ಮಾದರಿ ವಿದ್ಯುತ್‌ ಗ್ರಾಮದಲ್ಲಿ ವಿದ್ಯುತ್‌ ಪೂರೈಕೆ ಸಮಸ್ಯೆ!


Team Udayavani, Aug 17, 2018, 3:42 PM IST

17-agust-17.jpg

ವೇಣೂರು : ಹೊಸಂಗಡಿ, ಪೆರಿಂಜೆ ಹಾಗೂ ಬಡಕೋಡಿ ಗ್ರಾಮದಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ ಬಗ್ಗೆ ಆರೋಪಿಸಿದ ಗ್ರಾಮಸ್ಥರು ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿದರು. ಹೊಸಂಗಡಿ ಗ್ರಾ.ಪಂ.ನ 2018-19ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಹೊಸಂಗಡಿ ಗ್ರಾ.ಪಂ. ಸಭಾಂಗಣದಲ್ಲಿ ಜರಗಿತು. ಗ್ರಾ.ಪಂ. ಅಧ್ಯಕ್ಷೆ ಹೇಮಾ ವಸಂತ್‌ ಅಧ್ಯಕ್ಷತೆ ವಹಿಸಿದ್ದರು. ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಕನಿಷ್ಕ ಎಸ್‌. ಚಂದ್ರ ಸಭೆಯನ್ನು ನಡೆಸಿಕೊಟ್ಟರು.

ದಿನದ 24 ಗಂಟೆಗಳಲ್ಲೂ ನಿರಂತರ ವಿದ್ಯುತ್‌ ಪೂರೈಕೆ ಮಾಡುವ ಮಾದರಿ ವಿದ್ಯುತ್‌ ಗ್ರಾಮ ಯೋಜನೆಗೆ ಹೊಸಂಗಡಿ ಗ್ರಾ.ಪಂ.ನ್ನು ಆಯ್ಕೆ ಮಾಡಲಾಗಿತ್ತು. ಆದರೆ ಯೋಜನೆ ಜಾರಿಗೆ ಬಂದಿಲ್ಲ. ವಿದ್ಯುತ್‌ ವ್ಯತ್ಯಯ ಆಗುತ್ತಿದ್ದು, ಸಮಸ್ಯೆಯನ್ನು ನಿವಾರಿಸಬೇಕೆಂದು ಮೆಸ್ಕಾಂ ಇಲಾಖೆಯ ಅಧಿಕಾರಿಯನ್ನು ಆಗ್ರಹಿಸಿದರು. ಸಮಸ್ಯೆ ಬಗ್ಗೆ ಗಮನ ಹರಿಸುವುದಾಗಿ ಅಧಿಕಾರಿ ಭರವಸೆ ನೀಡಿದರು. 

ಮೂಡಬಿದಿರೆ ತಾಲೂಕಿಗೆ ಸೇರಿಸಿ
ಇನ್ನಷ್ಟೇ ಘೋಷಣೆ ಆಗಲಿರುವ ಮೂಡಬಿದಿರೆ ತಾಲೂಕಿಗೆ ಹೊಸಂಗಡಿ ಹಾಗೂ ಬಡಕೋಡಿ ಗ್ರಾಮವನ್ನು ಸೇರಿಸಿಕೊಳ್ಳುವಂತೆ ಆಗ್ರಹಿಸಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒಕ್ಕೊರಲ ಆಗ್ರಹ ವ್ಯಕ್ತವಾಯಿತು. ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. 

ಕಾಡುಪ್ರಾಣಿ ಹಾವಳಿ
ಬಡಕೋಡಿ ಗ್ರಾಮದಲ್ಲಿ ವಿದ್ಯುತ್‌ ದಾರಿದೀಪ ಇಲ್ಲ. ಕಾಡುಪ್ರಾಣಿಗಳ ಹಾವಳಿ ಜಾಸ್ತಿ ಆಗಿದೆ. ಚಿರತೆಯೊಂದು ಮನೆಯ ಸಾಕುನಾಯಿಯನ್ನು ಕೊಂದಿರುವ ಬಗ್ಗೆ ಮಹಿಳೆಯೊಬ್ಬರು ಸಭೆಯನ್ನು ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ ಅಧಿಕಾರಿ, ಚಿರತೆ ಬೀಳದಿದ್ದ ಕಾರಣ ಬಡಕೋಡಿಯಲ್ಲಿ ಬೋನನ್ನು ತೆಗೆಯಲಾಗಿದೆ. ಮುಂದೆ ಇಂತಹ ಘಟನೆ ನಡೆದರೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗೋ ಆಸ್ಪತ್ರೆ ಬೇಕು
ಹೊಸಂಗಡಿಗೆ 11 ಕಿ.ಮೀ. ದೂರದ ವೇಣೂರು ಪಶು ಆಸ್ಪತ್ರೆಗೆ ತೆರಳಲು ಕಷ್ಟವಾಗುತ್ತದೆ. ಹೊಸಂಗಡಿಗೆ ಪಶು ಆಸ್ಪತ್ರೆಯ ಅಗತ್ಯತೆ ಇದೆ ಎಂದು ಗ್ರಾಮಸ್ಥರು ಬೇಡಿಕೆ ಮುಂದಿಟ್ಟರು. ವೇಣೂರಿನ ಪಶು ಆಸ್ಪತ್ರೆಯಲ್ಲಿ ಎಲ್ಲ ಬಗೆಯ ಔಷಧಗಳಿಲ್ಲ. 155 ರೂ. ಇಂಜೆಕ್ಷನ್‌ಗೆ 200ಕ್ಕಿಂತಲೂ ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆಂದು ಗ್ರಾಮಸ್ಥ ಆನಂದ ಕುಲಾಲ್‌ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ, ಪ್ರಯಾಣದ ವೆಚ್ಚವನ್ನು ಪಡೆದುಕೊಳ್ಳುತ್ತೇವೆ, ಆದರೆ ಹೆಚ್ಚಿನ ಹಣ ಪಡೆಯುತ್ತಿಲ್ಲ ಎಂದರು. ಮಳೆ ಹಾನಿಯಾದರೆ ತತ್‌ಕ್ಷಣ ಮಾಹಿತಿ ನೀಡಿ, ಪರಿಹಾರ ಒದಗಿಸಿಕೊಡಲು ಅನುಕೂಲವಾಗುತ್ತದೆ ಎಂದು ಕಂದಾಯ ಇಲಾಖೆಯ ಅಧಿಕಾರಿ ಹೇಳಿದರು. ಜನನ- ಮರಣ ನೋಂದಣಿಗೆ ವಿಳಂಬ ಮಾಡಬಾರದು. ಮದುವೆ ನೋಂದಣಿಯನ್ನೂ ಮಾಡಿಕೊಳ್ಳಬೇಕು ಎಂದವರು ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರಕಾರದಡಿ ಲಭಿಸುವ ಉಚಿತ ಗ್ಯಾಸ್‌ ಸಂಪರ್ಕ ಯೋಜನೆಯ ಮಾಹಿತಿಯನ್ನು ವೇಣೂರು ಪಾರ್ಶ್ವನಾಥ ಗ್ಯಾಸ್‌ ಏಜೆನ್ಸಿಯ ಪ್ರಬಂಧಕ ಮಹಮ್ಮದ್‌ ಎಚ್‌. ಮಾಹಿತಿ ನೀಡಿದರು.

ಪಂ.ನ ಪ.ಜಾ. ಮತ್ತು ಪಂಗಡದಲ್ಲಿ ಮೀಸಲಿರಿಸಿದ ಅನುದಾನದಲ್ಲಿ ವಿದ್ಯಾರ್ಥಿವೇತನ ನೀಡಲಾಯಿತು. ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್‌, ಆರಂಬೋಡಿ ತಾ.ಪಂ. ಸದಸ್ಯ ಓಬಯ್ಯ ಆರಂಬೋಡಿ, ಹೊಸಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ಲಲಿತಾ ಟಿ. ಹೆಗ್ಡೆ, ಸದಸ್ಯರು, ವಿವಿಧ ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾ.ಪಂ. ಸಿಬಂದಿ ಸಹಕರಿಸಿದರು. ಪಂ.ಕಾರ್ಯದರ್ಶಿ ವರದಿ ಮಂಡಿಸಿದರು. ಅಭಿವೃದ್ಧಿ ಅಧಿಕಾರಿ ಗಣೇಶ್‌ ಶೆಟ್ಟಿ ಸ್ವಾಗತಿಸಿ, ನಿರ್ವಹಿಸಿದರು. ಪಂಚಾಯತ್‌ ಸಿಬಂದಿ ಸತೀಶ್‌ ಕುಮಾರ್‌ ಪಿ.ವಿ. ವಂದಿಸಿದರು.

ಅಭಿವೃದ್ಧಿ
ಉದ್ಯೋಗ ಖಾತರಿ ಯೋಜನೆಯಲ್ಲಿ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಆದರೆ ಅದಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯ ಬೇಕಾಗಿದೆ. ಪಿನ್‌ಕೋಡ್‌ ಸಮಸ್ಯೆ ನಿವಾರಣೆ ಆಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮಸ್ಥರಿಗೆ ಎಲ್ಲ ಸೌಲಭ್ಯ ದೊರೆಯಲಿದೆ.
-ಹೇಮಾ ವಸಂತ್‌
ಅಧ್ಯಕ್ಷೆ, ಹೊಸಂಗಡಿ ಗ್ರಾ.ಪಂ. 

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.