Puthila ಕಚೇರಿ ಮುಂಭಾಗ ತಲವಾರು ಪ್ರದರ್ಶನ ಪ್ರಕರಣ: ಆರೋಪಿಗಳಿಗೆ 5 ದಿನ ನ್ಯಾಯಾಂಗ ಬಂಧನ
Team Udayavani, Nov 11, 2023, 10:54 PM IST
ಪುತ್ತೂರು : ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ತಲವಾರು ಪ್ರದರ್ಶಿಸಿ ಮನೀಶ್ ಕುಲಾಲ್ ಅವರಿಗೆ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನ. 10ರಂದು ಮಧ್ಯಾಹ್ನ ಹಿಂಜಾವೇ ಮುಖಂಡ ಸಹಿತ 9 ಮಂದಿಯ ತಂಡ ತಲವಾರು ಝಳಪಿಸಿದ್ದು ಪ್ರಕರಣಕ್ಕೆ ಸಂಬಂಧಿಸಿ ಎಲ್ಲ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ನಗರ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.
ಆರೋಪಿಗಳಾದ ದಿನೇಶ್ ಪಂಜಿಗ, ಭವಿತ್, ಮನ್ವಿತ್, ಜಯಪ್ರಕಾಶ್, ಚರಣ್, ಮನೀಶ್, ವಿನೀತ್ ಹಾಗೂ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರನ್ನು ನ.11ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಧೀಶರು ನ.16ರ ತನಕ ನ್ಯಾಯಾಂಗ ಕಸ್ಟಡಿಗೆ ನೀಡಿದ್ದಾರೆ.
ರಕ್ಷಣೆ ಕೋರಿ ಮನವಿ
ಪುತ್ತಿಲ ಪರಿವಾರದ ಮನೀಶ್ ಕುಲಾಲ್ ಅವರ ಹೆತ್ತವರು ಮಗನಿಗೆ ರಕ್ಷಣೆ ನೀಡುವಂತೆ ನಗರ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.
ತಲವಾರು ಜತೆ ಬಂದಿದ್ದ ತಂಡ ನನ್ನ ಮಗನನ್ನು ಗುರಿಯಾಗಿರಿಸಿ ಕೊಂಡಿದ್ದಾರೆ. ನನ್ನ ಮಗನಿಗೆ ರಕ್ಷಣೆ ನೀಡುವಂತೆ ಮನೀಶ್ ತಂದೆ ಆನಂದ ಕುಲಾಲ್ ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.