Sullia ರಸ್ತೆಯಲ್ಲಿ ಹೊಂಡ; ಸ್ಕೂಟಿಯಿಂದ ಬಿದ್ದ ಸವಾರೆಗೆ ಗಾಯ
Team Udayavani, Nov 18, 2023, 12:50 AM IST
ಸುಳ್ಯ: ರಸ್ತೆಯಲ್ಲಿನ ಹೊಂಡದಿಂದ ಸ್ಕೂಟಿ ನಿಯಂತ್ರಣ ತಪ್ಪಿ ಬಿದ್ದು ಸವಾರೆ ಗಾಯಗೊಂಡ ಘಟನೆ ಬೆಳ್ಳಾರೆ ಸಮೀಪ ಸಂಭವಿಸಿದೆ.
ಬೆಳ್ಳಾರೆ – ನಿಂತಿಕಲ್ಲು ಮುಖ್ಯ ರಸ್ತೆಯಲ್ಲಿ ಅಯ್ಯನಕಟ್ಟೆ ಬಸ್ ನಿಲ್ದಾಣದ ಸಮೀಪ ರಸ್ತೆಯ ಮಧ್ಯ ಭಾಗದಲ್ಲಿದ್ದ ಹೊಂಡದಿಂದ ಘಟನೆ ಸಂಭವಿಸಿದೆ. ಬೆಳ್ಳಾರೆ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಯುವತಿ ಸಂಜೆ ಕೆಲಸ ಬಿಟ್ಟು ಮನೆಗೆ ಹೋಗುವಾಗ ಘಟನೆ ಸಂಭವಿಸಿದೆ. ಅಪಘಾತ ನಡೆದಾಗ ಸ್ಥಳದಲ್ಲಿದ್ದ ಯುವಕರು ಯುವತಿಯನ್ನು ಆರೈಕೆ ಮಾಡಿದ್ದು, ಬಳಿಕ ಬೆಳ್ಳಾರೆಯ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಯಿತು.
ಎಚ್ಚೆತ್ತುಕೊಳ್ಳದ ಇಲಾಖೆ
ಸೋಣಂಗೇರಿ-ಬೆಳ್ಳಾರೆ, ಬೆಳ್ಳಾರೆ- ನಿಂತಿಕಲ್ಲು ಮುಖ್ಯ ರಸ್ತೆಯ ಅಲ್ಲಲ್ಲಿ ಬೃಹತ್ ಗಾತ್ರದ ಹೊಂಡಗಳು ನಿರ್ಮಾಣಗೊಂಡು ದ್ವಿಚಕ್ರ ಸವಾರ ರಿಗೆ ಅಪಾಯಕಾರಿಯಾಗಿ ಪರಿಣ ಮಿಸಿದ್ದು, ದುರಸ್ತಿಗೆ ಆಗ್ರಹಿಸಿ ದ್ದರೂ ಸಂಬಂಧಿಸಿದ ಇಲಾಖೆ ಇನ್ನೂ ಎಚ್ಚೆತ್ತುಕೊಳ್ಳದೇ ಅವಘಡ ಸಂಭವಿಸುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ. ರಸ್ತೆ ಹೊಂಡದ ಸಮಸ್ಯೆ ಬಗ್ಗೆ ಉದಯವಾಣಿ ಸುದಿನದಲ್ಲೂ ವರದಿ ಪ್ರಕಟಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.