Punjalkatte: ಲಾರಿ ಪಲ್ಟಿಯಾಗಿ ಓರ್ವ ಸಾವು, ಇಬ್ಬರು ಗಂಭೀರ
Team Udayavani, Jul 19, 2024, 11:03 AM IST
ಪುಂಜಾಲಕಟ್ಟೆ: ಎಡೆಬಿಡದೆ ಸುರಿಯುವ ಮಳೆಯಿಂದಾಗಿ ಹಲವಾರು ಅವಾಂತರಗಳು ಸಂಭವಿಸುತ್ತಿದ್ದು, ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಜು.19ರ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಫರಂಗಿಪೇಟೆ ನಿವಾಸಿ ಕಾರ್ತಿಕ್ ಮೃತಪಟ್ಟವರು. ಗಾಯಗೊಂಡವರ ಹೆಸರು, ಮಾಹಿತಿ ಲಭ್ಯವಾಗಿಲ್ಲ.
ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಬಳಿಯ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.
ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಸರಿಯಾದ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಪಲ್ಟಿಯಾಗಿ ಸುಮಾರು ಸಮಯ ಲಾರಿ ಅಡಿಯಲ್ಲಿ ಸಿಲುಕಿಕೊಂಡಿದ್ದ ಯುವಕರನ್ನು ಸ್ಥಳೀಯ ಯುವಕರು ಹರಸಾಹಸ ಪಟ್ಟು ಹೊರಗೆ ತೆಗೆದಿದ್ದಾರೆ. ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್ ಪ್ಲ್ಯಾನ್
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.