ಕಡಬ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸಿದ್ಧತೆ

90 ವರ್ಷ ಪೂರೈಸಿರುವ ಶಾಲೆಯಲ್ಲಿ ಆರಂಭವಾಗಲಿದೆ ಕೆ.ಜಿ. ಆಂಗ್ಲ ತರಗತಿ

Team Udayavani, May 16, 2019, 5:50 AM IST

20

ಆಂಗ್ಲ ಶಿಕ್ಷಣ ನೀಡಲು ಸಜ್ಜಾಗಿರುವ ಕಡಬದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.

ಕಡಬ: ರಾಜ್ಯ ಸರಕಾರವು 1 ಸಾವಿರ ಸರಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ನಿರ್ಧರಿಸಿದ್ದು, ಕಡಬದ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಈ ವರ್ಷದಿಂದಲೇ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಸಿದ್ಧತೆ ನಡೆದಿದೆ. ಪೂರ್ವ ಪ್ರಾಥಮಿಕ (ಕೆ.ಜಿ.) ತರಗತಿಗಳನ್ನು ಕೂಡ ತೆರೆಯಲು ಚಿಂತನೆ ನಡೆಸಲಾಗಿದೆ.

ನಡೆದಿತ್ತು ಪ್ರಯತ್ನ
ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಜಾರಿಗೊಳಿಸಲು ಸರಕಾರ ಚಿಂತನೆ ನಡೆಸುವ ಮೊದಲೇ ಕಡಬ ಪೇಟೆಯಲ್ಲಿಯೇ ಇರುವ ಈ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿದ್ದವು. 1928ರಲ್ಲಿ ಸ್ಥಾಪನೆಯಾಗಿ ಕಡಬ ಪರಿಸರದ ವಿವಿಧ ಗ್ರಾಮಗಳ ಶಿಕ್ಷಣಾಕಾಂಕ್ಷಿಗಳಿಗೆ ಆಸರೆಯಾಗಿದೆ.

ಚರ್ಚೆ ನಡೆಸಿದ್ದರು
ಒಂದು ಕಾಲದಲ್ಲಿ 500-600 ವಿದ್ಯಾರ್ಥಿಗಳಿದ್ದ ಕಡಬದ ಈ ಸರಕಾರಿ ಶಾಲೆಯು ಎಲ್ಲ ಸರಕಾರಿ ಶಾಲೆಗಳಂತೆಯೇ ವಿದ್ಯಾರ್ಥಿಗಳ ಸಂಖ್ಯೆ ಕುಸಿದು ಇದೀಗ 90 ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ಆಂಗ್ಲ ಮಾಧ್ಯಮ ಶಿಕ್ಷಣದ ಪ್ರಭಾವದಿಂದಾಗಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿರುವುದನ್ನು ಮನಗಂಡ ಇಲ್ಲಿನ ಹಳೆ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಪ್ರಮುಖರು ಇಲ್ಲಿಯೂ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುವ ಕುರಿತು ಹಲವು ಬಾರಿ ಸಭೆ ನಡೆಸಿ ಚರ್ಚಿಸಿದ್ದರು. ಇದೀಗ ಸರಕಾರವೇ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಇಲ್ಲಿ ಆರಂಭಿಸಲು ಮುಂದಾಗಿರುವುದು ಶಿಕ್ಷಣ ಪ್ರೇಮಿಗಳ ಸಂತಸಕ್ಕೆ ಕಾರಣವಾಗಿದೆ.

 ಶಿಕ್ಷಕರ ನೇಮಕಾತಿ ಆಗಲಿದೆ
ಈ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯ ಬೇಡಿಕೆ ಈ ಹಿಂದೆಯೇ ಇತ್ತು. ಜನರ ಆಶಯದಂತೆ ಸರಕಾರವೇ ಆಂಗ್ಲ ಮಾಧ್ಯಮ ತರಗತಿ ಆರಂಭಿಸುತ್ತಿದೆ. ಆಯ್ಕೆಯಾಗಿರುವ ಶಾಲೆಗಳ ಶಿಕ್ಷಕರಿಗೆ ತರಬೇತಿ ನೀಡುತ್ತಿದೆ. ಮುಂದಿನ ದಿನಗಳಲ್ಲಿ ನುರಿತ ಆಂಗ್ಲ ಭಾಷಾ ಶಿಕ್ಷಕರ ನೇಮಕಾತಿಯೂ ಆಗಲಿದೆ. ಆಸಕ್ತರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ತರಗತಿಗೆ ಸೇರ್ಪಡೆಗೊಳಿಸಲು ಶಾಲಾ ಮುಖ್ಯಸ್ಥರನ್ನು ಸಂಪರ್ಕಿಸಬಹುದು.
 - ಕುಮಾರ್‌ ಕೆ.ಜೆ., ಸಿಆರ್‌ಪಿ, ಕಡಬ ಕ್ಲಸ್ಟರ್‌

 ಕ್ರಾಂತಿಕಾರಿ ಹೆಜ್ಜೆ
ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವುದಕ್ಕೆ ವಿರೋಧಗಳಿದ್ದರೂ, ಸರಕಾರಿ ಶಾಲೆಗಳನ್ನು ಉಳಿಸಲು ಸರಕಾರ ಕೈಗೊಂಡ ಕ್ರಾಂತಿಕಾರಿ ಹೆಜ್ಜೆ ಇದಾಗಿದೆ. ದುಬಾರಿ ಶುಲ್ಕದಿಂದಾಗಿ ಖಾಸಗಿ ಶಾಲೆಗಳಲ್ಲಿ ಎಲ್ಲ ವರ್ಗದ ಜನರಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಪಡೆಯುವುದು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ಬಡ ವರ್ಗದ ಮಕ್ಕಳಿಗೆ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಸಿಗುವುದಿದ್ದರೆ ಅದು ಸ್ವಾಗತಾರ್ಹ.
 - ಎಸ್‌. ಅಬ್ದುಲ್‌ಖಾದರ್‌, ಸಾಮಾಜಿಕ ಮುಂದಾಳು

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.