Puttur; ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ 55 ಕೋ.ರೂ. ಪ್ರಸ್ತಾವನೆ
ಧರ್ಮಸ್ಥಳ, ಸುಬ್ರಹ್ಮಣ್ಯ ಮಾದರಿಯಲ್ಲಿ ಪುತ್ತೂರು ದೇವಸ್ಥಾನದ ಸಮಗ್ರ ಅಭಿವೃದ್ಧಿ
Team Udayavani, Dec 9, 2024, 12:38 PM IST
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಪ್ರವಾಸ ದೋದ್ಯಮ ಕ್ಷೇತ್ರವಾಗಿ ಪರಿವರ್ತಿಸಲು ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದು ಅನುದಾನಕ್ಕಾಗಿ ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಅಭಿವೃದ್ಧಿಗೆ ಸಂಬಂಧಿಸಿ ಕೆಲಸ ಕಾರ್ಯಗಳಿಗೆ ಮುಂದಡಿ ಇಡಲಾಗಿದೆ. ದೇವಸ್ಥಾನದ ಸುತ್ತ ಮುತ್ತಲಿರುವ ಅನಾದಿ ಕಾಲದ ಕಟ್ಟಡಗಳನ್ನು ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ.
55 ಕೋಟಿ ರೂ ಪ್ರಸ್ತಾವನೆ
ಕೇಂದ್ರ ಪ್ರವಾಸೋದ್ಯಮ ಇಲಾಖೆಯ ‘ಪ್ರಷಾದ್’ ಯೋಜನೆಯಡಿ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಶಾಸಕರು ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಇಲಾಖೆಗೆ ಅ. 25 ರಂದು ಪ್ರಸ್ತಾವನೆಯನ್ನು ಕಳುಹಿಸಿದ್ದರು. ಇದೇ ಪ್ರಸ್ತಾವನೆಯನ್ನು ರಾಜ್ಯ ಸರಕಾರದ ಮೂಲಕ ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ ಕಳುಹಿಸಲಾಗಿದೆ. ರಾಜ್ಯ ಸರಕಾರ ಕೂಡಾ ಈ ಯೋಜನೆಯಡಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನವನ್ನು ಸೇರಿಸಿ 55 ಕೋ.ರೂ. ಅನುದಾನವನ್ನು ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ. ಡಿ. 6 ರಂದು ಈ ಪ್ರಸ್ತಾವನೆಯನ್ನು ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ ಕಳುಹಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ವಿವರಿಸಿದ್ದಾರೆ.
ಕೇಂದ್ರ ಪ್ರವಾಸೋದ್ಯಮ ಇಲಾಖೆಯ ಪ್ರಷಾದ್ ಯೋಜನೆಯಡಿ ಅನುದಾನ ಮಂಜೂರಾದಲ್ಲಿ ಮಹಾದ್ವಾರ, ಘನತ್ಯಾಜ್ಯ ನಿರ್ವಹಣೆ, ದೇಗುಲದ ಕಚೇರಿ, ಮೂಲ ಸೌಕರ್ಯ, ಗೋಶಾಲೆ, ಮಂಟಪ, ವಿಐಪಿ ವ್ಯವಸ್ಥೆ, ಪ್ರಸಾದ ಕೌಂಟರ್, ಆವರಣಗೋಡೆ, ಅಡಿಟೋರಿಯಂ ಕಲಾಗ್ರಾಮ, ಯಾತ್ರಿ ನಿವಾಸ್, ಹೊಸ ವಿನ್ಯಾಸದ ಬೆಳಕಿನ ವ್ಯವಸ್ಥೆ, ಮತ್ತು ಲ್ಯಾಂಡ್ ಸ್ಕೇಪ್ ಇಲ್ಲಿ ನಿರ್ಮಾಣವಾಗಲಿದೆ ಎಂದವರು ಹೇಳಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡುವಂತೆ ಸಂಸದ ಬ್ರಿಜೇಶ್ ಚೌಟ ಅವರಿಗೆ ಮನವಿ ಮಾಡಲಾಗುತ್ತಿದೆ ಎಂದರು.
ಧರ್ಮಸ್ಥಳ, ಸುಬ್ರಹ್ಮಣ್ಯ ಮಾದರಿಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಅಭಿವೃದ್ಧಿಯಾಗಬೇಕು. ಅಲ್ಲಿಗೆ ಬರುವ ಭಕ್ತರು ಪುತ್ತೂರು ಕ್ಷೇತ್ರಕ್ಕೂ ಭೇಟಿ ನೀಡಬೇಕು. ಇದಕ್ಕೆ ಪೂರಕವಾಗಿ ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆಗೆ 55 ಕೋಟಿ ರೂ. ಅನುದಾನಕ್ಕೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.
– ಅಶೋಕ್ ರೈ, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.