ಅರಣ್ಯ ಇಲಾಖೆ ಮನೆ ಕೆಡವಿದೆ. ಮನೆ ಮಂದಿಗೆ ಯಾವುದೇ ನೋಟಿಸ್ ಮಾಹಿತಿ ನೀಡದೆ ತೆರವುಗೊಳಿಸಿದ್ದಾರೆ ಎಂದು ಶಾಸಕರ ಸಮ್ಮುಖದಲ್ಲಿ ಊರವರೊಡಗೂಡಿ ತಾತ್ಕಾಲಿಕ ಶೆಡ್ ನಿರ್ಮಿಸಿದರು. ಇದಕ್ಕೆ ಅಡ್ಡಿಪಡಿಸುವ ಮೊದಲು ಕಂದಾಯ ಇಲಾಖೆ ಹಾಗೂ ಅರಣ್ಯ ಜಂಟಿ ಸರ್ವೇ ನಡೆಸಿ ಬಳಿಕ ತೆರವುಗೊಳಿಸಿ ಎಂದು ಸೂಚಿಸಿದರು.
ಸ್ಥಳದಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಕರೆ ಮಾಡಿದ ಶಾಸಕ ಹರೀಶ್ ಪೂಂಜ, ಸಮಸ್ಯೆ ಬಗ್ಗೆ ಮನವರಿಕೆ ಮಾಡಿದರು. ಸಚಿವರು ಸದ್ಯ ತೆರವುಗೊಳಿಸದಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಮೇಲಧಿಕಾರಿಗಳಿಂದ ವರದಿ ಪಡೆದು ಬಳಿಕ ನಿರ್ಧಾರ ತೆಗೆದುಕೊಳ್ಳುವಂತೆ ಆದೇಶಿಸಿದರು.
ಪುತ್ತೂರು ಎಸಿಎಫ್ ಸುಬ್ಬಯ್ಯ ನಾಯ್ಕ್, ಉಪ್ಪಿನಂಗಡಿ ಅರಣ್ಯಧಿಕಾರಿ ಜಯಪ್ರಕಾಶ್, ಕಳೆಂಜ ಉಪ ವಲಯರಣ್ಯಾಧಿಕಾರಿ ಪ್ರಶಾಂತ್, ಎಸ್ಐ ಧರ್ಮಸ್ಥಳ ಸಮರ್ಥ್ ಸ್ಥಳದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.