Kadaba: ಓಮ್ನಿ-ಕ್ರೆಟಾ ಕಾರು ಡಿಕ್ಕಿ; ಓಮ್ನಿ ಚಾಲಕ ಮೃತ್ಯು, 8 ಮಂದಿ ಗಂಭೀರ ಗಾಯ
Team Udayavani, Dec 23, 2023, 3:38 PM IST
ಕಡಬ: ಓಮ್ನಿ ಹಾಗೂ ಕ್ರೆಟಾ ಕಾರು ಢಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಡಿ.23ರ ಶನಿವಾರ ಮಧ್ಯಾಹ್ನ ನಡೆದಿದೆ.
ಓಮ್ನಿ ಚಲಾಯಿಸುತ್ತಿದ್ದ ಸೋಮವಾರ ಪೇಟೆಯ ಚೌಡ್ಲು ಗ್ರಾಮದ ಕೆಂಚುಮನೆ ನಿವಾಸಿ ರವಿ (53) ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ರವಿ ಅವರ ತಾಯಿ ಮಣಿಯಮ್ಮ(75), ಪತ್ನಿ ವಾಣಿ (47), ಪುತ್ರಿ ರಿಷಾ (19), ಪುತ್ರ ಶರಣ್ (10), ಸಹೋದರ ಯೋಗೇಶ್ (55), ಅವರ ಪತ್ನಿ ನೀತು (45), ಪುತ್ರಿ ನೇಹಾ (24), ಪುತ್ರ ಅಂಜನ್ (14) ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತಿರುವಿನಲ್ಲಿ ರಸ್ತೆ ಕಿರಿದಾಗಿದ್ದು ರಸ್ತೆಗೆ ತಾಗಿದಂತೆ ಇರುವ ವಿದ್ಯುತ್ ಕಂಬದಿಂದಾಗಿ ಅಲ್ಲಿ ಹಲವು ಅಪಘಾತಗಳು ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.