PUC Result: ಸುಳ್ಯದ ತಾಯಿ, ಮಗಳು ಉತ್ತೀರ್ಣ! ಅಂದು ಎಸೆಸೆಲ್ಸಿ; ಇಂದು ಪಿಯುಸಿ
Team Udayavani, Apr 23, 2023, 7:05 AM IST
ಸುಳ್ಯ: ಇಲ್ಲಿನ ಗೃಹರಕ್ಷಕ ದಳದ ಸಿಬಂದಿಯೊಬ್ಬರು 45ರ ಹರೆಯದಲ್ಲಿ ವಯಸ್ಸಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಮಗಳು ಕೂಡ ಪಿಯುಸಿ ಪರೀಕ್ಷೆ ಬರೆದಿದ್ದು, ಅಮ್ಮ-ಮಗಳು ಜತೆಯಾಗಿ ಉತ್ತೀರ್ಣರಾಗಿರುವುದು ವಿಶೇಷ. ಎರಡು ವರ್ಷಗಳ ಹಿಂದೆ ಮಗಳೊಂದಿಗೆ ಎಸೆಸೆಲ್ಸಿ ಪರೀಕ್ಷೆಯನ್ನು ಬರೆದು ಉತ್ತೀರ್ಣರಾಗಿದ್ದರು.
ಜಯನಗರದ ರಮೇಶ್ ಅವರ ಪತ್ನಿ ಗೀತಾ ಮತ್ತು ಪುತ್ರಿ ತ್ರಿಷಾ ಈ ವಿಶೇಷ ಜೋಡಿ. ಗೃಹರಕ್ಷಕ ದಳದ ಸಿಬಂದಿಯಾಗಿರುವ ಗೀತಾ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, 45ನೇ ವರ್ಷದಲ್ಲಿ ಖಾಸಗಿಯಾಗಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದಾರೆ. ತ್ರಿಷಾ ಸುಳ್ಯದ ಜೂನಿಯರ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ. 25 ವರ್ಷಗಳ ಹಿಂದೆ ಗೀತಾ ಪ್ರೌಢ ಶಿಕ್ಷಣದ ಸಂದರ್ಭ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದರು. ಗೀತಾ ಅವರ ಕಲಿಕೆಗೆ ಪೂರಕವಾಗಿ ಕಾಲೇಜಿನ ಉಪನ್ಯಾಸಕರು ಪುಸ್ತಕಗಳನ್ನು ನೀಡಿ ಸಹಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.