Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
Team Udayavani, May 10, 2024, 11:14 AM IST
ಸುಳ್ಯ: 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ನಾಲ್ಕನೇ ಆರೋಪಿಯನ್ನು ಶುಕ್ರವಾರ (ಮೇ10) ಬಂಧಿಸಲಾಗಿದೆ.
ಪ್ರಮುಖ ಆರೋಪಿ ಎನ್ನಲಾದ ಸುಳ್ಯದ ಮುಸ್ತಫಾ ಪೈಚಾರು ಎಂಬಾತ ಬಂಧಿತ ಎನ್ನಲಾಗಿದ್ದು, ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಿಂದ ಆಗಮಿಸಿದ ಎನ್ಐಎ ತಂಡ ಆನೆಮಹಲ್ ಗ್ರಾಮದಲ್ಲಿ ಬಂಧಿಸಿ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದೆ.
ಆನೆಮಹಲ್ ಗ್ರಾಮದ ಸಿರಾಜ್ ಎಂಬುವರ ಬಳಿ ಈತ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿರಾಜ್ ಎಂಬವರನ್ನು ಸಹ ಎನ್ಐಎ ವಿಚಾರಣೆಗೆ ಕರೆದುಕೊಂಡು ಹೋಗಿದ್ದು, ಜೊತೆಗೆ ಸಿರಾಜ್ ಬಳಿ ಕೆಲಸ ಮಾಡಿಕೊಂಡಿದ್ದ ಮತ್ತೋರ್ವ ವ್ಯಕ್ತಿ ಇಲಿಯಾಸ್ ಎಂಬುವರನ್ನು ಸಹ ವಿಚಾರಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
2022ರ ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದ್ದು, ರಾಷ್ಟ್ರೀಯ ತನಿಖಾ ದಳ ತನಿಖೆ ಮುಂದುವರಿಸಿದೆ. ಆರೋಪಿ ಮುಸ್ತಫಾಗೆ ಎನ್‌ಐಎ ಲುಕ್ ಔಟ್ ನೋಟೀಸ್ ಹೊರಡಿಸಿದ್ದು, ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.
ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ 20 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಎನ್‌ಐಎ ಚಾರ್ಜ್‌ಶೀಟ್‌ನ ಪ್ರಕಾರ, ಒಂದು ಸಮುದಾಯದ ಸದಸ್ಯರಲ್ಲಿ ಭಯವನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಕೋಮು ದ್ವೇಷ ಮತ್ತು ಅಶಾಂತಿಯನ್ನು ಸೃಷ್ಟಿಸಲು ಪಿಎಫ್‌ಐನ ಕಾರ್ಯಸೂಚಿಯ ಭಾಗವಾಗಿ ಪ್ರವೀಣ್ ನೆಟ್ಟಾರು ಅವರನ್ನು ಹರಿತವಾದ ಆಯುಧಗಳಿಂದ ಹತ್ಯೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.