ಬೆಂಗಳೂರಿನ ಕಟ್ಟಡದಲ್ಲಿ ಬೆಂಕಿ: ಪುತ್ತೂರಿನಲ್ಲಿ “ಅಗ್ನಿ’ ಕಣ್ಣು
Team Udayavani, Sep 23, 2021, 3:10 AM IST
ಪುತ್ತೂರು: ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡದ ಬೆನ್ನಲ್ಲೇ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಪುತ್ತೂರು ನಗರದಲ್ಲಿನ ಬಹುಮಹಡಿ ಕಟ್ಟಡಗಳಲ್ಲಿ ಅಗ್ನಿ ನಿಯಂತ್ರಣ ಸೇರಿದಂತೆ ಸುರಕ್ಷತೆ ನಿಯಮ ಪಾಲನೆಯಾಗುತ್ತಿದೆಯೇ ಎನ್ನುವ ಬಗ್ಗೆ ಅಗ್ನಿಶಾಮಕ ದಳ ಕಣ್ಣಿಟ್ಟಿದೆ.
ಕೆಲವು ಬಹುಮಹಡಿ ಕಟ್ಟಡಗಳಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸುವತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಹಲವು ದೂರು ಕೇಳಿ ಬಂದಿದೆ. ಇದೀಗ ಬೆಂಗಳೂರಿನ ಘಟನೆಯಿಂದ ಅಗ್ನಿಶಾಮಕ ಇಲಾಖೆ, ಸ್ಥಳೀಯಾಡಳಿತ ಕಟ್ಟಡಗಳ ಕಡೆ ಗಮನ ಹರಿಸಲು ಮುಂದಾಗಿದೆ.
ಹೈಕೋರ್ಟ್ ಸೂಚನೆ ನೀಡಿತ್ತು:
ಬಹುಮಹಡಿ ಕಟ್ಟಡಗಳಲ್ಲಿ ಅಗ್ನಿಸುರಕ್ಷತೆ ನಿಯಮಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ 2015 ರಲ್ಲಿ ಹೈಕೋರ್ಟ್ ಸೂಚನೆ ನೀಡಿತ್ತು. ಜೂನ್ 30ರೊಳಗೆ ಈ ಸಂಬಂಧ ಮಾಹಿತಿ ನೀಡಲು ಗಡುವು ನೀಡಿದ ಕಾರಣ ಅಂದು ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿಗಳು ಪುತ್ತೂರಿನಲ್ಲಿ ಕಟ್ಟಡಗಳ ಸಮೀಕ್ಷೆ ನಡೆಸಿದ್ದರು. ಅದಾದ ಬಳಿಕದ ಐದು ವರ್ಷಗಳಲ್ಲಿ ಕಟ್ಟಡಗಳ ಸಂಖ್ಯೆ ದುಪ್ಪಟ್ಟಾಗಿದ್ದು ಸುರಕ್ಷತೆ ಕ್ರಮ ಎಷ್ಟರ ಮಟ್ಟಿಗೆ ಪಾಲನೆ ಆಗಿದೆ ಎನ್ನುವ ಬಗ್ಗೆ ಪರಿಶೀಲಿಸಲು ಆಗ್ರಹ ಕೇಳಿ ಬಂದಿದೆ.
ಬೆಂಗಳೂರಿನ ಅಪಾರ್ಟ್ ಮೆಂಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ ಬಳಿಕ ಜಿಲ್ಲೆಯಲ್ಲಿನ ಕಟ್ಟಡಗಳ ಸುರಕ್ಷತೆಯ ಬಗ್ಗೆಯು ಪರಿಶೀಲನೆಗೆ ಸರಕಾರದಿಂದ ಸೂಚನೆ ಬರುವ ಸಾಧ್ಯತೆ ಇದೆ. ನಿಯಮ ಉಲ್ಲಂಘಿಸಿದರೆ ಅದರ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶ ಇದೆ. –ಭರತ್ ಕುಮಾರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ, ಮಂಗಳೂರು
ನಗರದ ಬಹುಮಹಡಿ ಕಟ್ಟಡಗಳಲ್ಲಿ ಸುರಕ್ಷತೆ ಕ್ರಮಗಳ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚಿಸಲಾಗುವುದು. ಅಗತ್ಯ ಸಂದರ್ಭ ಪರಿಶೀಲನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. –ಮಧು ಎಸ್. ಮನೋಹರ್, ಪೌರಾಯುಕ್ತ, ನಗರಸಭೆ ಪುತ್ತೂರು
-ಕಿರಣ್ ಪ್ರಸಾದ್ ಕುಂಡಡ್ಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.