ಶಾಂತಿಯುತ ಮತದಾನ

ಬೆಳ್ತಂಗಡಿ: ಗ್ರಾ.ಪಂ. ಉಪಚುನಾವಣೆ

Team Udayavani, May 30, 2019, 6:00 AM IST

x-18

ಬೆಳ್ತಂಗಡಿ:  ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾ.ಪಂ.ನ 2 ಸ್ಥಾನಗಳು ಹಾಗೂ ಕೊಯ್ಯೂರು ಗ್ರಾ.ಪಂ.ನ ಒಂದು ಸ್ಥಾನಕ್ಕೆ ಬುಧವಾರ ಶಾಂತಿಯುತ ಮತದಾನ ನಡೆಯಿತು. ಬೆಳಗ್ಗೆ 7ರಿಂದ ಸಂಜೆ 5ರವರೆಗೆ ನಡೆದ ಮತದಾನದಲ್ಲಿ ಒಟ್ಟು 2,790 ಮತದಾರರ ಪೈಕಿ 1,586 ಮಂದಿ ಮತದಾನದಲ್ಲಿ ಪಾಲ್ಗೊಂಡರು,

ಉಜಿರೆ ವಾರ್ಡ್‌ ನಂ. 4
ಬೆಳ್ತಂಗಡಿ ತಾಲೂಕಿನ ಉಜಿರೆ ವಾರ್ಡ್‌ ನಂ. 4ಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಮತದಾನ ಕೇಂದ್ರ ನಿಯೋಜಿಸಲಾಗಿತ್ತು. ಒಟ್ಟು 1,069 ಮತದಾರರ ಪೈಕಿ 535 ಮಂದಿ ಮತ ಚಲಾಯಿಸಿದ್ದು, ಶೇ. 50.54 ಮತದಾನವಾಗಿದೆ. 263 ಪುರುಷರು ಹಾಗೂ 272 ಮಹಿಳೆಯರು ಮತದಾನ ಪಕ್ರಿಯೆಯಲ್ಲಿ ಪಾಲ್ಗೊಂಡರು.

ಉಜಿರೆ ವಾರ್ಡ್‌ ನಂ. 11
ಉಜಿರೆ ವಾರ್ಡ್‌ ನಂ. 11ಕ್ಕೆ ಶ್ರೀ ಧರ್ಮಸ್ಥಳ ಮಂಜು ನಾಥೇಶ್ವರ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಮತದಾನ ಕೇಂದ್ರ ಸಿದ್ಧಪಡಿಸಲಾಗಿತ್ತು. ಒಟ್ಟು 786 ಮತದಾರರ ಪೈಕಿ 485 ಮಂದಿ ಮತದಾನದಲ್ಲಿ ಪಾಲ್ಗೊಂಡು ಶೇ. 61.94 ಗರಿಷ್ಠ ಮತದಾನವಾಗಿದೆ. 234 ಪುರುಷರು, 251 ಮಹಿಳೆಯರು ಮತ ಚಲಾಯಿಸಿದ್ದಾರೆ.

ಕೊಯ್ಯೂರು ವಾರ್ಡ್‌ ನಂ. 2
ಕೊಯ್ಯೂರು ವಾರ್ಡ್‌ ನಂ. 2ಕ್ಕೆ ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಕೊಯ್ಯೂರು ದೇವಸ್ಥಾನ ಮತದಾನ ಕೇಂದ್ರವಾಗಿತ್ತು.  ಒಟ್ಟು 938 ಮತದಾರರ ಪೈಕಿ 566 ಮಂದಿ ಮತದಾನದಲ್ಲಿ ಪಾಲ್ಗೊಂಡು ಶೇ. 60.34 ಮತದಾನವಾಗಿದೆ. 302 ಪುರುಷರು ಹಾಗೂ 264 ಮಹಿಳೆಯರು ಮತದಾನ ಮಾಡಿದ್ದಾರೆ.
ಈ ಮೂಲಕ ಮೂರು ಕ್ಷೇತ್ರಗಳಲ್ಲಿ 799 ಪುರುಷರು 787 ಮಹಿಳೆಯರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಸಿಬಂದಿ ನಿಯೋಜನೆ
ಪ್ರಥಮ ಮತಗಟ್ಟೆ ಅಧಿಕಾರಿ, ದ್ವಿತೀಯ ಮತಗಟ್ಟೆ ಅಧಿಕಾರಿಗಳಂತೆ ಮೂರು ಮತಗಟ್ಟೆ ಕೇಂದ್ರಕ್ಕೆ 4 ಸಿಬಂದಿ ಹಾಗೂ 1ಡಿ ಗ್ರೂಪ್‌ ಸಹಿತ ಒಟ್ಟು 5 ಜನ ಸಿಬಂದಿ ನಿಯೋಜಿಸಲಾಗಿತ್ತು. ಮೂರು ವಾರ್ಡ್‌ಗಳಿಗೆ 15 ಜನ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರು. 4 ಮಂದಿ ಪೊಲೀಸ್‌ ಸಿಬಂದಿ ಸಹಕರಿಸಿದರು.

ಶಾಲಾ ಪ್ರಾರಂಭೋತ್ಸವದಂದು ರಜೆ
ಶಾಲಾ ಪ್ರಾರಂಭೋತ್ಸವದಂದು ತಾಲೂಕಿನ ಎರಡು ಶಾಲೆಯಲ್ಲಿ ಗ್ರಾ.ಪಂ. ಚುನಾವಣೆ ಕೇಂದ್ರ ನಿಯೋಜನೆಗೊಂಡಿರವುದರಿಂದ ಮಕ್ಕಳ ಪ್ರಾರಂಭೋತ್ಸವ ಗುರುವಾರಕ್ಕೆ ಮುಂದೂಡಲಾಗಿದೆ. ಉಜಿರೆ ವಾರ್ಡ್‌ ನಂ. 11ರಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿ.ಪ್ರಾ. ಶಾಲೆ ಹಾಗೂ ಕೊಯ್ಯೂರು ವಾರ್ಡ್‌ ನಂ.2ರ ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಕೊಯ್ಯೂರು ದೇವಸ್ಥಾನ ಶಾಲಾ ಪ್ರಾರಂಭೋತ್ಸವ ಗುರುವಾರ ನಡೆಯಲಿದೆ.

31ರ ಸಂಜೆ ವರೆಗೆ ನೀತಿ ಸಂಹಿತೆ

ಮೂರು ವಾರ್ಡ್‌ಗಳಲ್ಲಿ ಶಾಂತಿಯುತ ಮತದಾನದ ಮೂಲಕ ಮತದಾರರು ಸಹಕರಿಸಿದ್ದಾರೆ. ಮತದಾನ ಸುಸೂತ್ರವಾಗಿ ನಡೆಯಲು ತಾ.ಪಂ. ಸಿಬಂದಿ ಹಾಗೂ ಪೊಲೀಸರ ಶ್ರಮ ಗಮನಾರ್ಹ. ಮೇ 31ರಂದು ನಗರ ಪಂ.ನಲ್ಲಿ ಮತ ಎಣಿಕೆ ನಡೆಯಲಿದ್ದು, 31 ಸಂಜೆ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
– ಸುಭಾಶ್‌ ಜಾಧವ್‌,ಚುನಾವಣಾಧಿಕಾರಿ

ಟಾಪ್ ನ್ಯೂಸ್

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.