ಮುಷ್ಕರಕ್ಕೆ ಖಾಸಗಿ ವೈದ್ಯರ ಬೆಂಬಲ; ತುರ್ತು ಸೇವೆಗೆ ಅಡ್ಡಿಯಿಲ್ಲ
Team Udayavani, Jul 29, 2018, 1:07 PM IST
ಬೆಳ್ತಂಗಡಿ : ಕೇಂದ್ರ ಸರಕಾರದ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ ಎಂಸಿ) ವಿರೋಧಿಸಿ ಖಾಸಗಿ ವೈದ್ಯರು ಹಮ್ಮಿಕೊಂಡಿದ್ದ ಮುಷ್ಕರಕ್ಕೆ ಬೆಳ್ತಂಗಡಿ ತಾಲೂಕಿನ ವೈದ್ಯರು ಬೆಂಬಲ ಸೂಚಿಸಿದ್ದು, ಆದರೆ ರೋಗಿಗಳ ತುರ್ತು ಸೇವೆಗಳಿಗೆ ತೊಂದರೆಯಾಗದಂತೆ ಮುಷ್ಕರ ನಡೆಸಿದ್ದಾರೆ. ತಾಲೂಕಿನ ಬಹುತೇಕ ಖಾಸಗಿ ಆಸ್ಪತ್ರೆ, ಕ್ಲಿನಿಕ್ಗಳಲ್ಲಿ ಧಿಕ್ಕಾರ ದಿನ ಎಂದು ಫಲಕ ಅಳವಡಿಸಿ, ಹೊರ ರೋಗಿ ವಿಭಾಗವನ್ನು ಬಂದ್ ಮಾಡಿದ್ದರು. ಆದರೆ ಆಸ್ಪತ್ರೆಗಳಿಗೆ ಆಗಮಿಸಿದ ಗಂಭೀರ ಪ್ರಕರಣಗಳಿಗೆ ಸೇವೆ ನೀಡಲಾಗಿತ್ತು.
ಕೇವಲ ತಮ್ಮ ಸಂಸ್ಥೆಗಳಲ್ಲಿ ಬೋರ್ಡ್ ಹಾಕಲಾಗಿತ್ತೇ ವಿನಾ ಯಾವುದೇ ಪ್ರತಿಭಟನೆ ಇರಲಿಲ್ಲ. ಜತೆಗೆ ಬಹುತೇಕ ಕ್ಲಿನಿಕ್ಗಳು ತೆರೆದುಕೊಂಡಿದ್ದವು. ತಾಲೂಕಿನಲ್ಲಿ ನಾನು ಮುಷ್ಕರವನ್ನು ಬೆಂಬಲಿಸುವ ಜತೆಗೆ ರೋಗಿಗಳ ಹಿತದೃಷ್ಟಿಯಿಂದ ತುರ್ತು ಸೇವೆಗಳನ್ನು ನೀಡಿದ್ದೇವೆ ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಗೋಪಾಲಕೃಷ್ಣ ಕೆ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.