ಬಾಲಕಿ ಮೇಲೆ ಅತ್ಯಾಚಾರ: 10 ವರ್ಷ ಜೈಲು ಶಿಕ್ಷೆ
Team Udayavani, Feb 25, 2023, 6:23 AM IST
ಪುಂಜಾಲಕಟ್ಟೆ: ನಾಲ್ಕು ವರ್ಷದ ಹಿಂದೆ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ನ್ಯಾಯಾಲಯ ಫೆ. 23ರಂದು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್ ಪೂಜಾರಿ (35) ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಸ್ಟಿ-ಎಸ್ಸಿ 1, (ಪೊಕೊÕ) ನ್ಯಾಯಾಲಯದ ನ್ಯಾಯಾಧೀಶರು ನಮೂದಿಸಿದ ಕಾಯ್ದೆ, ಕಲಂಗಳ ಅಡಿಯಲ್ಲಿ 10 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ, ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ಮತ್ತು 6 ತಿಂಗಳ ಜೈಲು ಹಾಗೂ 1 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಘಟನೆ ಹಿನ್ನೆಲೆ
2019ರ ಫೆ. 11ರಂದು ಬಂಟ್ವಾಳ ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಇಚ್ಛೆಗೆೆ ವಿರುದ್ಧವಾಗಿ ಅತ್ಯಾಚಾರ ಮಾಡಿದ ಬಗ್ಗೆ 2019 ಫೆ. 22ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಅಂದಿನ ಬಂಟ್ವಾಳ ಎಎಸ್ಪಿ ಸೈದುಲ್ ಅಡಾವತ್ ಅವರು ಆರೋಪಿ ಸತೀಶ್ ಪೂಜಾರಿಯನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿದ್ದು, ಇದೀಗ ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯವಾಗಿ ಆರೋಪಿತನ ವಿರುದ್ಧ ಆರೋಪ ಸಾಬೀತಾಗಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಸರಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಸಹನಾದೇವಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.