Bantwal ಸಂಚಾರ ಪೊಲೀಸರಿಂದ ಎಲ್ಇಡಿ ಲೈಟ್ ವಿರುದ್ಧ ಕಾರ್ಯಾಚರಣೆ
Team Udayavani, Jul 10, 2024, 9:57 PM IST
ಬಂಟ್ವಾಳ: ಕೇಂದ್ರ ಮೋಟಾರು ವಾಹನ ಕಾಯ್ದೆಯ ನಿಯಮ ಉಲ್ಲಂಘಿಸಿ ಎಲ್ಇಡಿ ಲೈಟ್ ಅಳವಡಿಸಿರುವ ವಾಹನಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ಬಂಟ್ವಾಳ ಸಂಚಾರ ಪೊಲೀಸರು ಬುಧವಾರ ಬಿ.ಸಿ.ರೋಡಿನಲ್ಲಿ ವಾಹನಗಳ ಎಲ್ಇಡಿ ಲೈಟ್ಗಳನ್ನು ತೆರವು ಮಾಡಿಸಿದರು.
ಬಂಟ್ವಾಳ ಸಂಚಾರ ಠಾಣಾ ಪಿಎಸ್ಐ ಸುತೇಶ್ ಕೆ.ಪಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮೊದಲ ಹಂತದಲ್ಲಿ ಬಿ.ಸಿ.ರೋಡು, ಕೈಕಂಬ ಭಾಗದಲ್ಲಿ ಆಟೋ ರಿಕ್ಷಾಗಳಲ್ಲಿ ಹಾಕಿರುವ ಎಲ್ಇಡಿ ಲೈಟ್ಗಳನ್ನು ತೆರವು ಮಾಡಿಸಿ ಎಚ್ಚರಿಕೆ ನೀಡಿದರು. ಮುಂದಿನ ದಿನಗಳಲ್ಲಿ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳ್ಳಲಿದ್ದು, ಆಟೋಗಳ ಜತೆಗೆ ಇತರ ವಾಹನ ಲೈಟ್ಗಳನ್ನೂ ತೆರವು ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗಿನ ದಿನಗಳಲ್ಲಿ ಸಾಕಷ್ಟು ವಾಹನಗಳಲ್ಲಿ ಕಾನೂನು ಮೀರಿ ಪ್ರಖರ ಬೆಳಕು ಹೊರಹಾಕುವ ಎಲ್ಇಡಿ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಇದರಿಂದ ಎದುರು ಭಾಗದಲ್ಲಿ ಸಂಚರಿಸುವ ವಾಹನಗಳಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಜತೆಗೆ ಇದು ಅಪಘಾತಗಳಿಗೂ ಕಾರಣವಾಗುತ್ತಿದೆ. ಪ್ರತಿ ವಾಹನಗಳು ಕೂಡ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಹೆಡ್ಲೈಟ್ಗಳನ್ನು ಅಳವಡಿಸಬೇಕಿದೆ.
ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177ರಡಿ ಪ್ರಕರಣ ದಾಖಲಿಸಲಾಗುತ್ತಿದೆ. ನಿಯಮ ಮೀರಿ ಎಲ್ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ತಿಂಗಳಿನಿಂದ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲು ಆದೇಶವಿದೆ ಎಂದು ಬಂಟ್ವಾಳ ಸಂಚಾರ ಪಿಎಸ್ಐ ಸುತೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.