ಸಾಧನೆ ಅಭಿನಂದನೀಯ: ಶಾಸಕ ರಾಜೇಶ್ ನಾೖಕ್
ದಡ್ಡಲಕಾಡು ಶಾಲಾ ಪ್ರಾರಂಭೋತ್ಸವ
Team Udayavani, May 30, 2019, 6:00 AM IST
ಬಂಟ್ವಾಳ: ದಡ್ಡಲಕಾಡು ಸರಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ತೆಂಗಿನ ಗಿಡಕ್ಕೆ ನೀರೆರೆಯುವ ಮೂಲಕ ಮೇ 29ರಂದು ಶಾಲಾ ಪ್ರಾರಂಭೋತ್ಸವ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಅವರು ಮಾತನಾಡಿ, ಮುಚ್ಚುವ ಹಂತದಲ್ಲಿದ್ದ ಶಾಲೆಯನ್ನು ಪ್ರಕಾಶ್ ಅಂಚನ್ ನೇತೃತ್ವದಲ್ಲಿ ಉಳಿಸುವ ಪ್ರಯತ್ನ ನಡೆದಿದೆ. ಇಂದು ಈ ಶಾಲೆಯಲ್ಲಿ ಏಳುನೂರು ಮಂದಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ ಎಂಬುದು ವಿಶಿಷ್ಟ ಸಾಧನೆಯಾಗಿದ್ದು, ಅಭಿನಂದ ನೀಯ. ಆಂಗ್ಲ ಮಾಧ್ಯಮ ಕಲಿಕೆಗೆ ಸರಕಾರವೇ ಅವಕಾಶ ನೀಡಿದ್ದು, ದಡ್ಡಲ ಕಾಡು ಶಾಲೆಗೂ ಅನುಮತಿ ಸಿಕ್ಕಿರುವುದು ಸಂತೋಷ ನೀಡಿದೆ ಎಂದರು.
ಪ್ರೌಢಶಾಲೆ: ಭರವಸೆ
ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರೌಢಶಾಲೆ ಮಂಜೂರುಗೊಳಿಸುವ ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶಿವಪ್ರಕಾಶ್ ಮಾತನಾಡಿ, ನಿರಂತರ ಹೋರಾಟ ಹಾಗೂ ಶ್ರಮದ ಫಲವಾಗಿ ಈ ಶಾಲೆ ಈ ಎತ್ತರಕ್ಕೆ ಬೆಳೆದು ನಿಂತಿದೆ. ಎಲ್ಲ ಅವಕಾಶ ಹಾಗೂ ಸೌಲಭ್ಯಗಳು ಈ ಶಾಲೆಯಲ್ಲಿದ್ದು, ಅದನ್ನು ವಿದ್ಯಾರ್ಥಿಗಳು ಹಾಗೂ ಹೆತ್ತವರು ಸದು ಪಯೋಗಪಡಿಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ಶಾಲಾ ದತ್ತು ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಅಂಚನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಪಂಜಿಕಲ್ಲು ಗ್ರಾ.ಪಂ. ಸದಸ್ಯರಾದ ಪೂವಪ್ಪ ಮೆಂಡನ್, ರೂಪಶ್ರೀ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಮೌರೀಸ್ ಡಿ’ಸೋಜಾ ಸ್ವಾಗತಿಸಿದರು. ಸಹ ಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ನಿರೂಪಿಸಿ, ವಿದ್ಯಾರ್ಥಿಗಳ ಪಾಲಕರಿಗೆ ಪೂರಕ ಮಾಹಿತಿ ನೀಡಿದರು. ಪುರುಷೋತ್ತಮ ಅಂಚನ್, ನವೀನ್ ಸೇಸಗುರಿ, ಬಾಲಕೃಷ್ಣ ಜಿ., ಅಶ್ವತ್ಥ್ ಗಾಣಿಗ ಮತ್ತಿತರರಿದ್ದರು.
ಇದೇ ಸಂದರ್ಭ ಶಾಸಕರು ಶಾಲಾ ಹೊಸ ಬಸ್ಸಿಗೆ ಚಾಲನೆ ನೀಡಿ, ಕೀಲಿ ಕೈಯನ್ನು ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಅವರ ಜಿ.ಪಂ. ಅನುದಾನದಡಿ ಮಂಜೂರುಗೊಂಡ ಪೀಠೊಪಕರಣಗಳನ್ನು ಶಾಲೆಗೆ ಹಸ್ತಾಂತರಿಸಲಾುತು. ಬಂಟ್ವಾಳದ ಅಂಬಿಕಾ ಮೆಟಲ್ನಿಂದ ಉಚಿತವಾಗಿ ಕೊಡಮಾಡಿದ ಸ್ಟೀಲ್ ಬಟ್ಟಲನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಒಂದನೇ ತರಗತಿಗೆ ಸೇರಿದ 125 ವಿದ್ಯಾರ್ಥಿಗಳು ಸಹಿತ ಪ್ರಾಥಮಿಕ ಪೂರ್ವ ಹಾಗೂ ಇತರ ತರಗತಿಗಳಿಗೆ ದಾಖಲಾದ ಒಟ್ಟು 270 ಮಂದಿ ಹೊಸ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿಕೊಳ್ಳಲಾಯಿತು. ಶಾಲೆಯನ್ನು ತಳಿರು ತೋರಣ ಹಾಗೂ ಬಂಟಿಂಗ್ಸ್ ಗಳಿಂದ ಸಿಂಗರಿಸಲಾಗಿತ್ತು. ಹೊಸ ವಿದ್ಯಾರ್ಥಿಗಳನ್ನು ಶಾಲಾ ಅಂಗಣದಿಂದ ವಾದ್ಯ ಹಾಗೂ ಬ್ಯಾಂಡ್‌ಗಳ ಮೂಲಕ ಮರೆವಣಿಗೆಯಲ್ಲಿ ಕರೆ ತರಲಾಯಿತು. ಈ ವರ್ಷ ಒಂದನೇ ತರಗತಿಗೆ 125 ಮಕ್ಕಳು ದಾಖಲಾತಿ ಪಡೆದುಕೊಂಡಿದ್ದಾರೆ. ಎಲ್ಕೆಜಿ, ಯುಕೆಜಿ ಸೇರಿ ಒಟ್ಟು 270 ಮಂದಿ ಹೊಸ ವಿದ್ಯಾರ್ಥಿಗಳು ಶಾಲೆಗೆ ಸೇರ್ಪಡೆಗೊಂಡಿದ್ದು, ವಿದ್ಯಾರ್ಥಿಳ ಒಟ್ಟು ಸಂಖ್ಯೆ 700 ಗಡಿ ದಾಟಿದೆ. ಮಕ್ಕಳ ದಾಖಲಾತಿಯಲ್ಲಿ ಏರಿಕೆಯಾಗಿರುವುದರಿಂದ ಒಂದನೇ ತರಗತಿಯಲ್ಲಿ ಎ, ಬಿ, ಸಿ ಎನ್ನುವ ಮೂರು ವಿಭಾಗಗಳನ್ನು ತೆರೆಯಲಾಗಿದೆ.
270 ವಿದ್ಯಾರ್ಥಿಗಳ ಸೇರ್ಪಡೆ

ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.