ಕುಸಿತಕ್ಕೆ ಮುನ್ನೆಚ್ಚರಿಕೆ: ಚಾರ್ಮಾಡಿ ಬಂದ್‌


Team Udayavani, Aug 8, 2019, 6:35 AM IST

charmady

ಬೆಳ್ತಂಗಡಿ: ದುರ್ಗಮ ಹಾದಿಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಕುಸಿದ ಮಣ್ಣು ತೆರವಿಗಾಗಿ ರಾ.ಹೆ. 73ರ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎರಡು ದಿನಗಳ ಕಾಲ ಸಂಚಾರಕ್ಕೆ ತಡೆ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಸುರಿದ ಗಾಳಿ ಮಳೆಗೆ ಘಾಟಿ ರಸ್ತೆಯ 9 ಮತ್ತು 10ನೇ ತಿರುವಿನಲ್ಲಿ ಮರ ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಸುಮಾರು 5 ಕಡೆ ಗುಡ್ಡ ಮತ್ತು ಬೃಹತ್‌ ಬಂಡೆ ತೆರವುಗೊಳಿಸುವಲ್ಲಿ 5 ಜೆಸಿಬಿ ಮತ್ತು ಹಿಟಾಚಿಗಳು ಕಾರ್ಯಾಚರಣೆ ನಡೆಸುತ್ತಿವೆ.

ಸಂಚಾರ ತಡೆ
ಬೆಳ್ತಂಗಡಿಯಿಂದ ತೆರಳುವ ವಾಹನಗಳಿಗೆ ಚಾರ್ಮಾಡಿ ಗೇಟ್‌ ಬಳಿ ಮತ್ತು ಚಿಕ್ಕಮಗ ಳೂರು- ಮೂಡಿಗೆರೆಯಿಂದ ಬರುವ ವಾಹನ ಗಳಿಗೆ ಕೊಟ್ಟಿಗೆಹಾರದಲ್ಲಿ ಮಂಗಳವಾರ ರಾತ್ರಿಯಿಂದಲೇ ತಡೆಯೊಡ್ಡಲಾಗಿದೆ. ಆ.8ರಂದು ಮಧ್ಯರಾತ್ರಿ 12ರ ವರೆಗೆ ಸಂಚಾರಕ್ಕೆ ನಿರ್ಬಂಧ ಇರುವುದಾಗಿ ಡಿಸಿ ತಿಳಿಸಿದ್ದಾರೆ.

ಆಪದಾºಂಧವರಿಗೇ ಆಪತ್ತು
ಮಂಗಳವಾರ ರಾತ್ರಿ 10ನೇ ತಿರುವಲ್ಲಿ ಬಿದ್ದ ಮರ ತೆರವುಗೊಳಿಸುವ ಸಮಯ ಚಾರ್ಮಾಡಿ ಹಸನಬ್ಬ ಅವರ ಕಾರಿಗೆ ಮರ ಬಿದ್ದು ಹಾನಿಯಾಗಿದೆ. ಅಗ್ನಿಶಾಮಕ ದಳ ಮರ ತೆರವಿಗೆ ಧಾವಿಸಿದಾಗ 8 ಮತ್ತು 9ನೇ ತಿರುವಿನ ಮಧ್ಯೆ ಬೃಹದಾಕಾರದ ಮರ ಧರೆಗುರುಳಿ ಅವರೂ ಪ್ರಾಣಭಯಕ್ಕೆ ತುತ್ತಾಗಿದ್ದರು.

5 ಜೆಸಿಬಿಯಿಂದ ಗುಡ್ಡ ತೆರವು
ಬುಧವಾರ ಬೆಳಗ್ಗೆ 7 ಗಂಟೆಯಿಂದಲೇ 5 ಜೆಸಿಬಿ ಮತ್ತು ಹಿಟಾಚಿ ಮೂಲಕ ಮಣ್ಣು ತೆರವುಗೊಳಿಸಲಾಗುತ್ತಿದೆ. ಸುಗಮ ಸಂಚಾರಕ್ಕೆ ರಾತ್ರಿ ಹಗಲೆನ್ನದೆ ಅಧಿಕಾರಿಗಳು ಶ್ರಮಿಸುತ್ತಿದ್ದು, ಅರಣ್ಯ ಇಲಾಖೆ ಸಿಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ದ.ಕ. ಎಸ್‌ಪಿ ಲಕ್ಷ್ಮೀಪ್ರಸಾದ್‌, ಬೆಳ್ತಂಗಡಿ ಠಾಣೆ ವೃತ್ತನಿರೀಕ್ಷಕ ಸಂದೇಶ ಪಿ.ಜಿ., ಧರ್ಮಸ್ಥಳ ಠಾಣೆ ಎಸ್‌.ಐ. ಅವಿನಾಶ್‌, ರಾ.ಹೆ. ಎಂಜಿನಿಯರ್‌ ರಮೇಶ್‌, ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಶಿರಾಡಿ: ಮರ ತೆರವು
ಉಪ್ಪಿನಂಗಡಿ: ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಬುಧವಾರ ರಾ.ಹೆ. 75ರಲ್ಲಿ ಮರ ಧರೆಗುರುಳಿ ಸಂಚಾರ ಒಂದು ತಾಸಿಗೂ ಹೆಚ್ಚು ಕಾಲ ಅಸ್ತವ್ಯಸ್ತಗೊಂಡಿತ್ತು.

ಕಿಶೋರ್‌ ಶಿರಾಡಿ, ನಿಶಾಂತ್‌ ಶಿರಾಡಿ, ಉಮೇಶ್‌ ಪೇರಮಜಲು, ಸುಭಾಸ್‌ ಗುಂಡ್ಯ, ಪೊಡಿಯ ಪೇರಮಜಲು ಮೊದಲಾದವರು ಸ್ಥಳಕ್ಕಾಗಮಿಸಿ ಅರಣ್ಯ ಇಲಾಖಾಧಿಕಾರಿಗಳ ನೆರವು ಪಡೆದು ಮರ ತೆರವುಗೊಳಿಸಿದರು. ಬಳಿಕ ಸಂಚಾರ ಪುನರಾರಂಭಗೊಂಡಿತು.

ಸಿರಿಬಾಗಿಲು: ಮಣ್ಣು ತೆರವು ಪ್ರಗತಿಯಲ್ಲಿ
ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಸಿರಿಬಾಗಿಲು ಬಳಿ ಹಳಿ ಮೇಲೆ ಮಂಗಳವಾರ ಬಿದ್ದಿರುವ ಮಣ್ಣು ತೆರವು ಕಾಮಗಾರಿ ಪ್ರಗತಿಯಲ್ಲಿದೆ.

ಕಾಮಗಾರಿ ಬುಧವಾರ ರಾತ್ರಿ ವೇಳೆಗೆ ಅಂತಿಮಗೊಂಡಲ್ಲಿ ಮತ್ತು ಮತ್ತೆ ಕುಸಿತ ಆಗದೆ ಇದ್ದಲ್ಲಿ ಗುರುವಾರ ಹಗಲು ರೈಲು ಯಾನ ಪುನರಾರಂಭಿಸಲಿವೆ ಎಂದು ರೈಲ್ವೇ ಮೂಲಗಳು ತಿಳಿಸಿವೆ.

ಡೆಂಗ್ಯೂ ಬಾಧಿತನ ರಕ್ಷಣೆ
ಮಂಗಳವಾರ ರಾತ್ರಿ 7.30ಕ್ಕೆ ಚಿಕ್ಕಮಗಳೂರಿಗೆ ಹೊರಟಿದ್ದ ಬಸ್‌ ಮಾರ್ಗ ಮಧ್ಯೆ ಸಿಲುಕಿತ್ತು. ಬಸ್‌ನಲ್ಲಿ ಶಂಕಿತ ಡೆಂಗ್ಯೂ ರೋಗಿ ಬಾಧಿತರೊಬ್ಬರು ಇರುವ ಮಾಹಿತಿ ಪಡೆದ ಡಿಸಿ ಶಶಿಕಾಂತ ಸೆಂಥಿಲ್‌, ಎಸ್‌ಪಿ ಲಕ್ಷ್ಮೀಪ್ರಸಾದ್‌ ಮತ್ತು ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಸ್ಥಳಕ್ಕೆ ದೌಡಾಯಿಸಿದ್ದರು. ತತ್‌ಕ್ಷಣ ಅವರನ್ನು ಕೊಟ್ಟಿಗೆ ಹಾರಕ್ಕೆ ಕಳುಹಿಸಿಕೊಡಲಾಗಿದೆ. ಡಿಸಿ ಮತ್ತು ಇತರ ಅಧಿಕಾರಿಗಳು ರಾತ್ರಿ 3 ಗಂಟೆಯ ವರೆಗೂ ಸ್ಥಳದಲ್ಲಿದ್ದು, ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಂಗಳವಾರ ರಾತ್ರಿ ಚಾರ್ಮಾಡಿಯಲ್ಲಿ ಸಿಲುಕಿದ್ದ ಬಸ್‌ ಮತ್ತು ಕಾರನ್ನು ಸುರಕ್ಷಿತವಾಗಿ ಹಿಂದಕ್ಕೆ ತರಲಾಗಿದೆ.

ಬಸ್‌ಗಳ ಪಥ ಬದಲು
ಮಂಗಳೂರು: ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ರಾತ್ರಿ ಗುಡ್ಡ ಕುಸಿದ ಪರಿಣಾಮ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಚಿಕ್ಕಮಗಳೂರು, ಬೆಂಗಳೂರು ಕಡೆಗೆ ತೆರಳುವ ಬಸ್‌ಗಳ ಪಥ ಬದಲಿಸಲಾಗಿದೆ.

ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಉಜಿರೆ ಮೂಲಕ ಚಾರ್ಮಾಡಿ ಘಾಟಿಯಾಗಿ ಬೆಂಗಳೂರಿಗೆ ಸಂಚರಿಸುವ ಬಸ್‌ಗಳನ್ನು ಉಜಿರೆಯಿಂದ ಧರ್ಮಸ್ಥಳ, ಕೊಕ್ಕಡ, ಶಿರಾಡಿ ಘಾಟಿ ಮುಖೇನ ಬೆಂಗಳೂರಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಪುತ್ತೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಬೇಲೂರು, ಮೂಡಿಗೆರೆ ಕಡೆಗೆ ಹೋಗುವ ಬಸ್‌ಗಳು ಶಿರಾಡಿ ಮುಖೇನ ಸಕಲೇಶಪುರ, ಅರಹಳ್ಳಿಯಾಗಿ ತೆರಳುತ್ತವೆ.

ಹೊರ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಮುಂಬಯಿ, ಪುಣೆ ಮತ್ತು ಕೊಲ್ಲಾಪುರಕ್ಕೆ ತೆರಳುವ ಬಸ್‌ ಸಂಚಾರ ಸ್ಥಗಿತಗೊಂಡಿದೆ. ದಿನಂಪ್ರತಿ ಮೂರೂ ಕಡೆಗಳಿಗೆ ಒಂದೊಂದು ಟ್ರಿಪ್‌ ಸಂಚಾರವಿದ್ದು, ಸೋಮವಾರ ಮುಂಬಯಿ ತೆರಳಿದ ಬಸ್ಸನ್ನು ಮಳೆಯಿಂದಾಗಿ ಮಹಾರಾಷ್ಟ್ರ ಗಡಿ ಭಾಗದಲ್ಲಿ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಮಳೆ ಕಡಿಮೆಯಾಗುವವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಕಡೆಗೆ ತೆರಳುವ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.