ಕೊಕ್ಕಡ ಗ್ರಾ.ಪಂ. ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, Sep 1, 2018, 3:31 PM IST

secptember-17.jpg

ಕೊಕ್ಕಡ: ಕೊಕ್ಕಡ ಗ್ರಾ.ಪಂ.ನ ಸಾಮಾನ್ಯ ಸಭೆ ನಡೆಯುವ ವೇಳೆ ಬಿಜೆಪಿ ಪಕ್ಷದ ಬೆಂಬಲಿಗರು ಗ್ರಾ.ಪಂ. ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿ ಮುಖಂಡ ಪೂವಾಜೆ ಕುಶಾಲಪ್ಪ ಗೌಡ ಅವರ ನೇತೃತ್ವದಲ್ಲಿ ಗ್ರಾ.ಪಂ. ಎದುರು ಪ್ರತಿಭಟನೆ ನಡೆಸಿದರು.

ಕೊಕ್ಕಡದ ಜೋಡುಮಾರ್ಗದಿಂದ ಕಪ್ಪು ಬಾವುಟ ಹಿಡಿದುಕೊಂಡು ಗ್ರಾ.ಪಂ. ಎದುರು ಬಂದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಪೂವಾಜೆ ಕುಶಾಲಪ್ಪ, ಗ್ರಾ.ಪಂ. ಅಧ್ಯಕ್ಷರು ಭ್ರಷ್ಟಾಚಾರದಲ್ಲಿ ತೊಡಗಿಕೊಂಡು ಲಂಚ ಸ್ವೀಕರಿಸುವ ವೇಳೆಯಲ್ಲಿ ಎಸಿಬಿಯಿಂದ ಬಂಧನಕ್ಕೊಳಗಾಗಿ ಜೈಲು ಸೇರಿ ಹೊರಬಂದಿದ್ದಾರೆ. ಹಲವು ಕಾಮಗಾರಿಗಳಲ್ಲಿ ಲಂಚ ಸ್ವೀಕರಿಸಿದ್ದಾರೆ. ತಮ್ಮದೇ ಪಕ್ಷದ ಬೆಂಬಲಿಗ ಪಂಚಾಯತ್‌ ಸದಸ್ಯನ ಮೇಲೆ ಹಲ್ಲೆ ನಡೆಸುವ ಮೂಲಕ ಗೂಂಡಾವರ್ತನೆ ತೋರಿಸಿರುವ ಅಧ್ಯಕ್ಷರು ನಮ್ಮ ಗ್ರಾಮಕ್ಕೆ ಬೇಡವೇ ಬೇಡ. ಗ್ರಾಮಸಭೆಯಲ್ಲೇ ಇದರ ಬಗ್ಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದ್ದು, ಗ್ರಾಮಸಭೆ ರದ್ದಾದ ಘಟನೆಯೂ ನಡೆದಿತ್ತು. ಅಧ್ಯಕ್ಷರು ರಾಜೀನಾಮೆ ಕೊಡದೇ ಇದ್ದಲ್ಲಿ 15 ದಿನಗಳ ಬಳಿಕ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದರು.

ಸಾಮಾಜಿಕ ಹೋರಾಟಗಾರ ಶ್ರೀಧರ ಗೌಡ ಕೆಂಗುಡೇಲು ಮಾತನಾಡಿ, ಗ್ರಾಮದಲ್ಲಿ ಅರಾಜಕತೆ ತಾಂಡವ ವಾಡುತ್ತಿದ್ದು, ತನ್ನದೇ ಪಕ್ಷದ ಸದಸ್ಯನ ಮೇಲೆ ಕೈ ಮಾಡುವ ಮೂಲಕ ಗೂಂಡಾ ವರ್ತನೆಯನ್ನು ಪಂಚಾಯತ್‌ ಅಧ್ಯಕ್ಷರು ತೋರಿಸಿದ್ದಾರೆ, ಪಂಚಾಯತ್‌ನ ಎಲ್ಲ ವಿಭಾಗಗಳಲ್ಲೂ ಭ್ರಷ್ಟಾಚಾರವಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳೇ ತಿಳಿಸಿದ್ದಾರೆ. ಅಧ್ಯಕ್ಷರು ಕೂಡಲೇ ರಾಜೀನಾಮೆ ನೀಡಬೇಕು. ಇಂದು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ತೀವ್ರ ರೀತಿಯ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಬಿಜೆಪಿ ಬೆಂಬಲಿತ ಕಾರ್ಯಕರ್ತರು ಉಪಸ್ಥಿತರಿದ್ದರು. 

ಪೊಲೀಸ್‌ ಬಂದೋಬಸ್ತ್
ಕೆಲ ದಿನಗಳ ಹಿಂದೆ ನಡೆದ ಗ್ರಾಮ ಸಭೆಯಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿ ಗದ್ದಲವೇರ್ಪಟ್ಟು ಪರಿಸ್ಥಿತಿ ವಿಕೋಪಕ್ಕೆ ತೆರಳಿದ್ದರೂ, ಪೊಲೀಸರು ಸ್ಥಳದಲ್ಲಿ ಹಾಜರಿರಲಿಲ್ಲ. ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಭಟನಾ ಸ್ಥಳದಲ್ಲಿ ಅಧಿಕ ಸಂಖ್ಯೆಯಲ್ಲಿ ಪೊಲೀಸ್‌ ಅಧಿಕಾರಿಗಳು, ಸಿಬಂದಿ ಹಾಜರಿದ್ದರು.

ಅಭಿವೃದ್ಧಿ ಕೆಲಸ ಸಹಿಸಲಾಗದೆ ಪಿತೂರಿ
ಕೊಕ್ಕಡ ಗ್ರಾ.ಪಂ. ಹಿನ್ನೆಲೆಯನ್ನು ಅವಲೋಕಿಸಿದರೆ ಈ ಬಾರಿ ತಮ್ಮ ಅವಧಿಯಲ್ಲಿ ಅತ್ಯಂತ ಹೆಚ್ಚಿನ ಅನುದಾನಗಳನ್ನು ತರಿಸಿಕೊಂಡು ನಡೆಸಿದ ಅಭಿವೃದ್ಧಿಯನ್ನು ಸಹಿಸಲಾಗದೆ ಬಿಜೆಪಿ ಪಕ್ಷದ ಬೆಂಬಲಿತರು ನಮ್ಮ ಪಕ್ಷದ ಸದಸ್ಯರನ್ನೂ ಬಳಸಿಕೊಂಡು ಪಿತೂರಿ ನಡೆಸುವ ಮೂಲಕ ನನ್ನನ್ನು ಭ್ರಷ್ಟಾಚಾರದ ಬಲೆಯಲ್ಲಿ ಸಿಲುಕಿಸುವ ಪಿತೂರಿ ಇದಾಗಿದೆ ಎಂದು ಗ್ರಾ.ಪಂ. ಅಧ್ಯಕ್ಷ ವಿ.ಜೆ. ಸೆಬಾಸ್ಟಿಯನ್‌ ಅವರು ಹೇಳಿದ್ದಾರೆ. 

ಅಧ್ಯಕ್ಷರ ಮೇಲೆ ವಿಶ್ವಾಸವಿಲ್ಲ ಎಂದು ವಿರೋಧ ಪಕ್ಷದ ಕೆಲವರು ಬಂದು ಬೊಬ್ಬೆ ಹೊಡೆದ ಮಾತ್ರಕ್ಕೆ ರಾಜೀನಾಮೆ ಕೊಡಲು ಸಾಧ್ಯವಿಲ್ಲ. ಜನರಿಂದ ಅತ್ಯಧಿಕ ಮತಗಳಿಂದ ಆಯ್ಕೆಯಾಗಿ ಕಾನೂನು ರೀತಿಯಲ್ಲಿ ಚುನಾವಣೆಯ ಮೂಲಕ ಅಧಿಕಾರ ಪಡೆಯಲಾಗಿದೆ ವಿನಾ ಪಿತೂರಿ ನಡೆಸಿದವರ ಕೃಪಾಕಟಾಕ್ಷದಿಂದಲ್ಲ. ಅಧಿಕಾರದಿಂದ ಕೆಳಗಿಳಿಸುವ ಉದ್ದೇಶವಿದ್ದರೆ ಕಾನೂನು ರೀತಿ ಮಾಡಲಿ. ಅದು ಬಿಟ್ಟು ಇಂತಹ ಕೀಳುಮಟ್ಟದ ರಾಜಕೀಯ ವರ್ತನೆಗಳಿಗೆ ಮತದಾರರು ಉತ್ತರಿಸುತ್ತಾರೆ ಎಂದವರು ಸಭೆಯಲ್ಲಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.