ಕೆದಂಬಾಡಿ ಗ್ರಾಮದ ಪೊಲೀಸ್‌ ಜನಸಂಪರ್ಕ ಸಭೆ 

Team Udayavani, Mar 31, 2018, 2:48 PM IST

31-March-7.jpg

ಕೆಯ್ಯೂರು : ಅಪರಾಧಗಳನ್ನು ತಡೆಯಬೇಕಾದರೆ ಪೊಲೀಸ್‌ ಇಲಾಖೆಯೊಂದಿಗೆ ಗ್ರಾಮಸ್ಥರ ಸಹಕಾರ ಅತ್ಯಗತ್ಯ. ಯಾವುದೇ ಸಮಸ್ಯೆ, ದೂರುಗಳಿದ್ದರೆ ನೇರವಾಗಿ ಠಾಣೆಗೆ ಬಂದು ಕೊಡಿ. ನಿಮ್ಮ ದೂರುಗಳನ್ನು ಆಲಿಸಲು ನಾವಿದ್ದೇವೆ. ಯಾವುದೇ ಕಾರಣಕ್ಕೂ ಹೆದರುವ ಅಗತ್ಯವಿಲ್ಲ ಎಂದು ಸಂಪ್ಯ ಗ್ರಾಮಾಂತರ ಠಾಣೆ ಪಿಎಸ್‌ಐ ಶಕ್ತಿವೇಲು ಹೇಳಿದರು.

ಅವರು ಮಾ. 27ರಂದು ತಿಂಗಳಾಡಿ ಶ್ರೀ ದೇವತಾ ಭಜನ ಮಂದಿರದ ಸಭಾ ವೇದಿಕೆಯಲ್ಲಿ ನಡೆದ ಕೆದಂಬಾಡಿ ಗ್ರಾಮದ ಪೊಲೀಸ್‌ ಜನಸಂಪರ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೆದಂಬಾಡಿ ಗ್ರಾಮಸ್ಥರು ಶಾಂತಿ-ಸೌಹಾರ್ದ ಕಾಪಾಡಿಕೊಂಡು ಬಂದವರು. ಅಹಿತಕರ ಘಟನೆಗಳು ನಡೆದಲ್ಲಿ ಬೀಟ್‌ ಪೊಲೀಸ್‌ ಬಸವರಾಜ್‌ ಅವರಿಗೆ ತಿಳಿಸಿ ಅಥವಾ ನೇರವಾಗಿ ಠಾಣೆಗೆ ಮಾಹಿತಿ ಕೊಡಿ ಎಂದರು. 

ಕಟ್ಟೆಯ ವಿಚಾರದಲ್ಲಿ ಅನ್ಯೋನ್ಯತೆ ಕಾಪಾಡಿ
ಸಾರೆಪುಣಿಯ ಮಾರುತಿಪುರ ಎಂಬಲ್ಲಿರುವ ಕಟ್ಟೆಯ ವಿಚಾರವಾಗಿ ಯಥಾಸ್ಥಿತಿ ಕಾಪಾಡಿಕೊಳ್ಳುವುದು ಎಂದು ಗ್ರಾ.ಪಂ. ಸಾಮಾನ್ಯ ಸಭೆಯ ನಿರ್ಣಯವನ್ನು ನಾವು ಒಪ್ಪಿಕೊಂಡಿದ್ದೇವೆ. ಗ್ರಾಮಸ್ಥರೂ ಇದನ್ನು ತಿಳಿದುಕೊಂಡು ಕಟ್ಟೆಯ ವಿಚಾರದಲ್ಲಿ ಶಾಂತಿ ಸೌಹಾರ್ದ ಕಾಪಾಡಬೇಕು. ತಪ್ಪಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಅದರ ಬೆನ್ನಲ್ಲೆ ನೀತಿ ಸಂಹಿತೆಯೂ ಜಾರಿಯಾಗಿದೆ. ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

ದ್ವಿಚಕ್ರ ವಾಹನ ಸವಾರರು ಹಾಗೂ ಸಹ ಸವಾರರು ಹೆಲ್ಮೆಟ್‌ ಧರಿಸುವುದು ಸೂಕ್ತ. ಹೆಲ್ಮೆಟ್‌ ಧರಿಸದ ಸಂದರ್ಭದಲ್ಲಿ ಅಪಘಾತಗಳಾದರೆ ಸಾವಿನ ಸಾಧ್ಯತೆ ಹೆಚ್ಚು ಎಂದು ಕಿವಿಮಾತು ಹೇಳಿದರು. ಸಭಾಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಪ್ರವೀಣ್‌ ಕುಮಾರ್‌ ಶೆಟ್ಟಿ ಮಾತನಾಡಿ, ಸಾಮಾಜಿಕ ಜಾಲತಾಣಗಳನ್ನು ಬಳಸುವವರು ಹೆಚ್ಚು ಜಾಗೃತರಾಗಿರಬೇಕು. ಮನೆ ಬಿಟ್ಟು ಹೊರಗೆ ಹೋಗುವಾಗ ಸ್ಟೇಟಸ್‌ ಗಳನ್ನು ಹಾಕುವುದು, ಫೋಟೋಗಳನ್ನು ಅಪ್‌ಲೋಡ್‌ ಮಾಡುವುದು ಸರಿಯಲ್ಲ. ಗ್ರಾಮದ ಬೀಟ್‌ ಪೊಲೀಸ್‌ ಅಧಿಕಾರಿ ಬಸವರಾಜ್‌ ಜನಸ್ನೇಹಿ ಪೊಲೀಸ್‌ ಆಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಎಎಸ್‌ಐ ತಿಮ್ಮಪ್ಪ ಗೌಡ ಮಾತನಾಡಿ, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವುದು ಅಪರಾಧ. ಕಾನೂನು
– ಸುವ್ಯವಸ್ಥೆಗೆ ಅಡ್ಡಿಪಡಿಸಿದವರಿಗೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಶಾಂತಿಯುತ ಗ್ರಾಮವಾಗಿ ಮುಂದುವರಿಯಲು ಎಲ್ಲರೂ ಸಹಕರಿಸಬೇಕು ಎಂದರು. ಬೀಟ್‌ ಪೊಲೀಸ್‌ ಬಸವರಾಜ್‌ ಮಾತನಾಡಿ, ಗ್ರಾಮದಲ್ಲಿ ಎರಡು ಬೀಟ್‌ಗಳನ್ನು ಹಂಚಿಕೆ ಮಾಡಿದ್ದು, ತಾವು ಗ್ರಾಮದಲ್ಲೇ ಇದ್ದು ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.

ಪಿಡಿಒ ಅಜಿತ್‌ ಜಿ.ಕೆ., ಗ್ರಾ.ಪಂ. ಸದಸ್ಯರಾದ ರಾಘವ ಗೌಡ ಕೆರೆಮೂಲೆ, ಕೃಷ್ಣ ಕುಮಾರ್‌ ರೈ, ವಿಜಯ ಕುಮಾರ್‌ ರೈ ಕೋರಂಗ, ಚಂದ್ರಹಾಸ ರೈ ಬೋಳ್ಳೋಡಿ, ಪುಷ್ಪಾ ಬೋಳ್ಳೋಡಿ, ರೇವತಿ, ಲಲಿತಾ, ಚಂದ್ರಾವತಿ ರೈ ಉಪಸ್ಥಿತರಿದ್ದರು. ಬೀಟ್‌ ಪೊಲೀಸ್‌ ಅಧಿಕಾರಿ ಆಶಾ ಸ್ವಾಗತಿಸಿ, ವಂದಿಸಿದರು.

ಇಲಾಖೆಗೆ ಮಾಹಿತಿ ನೀಡಿ
ಗ್ರಾಮದಲ್ಲಿ ಅಕ್ರಮ ಸಾರಾಯಿ, ಗಾಂಜಾ ಮಾರಾಟ, ಗೋ ಸಾಗಾಟ ಇತ್ಯಾದಿ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಸುಳಿವು ಸಿಕ್ಕರೆ, ಯುವತಿಯರು ಹಾಗೂ ವಿದ್ಯಾರ್ಥಿನಿಯರನ್ನು ಚುಡಾಯಿಸುವುದು, ಗುಂಪು ಸೇರಿ ರೇಗಿಸುವ ಕೃತ್ಯಗಳು ಕಂಡುಬಂದರೆ ಕೂಡಲೇ ಮೊ. 9480805363, 8861946463 ಅಥವಾ ಸಂಪ್ಯ ಠಾಣೆ ದೂ. 08251-232102ಗೆ ಕರೆ ಮಾಡಿ ತಿಳಿಸಬೇಕು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪಿಎಸ್‌ಐ ಶಕ್ತಿವೇಲು ತಿಳಿಸಿದರು.

ಕಂಬಳಿ ಮಾರುವವರ ಬಗ್ಗೆ ನಿಗಾ ಇರಿಸಿ
ಗ್ರಾಮದಲ್ಲಿ ಕಂಬಳಿ, ಪ್ಲಾಸ್ಟಿಕ್‌ ಬಕೆಟ್‌ ಮಾರಾಟದ ನೆಪದಲ್ಲಿ ಬೇರೆ ಪ್ರದೇಶಗಳ ಜನರು ಮನೆ ಬಾಗಿಲಿಗೆ ಬರುತ್ತಾರೆ. ಇಂಥವರ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳಿತು. ಸಂಶಯ ಬಂದರೆ ನೇರವಾಗಿ ಬೀಟ್‌ ಪೊಲೀಸರಿಗೆ ಮಾಹಿತಿ ಕೊಡಿ ಎಂದು ಶಕ್ತಿವೇಲು ಹೇಳಿದರು. 

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.