ಪುರಸಭೆಯಾಗಿ ಮೇಲ್ದರ್ಜೆಗೆ ಆದ್ಯತೆ: ರೈ
Team Udayavani, May 28, 2019, 6:00 AM IST
ಸುಳ್ಯ: ಈ ಬಾರಿ ನ.ಪಂ.ನಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಲ್ಲಿ ನಗರ ಪಂಚಾಯತ್ ಅನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಹಾಗೂ ನಗರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಿಸಲು ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ನಗರಕ್ಕೆ ನೀರೊದಗಿಸುವ ಕಲ್ಲುಮುಟ್ಲು ಪಂಪ್ ಹೌಸ್ ಬಳಿ ಮರಳು ಕಟ್ಟದ ನೀರು ಸಂಗ್ರಹ ಸ್ಥಳ ಪರಿಶೀಲಿಸಿ, ವಾರ್ಡ್‌ಗಳಿಗೆ ಭೇಟಿ ನೀಡಿ ಅವರು ಮಾತನಾಡಿ ದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಹಲವು ಸ್ಥಳೀಯ ಸಂಸ್ಥೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಸುಳ್ಯ ನ.ಪಂ.ಮೇಲ್ದರ್ಜೆಗೆ ಇಲ್ಲಿನ ಶಾಸಕರು, ಆಡಳಿತ ಒತ್ತಡ ಹೇರಲಿಲ್ಲ. ಈ ಬಾರಿ ನ.ಪಂ.ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದಲ್ಲಿ ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಆದ್ಯತೆ ನೀಡುವುದಾಗಿ ಅವರು ನುಡಿದರು.
ಬಿಜೆಪಿ ಆಡಳಿತ ವಿಫಲ
ಹದಿಮೂರು ವರ್ಷಗಳಿಂದ ನಗರಾಡ ಳಿತದ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ಆಡಳಿತ ನಗರದಲ್ಲಿ ಶಾಶ್ವತ ನೀರಿನ ಯೋಜನೆ ಅನುಷ್ಠಾನಕ್ಕೆ ಯಾವುದೇ ಪ್ರಯತ್ನ ಮಾಡದ ಕಾರಣ ಜನರು ಕಲುಷಿತ ನೀರು ಉಪಯೋಗಿಸುವ ಸ್ಥಿತಿ ಉಂಟಾಗಿದೆ. ಜನರ ಅಗತ್ಯಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿಯನ್ನು ಬಿಜೆಪಿ ಮರೆತಿದೆ ಅನ್ನುವುದಕ್ಕೆ ನೀರು ಪೂರೈಕೆಯಲ್ಲಿ ತೋರಿದ ನಿರ್ಲಕ್ಷ್ಯವೇ ಉದಾಹರಣೆ ಎಂದು ರೈ ಹೇಳಿದರು.
ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡುತ್ತೇವೆ. ಪಯಸ್ವಿನಿ ನದಿಗೆ ವೆಂಟೆಡ್ ಡ್ಯಾಂ, ಶುದ್ಧೀಕರಣ ಘಟಕ ಸ್ಥಾಪನೆಗೆ ಒತ್ತು ನೀಡಲಾಗುವುದು ಎಂದರು. ಕೆಪಿಸಿಸಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ, ಅಲ್ಪಸಂಖ್ಯಾಕ ಘಟಕದ ಜಿಲಾಧ್ಯಕ್ಷ ಎನ್.ಎಸ್. ಕರೀಂ, ಮುಖಂಡರಾದ ಸಂಶುದ್ದಿನ್ ಎನ್., ಜಿ.ಕೆ. ಹಮೀದ್, ಸಿದ್ದಿಕ್ ಕೊಕ್ಕೊ, ಶಾಫಿ ಕುತ್ತಮೊಟ್ಟೆ, ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.