ಪಟ್ಟೆ-ಪುಳಿತ್ತಡಿ: ತಡೆಗೋಡೆಯಿಲ್ಲದ ಅಪಾಯಕಾರಿ ಕೆರೆ

ತಡೆಬೇಲಿ ನಿರ್ಮಿಸಿ ಅಪಾಯ ತಪ್ಪಿಸಿ; ಇಲ್ಲವೇ ಕೆರೆಯನ್ನು ಮುಚ್ಚಿ: ನಾಗರಿಕರ ಆಗ್ರಹ

Team Udayavani, Sep 12, 2019, 5:00 AM IST

e-27

ಬಡಗನ್ನೂರು: ಗ್ರಾಮದ ಪಟ್ಟೆಯಿಂದ ಪುಳಿತ್ತಡಿಗೆ ತೆರಳುವ ಒಳರಸ್ತೆಯ ಬದಿಯಲ್ಲಿ ತಡೆಗೋಡೆಯಿಲ್ಲದ ಅಪಾಯಕಾರಿ ಕೆರೆ ಇದ್ದು, ಇಲ್ಲಿ ತಡೆಬೇಲಿ ನಿರ್ಮಿಸಬೇಕು ಅಥವಾ ಕೆರೆಯನ್ನು ಮುಚ್ಚುವ ಮೂಲಕ ಅಪಾಯವನ್ನು ತಪ್ಪಿಸುವಂತೆ ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.

ಈ ರಸ್ತೆಯು ಈಶ್ವರಮಂಗಲ ಹನುಮಗಿರಿ, ಗೆಜ್ಜೆಗಿರಿ ನಂದನಬಿತ್ತಿಲು ಕ್ಷೇತ್ರಕ್ಕೆ ತೆರಳುವ ಒಳ ರಸ್ತೆಯಾಗಿದೆ. ಕ್ಷೇತ್ರಕ್ಕೆ ತೆರಳುವ ಯಾತ್ರಿಕರು ಈ ಮಾರ್ಗವಾಗಿ ತೆರಳುತ್ತಿದ್ದಾರೆ. ವಿಶೇಷ ಸಂದರ್ಭದಲ್ಲಿ ಈ ರಸ್ತೆಯ ಮೂಲಕ ಹೆಚ್ಚಿನ ವಾಹನಗಳು ಸಂಚರಿಸುತ್ತವೆ. ರಸ್ತೆಗೆ ಹೊಂದಿಕೊಂಡೇ ಕೆರೆ ಇರುವ ಕಾರಣ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಉಂಟಾಗುವ ಸಾಧ್ಯತೆ ಇದೆ. ಶಾಲಾ ಮಕ್ಕಳು ಇದೇ ರಸ್ತೆಯಾಗಿ ತೆರಳುತ್ತಿದ್ದು, ಜೋರಾಗಿ ಮಳೆ ಬಂದರೆ ಕೆರೆಯಲ್ಲಿ ನೀರು ತುಂಬಿಕೊಳ್ಳುತ್ತದೆ. ರಸ್ತೆಯ ಒಂದು ಬದಿಯಲ್ಲಿ ಕೆರೆ ಇದ್ದು, ಇನ್ನೊಂದು ಬದಿಯಲ್ಲಿ ಹೊಳೆ ಹರಿಯುತ್ತಿರುವ ಕಾರಣ ಈ ಭಾಗ ಅತ್ಯಂತ ಅಪಾಯಕಾರಿಯಾಗಿದೆ. ಇಲ್ಲಿ ಯಾವುದೇ ವಾಹನಗಳು ಸೈಡ್‌ ಕೊಡುವ ಹಾಗಿಲ್ಲ. ಓವರ್‌ಟೇಕ್‌ ಮಾಡಿದ್ದಲ್ಲಿ ವಾಹನಗಳು ಕೆರೆ ಅಥವಾ ಹೊಳೆಗೆ ಬೀಳುವುದು ನಿಶ್ಚಿತ.

ಮನವಿ ಮಾಡಿದರೂ ಪ್ರಯೋಜನವಾಗಿಲ್ಲ
ಕೆರೆಗೆ ತಾತ್ಕಾಲಿಕವಾಗಿ ಅಡಿಕೆ ಮರದ ಸಲಾಕೆಯಿಂದ ತಡೆಬೇಲಿಯನ್ನು ನಿರ್ಮಾಣ ಮಾಡಿದ್ದರೆ ಹೊಳೆ ಬದಿಗೆ ಯಾವುದೇ ತಡೆಬೇಲಿ ಇಲ್ಲ. ಕೆರೆಯ ಅಪಾಯದ ಬಗ್ಗೆ ಪರಿಚಯವೇ ಇಲ್ಲದ ವಾಹನ ಚಾಲಕರು ಈ ರಸ್ತೆಯಾಗಿ ತೆರಳಿದರೆ ಅಪಾಯ ಖಂಡಿತ. ಕೆರೆಯನ್ನು ಮುಚ್ಚುವುದು ಅಥವಾ ಅದಕ್ಕೆ ತಡೆ ಬೇಲಿ ನಿರ್ಮಾಣ ಮಾಡುವಂತೆ ಸ್ಥಳೀಯರು ಕೆಲವು ವರ್ಷಗಳಿಂದ ಸಂಬಂಧಿಸಿದ ಇಲಾಖೆಗೆ ಮನವಿಯನ್ನು ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಮಳೆಗಾಲದಲ್ಲಿ ನೀರು ತುಂಬಿದ ಕೆರೆಗಳಿಂದ ಕೆಲವು ಕಡೆಗಳಲ್ಲಿ ಅನಾಹುತಗಳು ಉಂಟಾಗುತ್ತಿದೆ. ಪಟ್ಟೆಯಿಂದ ಮುಳಿತ್ತಡಿಗೆ ತೆರಳುವ ಒಳರಸ್ತೆಯಾದರೂ ಪ್ರಸಿದ್ಧ ಕ್ಷೇತ್ರಗಳಿಗೆ ತೆರಳುವ ಸಂಪರ್ಕ ರಸ್ತೆಯಾಗಿರುವ ಕಾರಣ ಇಲಾಖೆ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎನ್ನುವ ಆಗ್ರಹ ವ್ಯಕ್ತವಾಗಿದೆ.

ಡೆಬೇಲಿ ನಿರ್ಮಿಸಿ

ಕೆರೆ ಮತ್ತು ಹೊಳೆ ಎರಡೂ ಒಂದೇ ಕಡೆ ಇರುವ ಕಾರಣ ವಾಹನ ಚಾಲಕರಿಗೆ ಅಪಾಯಕಾರಿಯಾಗಿದೆ. ಮಕ್ಕಳು ಶಾಲೆಗೆ ತೆರಳುವಾಗಲೂ ಅಪಾಯವಾಗಿದೆ. ಕೆರೆಗೆ ಮತ್ತು ಹೊಳೆಗೆ ತಡೆಬೇಲಿ ಅಥವಾ ತಡೆಗೋಡೆಯನ್ನು ನಿರ್ಮಿಸಿ ಅಪಾಯವನ್ನು ತಪ್ಪಿಸುವ ಕೆಲಸವನ್ನು ಸಂಬಂಧಪಟ್ಟ ಇಲಾಖೆಯಿಂದ ತುರ್ತಾಗಿ ನಡೆಸಬೇಕು.
– ವೈ.ಕೆ. ನಾಯ್ಕ, ಪಟ್ಟೆ, ಸ್ಥಳೀಯರು

ನಿರ್ಣಯ ಮಾಡಿ ಕಳುಹಿಸಿದ್ದೇವೆ

ಕೆರೆ ಮುಚ್ಚಬೇಕು, ತಡೆಗೋಡೆ ನಿರ್ಮಿಸಬೇಕು ಅಥವಾ ಪರ್ಯಾಯ ರಸ್ತೆ ನಿರ್ಮಿಸಬೇಕೆಂದು ಒತ್ತಾಯಿಸಿ ಇತ್ತೀಚೆಗೆ ನಡೆದ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡಿ, ಜಿ.ಪಂ. ಎಂಜಿನಿಯರಿಂಗ್‌ ಇಲಾಖೆ ಹಾಗೂ ಇತರ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ಪ್ರಯಾಣಿಕರ ಹಾಗೂ ಪಾದಚಾರಿಗಳ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಲು ಗ್ರಾ.ಪಂ. ಬದ್ಧವಾಗಿದೆ.
– ವಾಸೀಂ ಗಂಧದ ಪಿಡಿಒ

-ದಿನೇಶ್‌ ಪೇರಾಲು

ಟಾಪ್ ನ್ಯೂಸ್

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Uppinangady: ರಸ್ತೆ ಬದಿ ಬಿದ್ದ ಕಂಟೈನರ್‌ ಲಾರಿ

Uppinangady: ರಸ್ತೆ ಬದಿ ಬಿದ್ದ ಕಂಟೈನರ್‌ ಲಾರಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿ: ಪ್ರಸಕ್ತ ಸಾಲಿನ ಸೇವೆಯಾಟ ಆರಂಭ

Shri Dharmasthala: ಮಂಜುನಾಥೇಶ್ವರ ಯಕ್ಷಗಾನ ಮಂಡಳಿ: ಪ್ರಸಕ್ತ ಸಾಲಿನ ಸೇವೆಯಾಟ ಆರಂಭ

Kumbra

Kukke: ಅಭಯ ಆಂಜನೇಯ ಗುಡಿಯಿಂದ ಕಳವು

missing

Missing Case: ಬೆಳ್ತಂಗಡಿ; ಯುವತಿ ಕಾಣೆ: ದೂರು ದಾಖಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.