ಪಿಯುಸಿ: ತುಳು ಪಠ್ಯ ಸೇರ್ಪಡೆ ಭರವಸೆ

Team Udayavani, Jun 23, 2019, 5:00 AM IST

21

ಪುತ್ತೂರು: ಪಿಯುಸಿ ವಿಭಾಗದಲ್ಲೂ ತುಳು ಪಠ್ಯ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಸರಕಾರಕ್ಕೆ ತುಳು ಅಕಾಡೆಮಿ ವತಿಯಿಂದ ಮನವಿ ಸಲ್ಲಿಸಲಾಗಿದೆ. ಪಿಯುಸಿಗೂ ತುಳು ಪಠ್ಯ ಮಾಡುವ ಭರವಸೆ ದೊರೆತಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು.

ಅಖೀಲ ಭಾರತ ತುಳು ಒಕ್ಕೂಟ, ಪುತ್ತೂರು ತುಳುಕೂಟ ಹಾಗೂ ಶ್ರೀ ರಾಮಕೃಷ್ಣ ಪ್ರೌಢ ಶಾಲಾ ವತಿಯಿಂದ ಶನಿವಾರ ಕೊಂಬೆಟ್ಟು ಬಂಟರ ಭವನದಲ್ಲಿ ತುಳು ಭಾಷೆಯಲ್ಲಿ 10ನೇ ತರಗತಿಯಲ್ಲಿ ಶೇ. 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಸಾಧಕ ಸಮ್ಮಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಕಾಲೇಜುಗಳಲ್ಲಿ ತುಳು ಪಠ್ಯ ಮಾಡುವ ಮೂಲಕ ತುಳು ಭಾಷೆಯ ಬೆಳವಣಿ ಗೆಗೆ ಸ್ಪಂದಿಸಿದೆ. ಇಂತಹ ಹಲವು ಕಾರ್ಯ ಕ್ರಮಗಳಿಂದ ತುಳು ಭಾಷೆಯ ಜತೆಗೆ ತುಳು ಸಂಸ್ಕೃತಿಯನ್ನು ಬೆಳೆಸುವ ಜಾಗೃತಿ ಜನತೆಯಲ್ಲಿ ಹೆಚ್ಚಾಗುತ್ತಿದೆ ಎಂದರು.

ರಾಜಕೀಯ ಒತ್ತಡ ಬೇಕು
ಜಗತ್ತಿನಲ್ಲಿ 1.50 ಕೋಟಿ ಮಂದಿ ತುಳು ಭಾಷೆಯನ್ನು ಮಾತನಾಡುತ್ತಿದ್ದಾರೆ. ಎಲ್ಲ ಅರ್ಹತೆಗಳಿದ್ದರೂ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಲು ರಾಜಕೀಯದ ಒತ್ತಡ ಬೇಕಾಗಿದೆ. ಈ ಭಾಗದ ಸಂಸದರು ಮನಸ್ಸು ಮಾಡಿದರೆ ಬಹು ವರ್ಷಗಳ ಕನಸು ನನಸಾಗಬಹುದು ಎಂದರು.

ಜನಜಾಗೃತಿ ಆಂದೋಲನ
ಮುಖ್ಯ ಅತಿಥಿಯಾಗಿದ್ದ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಎ. ಹೇಮನಾಥ ಶೆಟ್ಟಿ, ತುಳು ಭಾಷಾ ಬೆಳವಣಿಗೆ ಬಲಿಷ್ಠವಾಗಲು ಜನ ಜಾಗೃತಿಯ ಆಂದೋಲನ ನಡೆಯಬೇಕಾ ಗಿದೆ. ತುಳು ಪಠ್ಯ ಕೇವಲ ಪುಸ್ತಕಕ್ಕೆ ಸೀಮಿತವಾಗದೆ ತುಳು ಶಬ್ದ ಸಂಪತ್ತನ್ನು ಬೆಳೆಸುವಂತಿರಬೇಕು. ತುಳು ಪಠ್ಯಕ್ಕೆ ಉತ್ತಮ ಶಿಕ್ಷಕರ ನೇಮಕಾತಿಯತ್ತ ಅಕಾ ಡೆಮಿ ಗಮನ ಹರಿಸಬೇಕಾಗಿದೆ ಎಂದರು.

ಮುಂದಿನ ಬಾರಿ ರಾಮಕೃಷ್ಣ ಪ್ರೌಢಶಾಲೆಯ 10ನೇ ತರಗತಿಯಲ್ಲಿ ತುಳು ಪಠ್ಯದಲ್ಲಿ ಶೇ. 100 ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ತಲಾ 1,000 ರೂ. ನಗದು ಬಹುಮಾನ ನೀಡುವುದಾಗಿ ಅವರು ಘೋಷಣೆ ಮಾಡಿದರು.

ಸಮ್ಮಾನ
ಬರೋಡಾ ತುಳು ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಬಿ. ಅವರನ್ನು ಸಮ್ಮಾನಿ ಸಲಾಯಿತು. 10ನೇ ತರಗತಿ ಪರೀಕ್ಷೆಯಲ್ಲಿ ತುಳು ಪಠ್ಯದಲ್ಲಿ ಶೇ. 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಅಖೀಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ದಿಲ್ಲಿಯ ದಕ್ಷಿಣ ಭಾರತೀಯ ಸಾಂಸ್ಕೃತಿಕ ಸಂಘದ ಸಂಚಾಲಕ ನರೇಂದ್ರ ರೈ ಎಂ.ಬಿ., ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಿರಂಜನ ರೈ ಮಠಂತಬೆಟ್ಟು, ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್‌, ರಾಮಕೃಷ್ಣ ಪ್ರೌಢಶಾಲಾ ಮುಖ್ಯಗುರು ರೂಪಕಲಾ, ತುಳು ಅಕಾಡೆಮಿ ಸದಸ್ಯರಾದ ಕಾಂತಿ ಶೆಟ್ಟಿ ಬೆಂಗಳೂರು, ಶೀನಪ್ಪ ಆಳ್ವ, ವಿಜಯಕುಮಾರ್‌ ಕುಲಶೇಖರ, ತುಳು ಸಂಘಟನೆಯ ಹರಿಣಿ ವಿಜಯ್‌, ಚಂದ್ರಶೇಖರ ಸುವರ್ಣ ಭಾಗವಹಿಸಿದ್ದರು.

ಕಾರ್ಯಕ್ರಮ ಸಂಯೋಜಕ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್‌ ರೈ ಸ್ವಾಗತಿಸಿ, ಅಖೀಲ ಭಾರತ ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಿಟ್ಟೆ ಶಶಿಧರ ರೈ ಪ್ರಾಸ್ತಾವಿಸಿದರು. ಪುತ್ತೂರು ತುಳುಕೂಟದ ಅಧ್ಯಕ್ಷ ವಿಜಯಕುಮಾರ್‌ ಹೆಬ್ಟಾರಬೈಲು ವಂದಿಸಿದರು. ನ್ಯಾಯವಾದಿ ಹರಿಣಾಕ್ಷಿ ಜೆ. ಶೆಟ್ಟಿ ಮತ್ತು ಶಿಕ್ಷಕಿ ಲತಾ ರೈ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

Gangolli

Puttur: ಗಾಯಾಳು ವಿದ್ಯಾರ್ಥಿನಿ ಸಾವು

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.