ಪೊಲೀಸ್ ಸಿಬಂದಿಯಿಂದ ಪ್ಲಾಸ್ಮಾ ದಾನ
Team Udayavani, Sep 12, 2020, 1:48 AM IST
ಪುತ್ತೂರು: ಕೋವಿಡ್-19 ಸೋಂಕಿಗೆ ಒಳಗಾಗಿ ಜೀವನ್ಮರಣ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವನಿಗೆ ಪೊಲೀಸ್ ಸಿಬಂದಿ ಪ್ಲಾಸ್ಮಾ ದಾನ ಮಾಡಿರುವ ಘಟನೆಗೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಜಿಲ್ಲಾ ಎಸ್‌ಪಿ ಕಚೇರಿಯ ಡಿ.ಆರ್. ವಿಭಾಗದಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿರುವ ರಂಜಿತ್ ಕುಮಾರ್ ರೈ ಪ್ಲಾಸ್ಮಾ ದಾನ ಮಾಡಿದವರು.
ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಬ್ರಹ್ಮಾವರ ಮೂಲದ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಪೂರ್ಣಾನಂದ ಅವರ ರಕ್ತದಲ್ಲಿ ಪ್ಲಾಸ್ಮಾ ಸಂಖ್ಯೆ ಕಡಿಮೆಯಾಗಿದ್ದರಿಂದ ಜೀವನ್ಮರಣ ಹೋರಾಟದಲ್ಲಿದ್ದರು. ಈ ಮಾಹಿತಿ ಪಡೆದ ರಂಜಿತ್ 0+ ಪ್ಲಾಸ್ಮಾ ದಾನ ಮಾಡಿದ್ದಾರೆ. ಅದಾದ ಬಳಿಕ ಪೂರ್ಣಾನಂದ ಅವರ ಆರೋಗ್ಯದಲ್ಲಿ ಪೂರ್ಣ ಚೇತರಿಕೆ ಕಂಡು ಬಂದಿದೆ.
ಜಿಲ್ಲೆಯ ಪ್ರಥಮ ಪೊಲೀಸ್
ದೇಹದಲ್ಲಿರುವ ಪಾಸ್ಮಾ ಕಣ ಇಳಿಮುಖವಾದರೆ ಅನಾರೋಗ್ಯ ಸ್ಥಿತಿ ಉಂಟಾಗುತ್ತದೆ. ಜೀವ ಹಾನಿಗೂ ಕಾರಣವಾಗುತ್ತದೆ. ಇಂತಹ ಸಂದರ್ಭದಲ್ಲಿ ಇನ್ನೊಬ್ಬನ ದೇಹದಿಂದ ಪ್ಲಾಸ್ಮಾ ದಾನ ಮಾಡುವೊಂದೇ ದಾರಿ. ಆ ಕಾರ್ಯವನ್ನು ರಂಜಿತ್ ಮಾಡಿದ್ದು, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಪ್ಲಾಸ್ಮಾ ದಾನ ಮಾಡಿದವರಲ್ಲಿ ರಂಜಿತ್ ಜಿಲ್ಲೆಗೆ ಪ್ರಥಮ ವ್ಯಕ್ತಿ ಆಗಿದ್ದಾರೆ. ಆದರೆ ಈ ಹಿಂದೆ ತೀವ್ರ ಅನಾರೋಗ್ಯಕ್ಕೊಳಕಾಗಿದ್ದ ಕೊಣಾಜೆಯ ರಾಜ್ಯ ಮೀಸಲು ಪೊಲೀಸ್‌ನ ಹೆಡ್‌ಕಾನ್‌ಸ್ಟೆಬಲ್ ರವಿ ರೈ ಅವರಿಗೆ ಬೆಂಗಳೂರಿನಿಂದ ಪ್ಲಾಸ್ಮಾ ತರಿಸಿ ಚಿಕಿತ್ಸೆ ನೀಡಿದ ಹಿನ್ನಲೆಯಲ್ಲಿ ಅವರು ಚೇತರಿಸಿಕೊಂಡಿದ್ದ ಘಟನೆ ನಡೆದಿತ್ತು.
ಸ್ವ ಇಚ್ಛೆಯಿಂದ ದಾನ
ಬ್ರಹ್ಮಾವರ ಮೂಲದ ಪೂರ್ಣಾನಂದ ಅವರಿಗೆ 0+ ಪ್ಲಾಸ್ಮಾದ ಅಗತ್ಯತೆ ಇದೆ ಎನ್ನುವ ಮಾಹಿತಿ ಸಿಕ್ಕಿತ್ತು. ಹಾಗಾಗಿ ಸ್ವ ಇಚ್ಛೆಯಿಂದ ದಾನ ಮಾಡಿದ್ದೇನೆ. ಕಷ್ಟದಲ್ಲಿರುವ ವ್ಯಕ್ತಿಯ ಜೀವ ಉಳಿಸುವ ಕಾರ್ಯಕ್ಕಿಂತ ಶ್ರೇಷ್ಠ ಕಾರ್ಯ ಬೇರೊಂದಿಲ್ಲ. ಆ ಕೆಲಸ ಮಾಡಿದ ತೃಪ್ತಿ ಇದೆ ಎನ್ನುತ್ತಾರೆ ಹೆಡ್ ಕಾನ್ಸ್‌ಟೇಬಲ್
ರಂಜಿತ್ ಕುಮಾರ್ ರೈ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.