ಕಾಂಕ್ರೀಟ್ ಕಾಮಗಾರಿಗೆ ಅಂದಾಜುಪಟ್ಟಿ ತಯಾರಿ
Team Udayavani, Oct 30, 2018, 4:05 PM IST
ಕಡಬ: ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕುಂತೂರುಪದವು ಮುರಚಡವು ಎನ್ನುವಲ್ಲಿಂದ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಶ್ರೀ ರಾಜನ್ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ನಾಲ್ಕೂವರೆ ಕಿ.ಮೀ. ಉದ್ದದ ಮಣ್ಣಿನ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ನಡೆಸಲು ಅಂದಾಜು ಪಟ್ಟಿ ತಯಾರಿಸಲಾಯಿತು.
ಕುಂತೂರು ಗ್ರಾಮದ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಶ್ರೀ ರಾಜನ್ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಗ್ರಾಮ ಪಂಚಾಯತ್ ರಸ್ತೆ ಇದಾಗಿದ್ದು, ಮಣ್ಣಿನ ರಸ್ತೆಯಾಗಿರುವುದರಿಂದ ಮಳೆಗಾಲದಲ್ಲಿ ಸಂಪೂರ್ಣ ಕೆಸರುಮಯಗೊಂಡಿದೆ. ವಾಹನ ಓಡಾಟಕ್ಕೆ, ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಅವರ ಮೂಲಕ ಮನವಿ ಮಾಡಲಾಗಿತ್ತು.
ಮನವಿಗೆ ಸ್ಪಂದನೆ
ಮನವಿಗೆ ಸ್ಪಂದಿಸಿದ ಸಚಿವರು ಕ್ರಿಯಾ ಯೋಜನೆ ತಯಾರಿಸಿ ಕಳುಹಿಸಿಕೊಡುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಜಿ.ಪಂ. ಎಂಜಿನಿಯರ್ ಇಲಾಖೆಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಜಿ.ಪಂ. ಸಹಾಯಕ ಎಂಜಿನಿಯರ್ ಸಂದೀಪ್ ಅವರು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿದ್ದಾರೆ. ರಸ್ತೆಯ ಉದ್ದ, ಅಳವಡಿಸಬೇಕಾದ ಮೋರಿಗಳ ಲೆಕ್ಕಾಚಾರ ಹಾಕಿ ಒಟ್ಟು 2.70 ಕೋಟಿ ರೂ. ಮೊತ್ತದ ಕ್ರಿಯಾಯೋಜನೆ ತಯಾರಿಸಿದ್ದಾರೆ.
ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಅವರು ಎಂಜಿನಿಯರ್ ಅವರಿಗೆ ಪೂರಕ ಮಾಹಿತಿ ನೀಡಿದರು. ದೇವಸ್ಥಾನದ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಯಾದವ್ ಬೀರಂತಡ್ಕ, ಮೋನಪ್ಪ ಗೌಡ ಬೀರಂತಡ್ಕ, ಜಿ.ಪಂ. ಎಂಜಿನಿಯರ್ ಭರತ್ ಉಪಸ್ಥಿತರಿದ್ದರು.
ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಬಲಮುರಿ ದೇವಸ್ಥಾನದ ಆಡಳಿತ ಮಂಡಳಿಯವರ ಮನವಿಯಂತೆ ಕಡಬ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್ ರವರ ಮೂಲಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಿಡಬ್ಲ್ಯುಡಿ ಸಚಿವ ಎಚ್. ಡಿ. ರೇವಣ್ಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡರಿಗೆ ಮನವಿ ಸಲ್ಲಿಸಲಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.