“ತೀರ್ಥಕ್ಷೇತ್ರ ಸಾರ್ಥಕ ಬದುಕಿಗೆ ದಾರಿದೀಪ’
ಧರ್ಮಸ್ಥಳ: ಪಾದಯಾತ್ರಿಗಳಿಗೆ ಸಮ್ಮಾನ
Team Udayavani, Feb 21, 2020, 9:51 PM IST
ಬೆಳ್ತಂಗಡಿ: ಭಕ್ತರ ದೋಷಗಳನ್ನು ಗ್ರಹಣ ಮಾಡಿ, ಸಂಕಷ್ಟ ಪರಿಹರಿಸುವ ಶಕ್ತಿ ಹೊಂದಿರುವ ಸಾನ್ನಿಧ್ಯಗಳು ತೀರ್ಥ ಕ್ಷೇತ್ರಗಳಾಗಿ ಬೆಳಗುತ್ತವೆ, ಬೆಳೆಯುತ್ತವೆ. ಸಾರ್ಥಕ ಬದುಕಿಗೆ ದಾರಿದೀಪವಾಗುತ್ತವೆ. ತಮ್ಮಲ್ಲಿರುವ ಕೋಪ, ದ್ವೇಷ, ಅಸೂಯೆ ಮೊದಲಾವುಗಳನ್ನು ಕಳಚಿ, ದುಃಖ, – ದುಮ್ಮಾನಗಳನ್ನು ಮರೆಯಲು ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತರು ಬರುತ್ತಾರೆ ಎಂದು ಧರ್ಮ ಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಧರ್ಮಸ್ಥಳದಲ್ಲಿ ಗುರುವಾರ ರಾತ್ರಿ ಶಿವರಾತ್ರಿ ಜಾಗರಣೆಗೆ ಬಂದ ಪಾದಯಾತ್ರಿ ಗಳಿಗೆ ಅವರು ಶುಭ ಹಾರೈಸಿ, ಶಿವ ಭಕ್ತರ ಸರ್ವ ದೋಷ ಸ್ವೀಕರಿಸಿ ವಿಷಕಂಠನಾಗಿ ಭಕ್ತರ ಅಭೀಷ್ಟ ಈಡೇರಿಸಿ ಮಂಗಳಕಾರಕನಾಗಿ ಭಕ್ತರನ್ನು ಅನುಗ್ರಹಿಸುತ್ತಾನೆ ಎಂದರು.
ಅನೇಕ ಮಂದಿ ಪಾದಯಾತ್ರಿಗಳು ಒಂದೆರಡು ದಿನ ಮುಂಚಿತವಾಗಿ ಬಂದು ದೇವರ ದರ್ಶನ ಮಾಡಿ ಇತರ ಭಕ್ತರಿಗೆ ಅನುಕೂಲ ಮಾಡಿದ್ದಾರೆ ಎಂದು ಡಾ| ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಪಾದಯಾತ್ರಿಗಳಲ್ಲಿರುವ ಶಿಸ್ತು, ಸಂಯಮ, ಸ್ವತ್ಛತೆಯ ಕಾಳಜಿ ಇತ್ಯಾದಿಗಳನ್ನು ಶ್ಲಾ ಸಿ ಎಲ್ಲರಿಗೂ ಪಾದಯಾತ್ರೆಯ ಫಲ ಸಿಗಲಿ. ಮಳೆ-ಬೆಳೆ ಚೆನ್ನಾಗಿ ಆಗಲಿ. ಎಲ್ಲೆಲ್ಲೂ ಸುಖ- ಶಾಂತಿ-ನೆಮ್ಮದಿ ನೆಲೆಸಿ ಲೋಕಕಲ್ಯಾಣ ವಾಗಲಿ ಎಂದು ಹಾರೈಸಿದರು.
ಪಾದಯಾತ್ರಿಗಳ ತಂಡದ ನಾಯಕರಾದ ಬೆಂಗಳೂರಿನ ಹನುಮಂತಪ್ಪ ಸ್ವಾಮೀಜಿ ಮತ್ತು ಶಶಿಕುಮಾರ್ ಹಾಗೂ ಇತರರನ್ನು ಡಾ| ಹೆಗ್ಗಡೆಯವರು ಗೌರವಿಸಿದರು. ಹೇಮಾವತಿ ವೀ. ಹೆಗ್ಗಡೆ, ನಾಗರಾಜ ರೆಡ್ಡಿ ಮತ್ತು ಮರಿಯಪ್ಪ ಗುರು ಮೊದಲಾದವರು ಉಪಸ್ಥಿತರಿದ್ದರು.
ಶಾಂತಿ-ನೆಮ್ಮದಿ
ನೇತ್ರಾವತಿ ನದಿಯಲ್ಲಿ ಮಿಂದು ಬಹಿರಂಗ ಪರಿಶುದ್ಧಿಯೊಂದಿಗೆ, ಉಪವಾಸ, ವ್ರತ-ನಿಯಮಗಳ ಪಾಲನೆಯೊಂದಿಗೆ ಅಂತರಂಗ ಶುದ್ಧಿಯಿಂದ ದೇವರನ್ನು ಪ್ರಾರ್ಥಿಸಿದಾಗ ಸಕಲ ದೋಷಗಳ ನಿವಾರಣೆಯಾಗಿ ಶಾಂತಿ, ನೆಮ್ಮದಿ ನೆಲೆಸುತ್ತದೆ.
- ಡಾ| ಡಿ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳದ ಧರ್ಮಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.