ಹೆಣ್ಣು ಮಕ್ಕಳ ಬಗ್ಗೆ ತಾತ್ಸಾರ ಬೇಡ : ನ್ಯಾ. ಯಶ್ವಂತ್‌ ಕುಮಾರ್‌

ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಜಾಥಾ

Team Udayavani, Nov 30, 2019, 5:20 PM IST

jatha-1

ಸುಳ್ಯ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಆರೋಗ್ಯ ಇಲಾಖೆ ಇದರ ವತಿಯಿಂದ ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಜಾಗೃತಿ ಜಾಥಾ ಸುಳ್ಯದಲ್ಲಿ ನ.30 ರಂದು ನಡೆಯಿತು.

ಜ್ಯೋತಿ ಸರ್ಕಲ್‌ ಬಳಿ ಸುಳ್ಯ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಪುರುಷೋತ್ತಮ ಎಂ. ಬ್ಯಾಂಡ್‌ ಬಾರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾವು ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ರಥಬೀದಿ ಮೂಲಕ ಕೆವಿಜಿ ಪುರಭವನದಲ್ಲಿ ಸಮಾಪನಗೊಂಡಿತು.

ಸಮಾಪನ ಸಮಾರಂಭದಲ್ಲಿ ಸುಳ್ಯ ಜೆಎಂಎಫ್‌ಸಿ ನ್ಯಾಯಾಲಯದ ಕಿರಿಯ ನ್ಯಾಯಾಧೀಶ ಯಶ್ವಂತ್‌ ಕುಮಾರ್‌ ಕೆ ಮಾತನಾಡಿ, ಕೇಂದ್ರ ಸರಕಾರದ ಭೇಟಿ ಪಡಾವು, ಭೇಟಿ ಬಚಾವು ಕಾರ್ಯಕ್ರಮದಡಿ ಹೆಣ್ಣು ಮಕ್ಕಳ ಸಂರಕ್ಷಣೆ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಈ ಮೂಲಕ ಎಲ್ಲರನ್ನು ಹೆಣ್ಣು ಮಕ್ಕಳ ಅಗತ್ಯತೆ, ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದರು.

ಹೆಣ್ಣು ಮಗು ಜನಿಸಿದರೆ ಹೊರೆ ಎಂಬ ಭಾವನೆ ಹೆತ್ತವರಿಂದ ಪೂರ್ಣವಾಗಿ ತೊಲಗಿಲ್ಲ. ಸಮಾಜದಲ್ಲಿ ಲಿಂಗಾನುಪಾತ ವ್ಯತ್ಯಾಸದಿಂದ ಸಾಮಾಜಿಕ ಪಿಡುಗಿಗೆ ಕಾರಣವಾಗಬಹುದು ಎಂದ ಅವರು, ಹೆಣ್ಣಿನ ಬಗ್ಗೆ ತಾತ್ಸಾರ ಸಲ್ಲದು. ಹೆಣ್ಣು ಮತ್ತು ಗಂಡು ಎಂಬ ಬೇದ ಬೇಡ. ಹೆಣ್ಣು-ಗಂಡಿನಷ್ಟೇ ಸಮರ್ಥಳು. 2005 ರಲ್ಲಿ ಹಿಂದೂ ಉತ್ತರಧಿಕಾರಿ ಕಾಯ್ದೆಗೆ ತಿದ್ದುಪಡಿ ತಂದು ಗಂಡು ಮಕ್ಕಳಿಗೆ ಇರುವಷ್ಟೇ ಆಸ್ತಿ ಹಕ್ಕನ್ನು ಹೆಣ್ಣು ಮಕ್ಕಳಿಗೆ ನೀಡಲಾಯಿತು. ಇದರ ಮೂಲ ಉದ್ದೇಶ ಅಸಮಾನತೆ ಹೋಗಲಾಡಿಸುವಿಕೆ ಆಗಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮಾತನಾಡಿ, ದೇಶದ ವಿವಿಧ ಭಾಗಗಳಲ್ಲಿ ಹೆಣ್ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದನ್ನು ಮಾಧ್ಯಮಗಳ ಮೂಲಕ ನಾವು ಗಮನಿಸಬಹುದು. ಮಹಿಳಾ ತಹಶೀಲ್ದಾರನ್ನು ಕರ್ತವ್ಯ ನಿರತ ಕಚೇರಿಯಲ್ಲಿ ಸುಟ್ಟು ಹಾಕಿರುವುದು, ಪಶು ವೈದ್ಯಾಧಿಕಾರಿಯನ್ನು ಸಾಮೂಹಿಕ ಅತ್ಯಾಚಾರ ಎಸಗಿ ಸುಟ್ಟು ಹಾಕಿರುವ ಪ್ರಕರಣಗಳು ಇಡೀ ಸಮಾಜ ತಲೆತಗ್ಗಿಸುವಂತಿದೆ. ಇಂತಹ ಕೌರ್ಯಗಳನ್ನು ಎಲ್ಲರೂ ವಿರೋಧಿಸಿ ಹೆಣ್ಣು ಮಕ್ಕಳು ಗೌರವಯುತ ಬಾಳ್ವೆ ನಡೆಸಲು ಬೇಕಾದ ವಾತಾವರಣವನ್ನು ಸಮಾಜದಲ್ಲಿ ನಿರ್ಮಿಸಬೇಕಿದೆ ಎಂದರು.

ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಎನ್‌., ತಾಲೂಕು ವೈದ್ಯಾಧಿಕಾರಿ ಡಾ|ಸುಬ್ರಹ್ಮಣ್ಯ, ಎಸ್‌.ಐ. ಹರೀಶ್‌ ಎಂ.ಎನ್‌., ಕ್ರೈಂ ವಿಭಾಗದ ಎಸ್‌.ಐ. ರತ್ನಕುಮಾರ್‌, ವಕೀಲರ ಸಂಘದ ವಿನಯ ಕುಮಾರ್‌ ಮುಳುಗಾಡು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಸರಕಾರಿ ಪ್ರೌಢಶಾಲೆ ಸುಳ್ಯ, ಸೈಂಟ್‌ ಜೋಸೆಫ್‌ ಪ್ರೌಢಶಾಲೆ, ಶ್ರೀ ಶಾರದಾ ಹೆಣ್ಮಕ್ಕಳ ಪ್ರೌಢಶಾಲೆ, ಗಾಂಧಿನಗರ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.